Renukaswamy Case: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್
300 ಪುಟಗಳಿಗೂ ಅಧಿಕ ದಸ್ತಾವೇಜು ಹೊಂದಿರುವ ಅರ್ಜಿ
Team Udayavani, Oct 16, 2024, 7:15 AM IST
ಬೆಂಗಳೂರು: ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ನಗರದ ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತ ಜಾಮೀನು ಅರ್ಜಿಯನ್ನು ದರ್ಶನ್ ಪರ ವಕಾಲತ್ತು ವಹಿಸಿರುವ ಹೈಕೋರ್ಟ್ ವಕೀಲ ಎಸ್.ಸುನಿಲ್‌ಕುಮಾರ್ ಮಂಗಳವಾರ ಮಧ್ಯಾಹ್ನ ಹೈಕೋರ್ಟ್ ಫೈಲಿಂಗ್ ವಿಭಾಗಕ್ಕೆ ಸಲ್ಲಿಸಿದರು. 300 ಪುಟಗಳಿಗೂ ಅಧಿಕ ದಸ್ತಾವೇಜು ಹೊಂದಿರುವ ಈ ಅರ್ಜಿಗೆ ಸದ್ಯ ಎಫ್ಆರ್ ನಂಬರ್ ನೀಡಲಾಗಿದ್ದು ಅದರ ಕ್ರಿಮಿನಲ್ ಅರ್ಜಿ ಸಂಖ್ಯೆ ಇನ್ನಷ್ಟೇ ನಮೂದಾಗಬೇಕಿದೆ. ನಂತರವೇ ಅದು ನ್ಯಾಯಪೀಠದ ಮುಂದೆ ಬರಲಿದೆ ಅಥವಾ ಅವರ ಪರ ವಕೀಲರು ಮೆಮೊ ಸಲ್ಲಿಕೆಯ ಮೂಲಕ ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಸೂಕ್ತ ನ್ಯಾಯಪೀಠದಲ್ಲಿ ಮನವಿ ಮಾಡಲಿದ್ದಾರೆ.
ವಜಾಗೊಂಡಿದ್ದ ಜಾಮೀನು ಅರ್ಜಿ:
ದರ್ಶನ್ ಮತ್ತು ಸಂಗಡಿಗರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯವು ಸೋಮವಾರ ವಜಾಗೊಳಿಸಿತ್ತು. ಆರೋಪಿ ದರ್ಶನ್, ರೇಣುಕಸ್ವಾಮಿ ಹಲ್ಲೆ ಹಾಗೂ ಹತ್ಯೆ ವೇಳೆ ಘಟನಾ ಸ್ಥಳದಲ್ಲಿದ್ದರು ಎಂಬುದಕ್ಕೆ ಸಿಡಿಆರ್ ಸಾಕ್ಷ್ಯ ಇದೆ.
ದರ್ಶನ್ ಡಿಎನ್‌ಎ ಪರೀಕ್ಷೆಯಿಂದ ಘಟನಾ ಸ್ಥಳದಲ್ಲಿ ಇದ್ದರು ಎಂಬುದು ಪತ್ತೆಯಾಗುತ್ತದೆ. ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ. ಹೀಗಾಗಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಮನವಿ ಸರ್ಕಾರಿ ವಿಶೇಷ ಅಭಿಯೋಜಕರು ಕೋರ್ಟ್‌ನಲ್ಲಿ ವಾದಿಸಿದ್ದರು. ಈ ಎಲ್ಲ ಅಂಶಗಳನ್ನು ಮಾನ್ಯ ಮಾಡಿದ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.