Renukaswamy Case: ದರ್ಶನ್ಗೆ ಸಂಕಷ್ಟ?: ಪೊಲೀಸರು ಸುಪ್ರೀಂಗೆ ಹೋಗಲು ಅನುಮತಿ
ಪೊಲೀಸರಿಗೆ ಹಸುರು ನಿಶಾನೆ ತೋರಿದ ರಾಜ್ಯ ಸರಕಾರ
Team Udayavani, Dec 31, 2024, 7:20 AM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಮತ್ತು ತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. 7 ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನ ಮೊರೆ ಹೋಗಲು ರಾಜ್ಯ ಸರಕಾರ ಪೊಲೀಸರಿಗೆ ಹಸುರು ನಿಶಾನೆ ತೋರಿದೆ.
ಅಲ್ಲದೆ ಅಲ್ಲಿ ಸರಕಾರದ ಪರ ವಾದ ಮಂಡಿಸಲು ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾದ ಅನಿಲ್ ಸಿ. ನಿಶಾನಿ ಮತ್ತು ಸಿದ್ಧಾರ್ಥ್ ಲೂತ್ರಾ ಅವರನ್ನು ನೇಮಿಸಿ ಆದೇಶಿಸಲಾಗಿದೆ. ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜ್, ಅನುಕುಮಾರ್, ಲಕ್ಷ್ಮಣ್, ಜಗದೀಶ್ ಮತ್ತು ಪ್ರದೂಷ್ಗೆ ಹೈಕೋರ್ಟ್ ಡಿ. 13ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.
ಮತ್ತೂಂದೆಡೆ ರಾಜ್ಯ ಸರಕಾರದ ಅನುಮತಿ ಬೆನ್ನಲ್ಲೇ ಆರೋಪಿಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ಪ್ರಕ್ರಿಯೆಗಳು ಸಿದ್ಧವಾಗುತ್ತಿವೆ. ಈಗಾಗಲೇ ರಾಜ್ಯ ಸರಕಾರ ನೇಮಿಸಿರುವ ಸರಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಅವರ ಸಹಾಯದಿಂದ ಪ್ರಕರಣದ ದೋಷಾರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲಿಷ್ಗೆ ತರ್ಜುಮೆ ಮಾಡಿಸಲು ಮುಂದಾಗಿದ್ದಾರೆ. ಹೀಗಾಗಿ ಇನ್ನು 6 ದಿನಗಳಲ್ಲಿ ದಾಖಲೆಗಳ ಸಮೇತ ಅರ್ಜಿ ಸಿದ್ಧಪಡಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.