ಸಾಲದ ಕಂತು ಮರುಪಾವತಿಗೆ ಜೂನ್ ಅಂತ್ಯದ ವರೆಗೂ ಅವಕಾಶ
Team Udayavani, Mar 28, 2020, 5:45 AM IST
ಬೆಂಗಳೂರು: ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಸಾಲದ ಕಂತು ಪಾವತಿಗೆ ಜೂನ್ ಅಂತ್ಯದವರೆಗೂ ಕಾಲಾವಕಾಶ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್‌ವೈ, ಕೋವಿಡ್ -19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಟ್ರಾಕ್ಟರ್ ಟ್ರಿಲ್ಲರ್, ಬೆಳೆ ಸಾಲ ಬಡ್ಡಿ ಸುಸ್ತಿ ಮನ್ನಾದ ಅವಧಿಯನ್ನು ಕೂಡ ಜೂ.30ರ ವರೆಗೆ ವಿಸ್ತರಿಸಲಾಗಿದೆ. ಕೋವಿಡ್ -19 ತಡೆಗಟ್ಟುವ ನಿಟ್ಟಿನಲ್ಲಿ ಏನೆಲ್ಲ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಪುಟದಲ್ಲಿ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ.
ಮೋದಿ ಕರೆ: ಕಟ್ಟು ನಿಟ್ಟಿನ ಕ್ರಮ
ಪ್ರಧಾನಿ ಮೋದಿ ಶುಕ್ರವಾರ ತನಗೆ ದೂರವಾಣಿ ಕರೆ ಮಾಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದ್ದಾರೆ. ಅದರಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ಆಹಾರ ಧಾನ್ಯಗಳ ಪೂರೈಕೆಗೆ ಕ್ರಮ
ಅಗತ್ಯ ಆಹಾರ ಧಾನ್ಯ, ಮಾಂಸ, ಹಣ್ಣು , ತರಕಾರಿ ಪೂರೈಕೆಗೆ ತೊಂದರೆ ಆಗದಂತೆ ಸರಕಾರ ಕ್ರಮ ಕೈಗೊಂಡಿದೆ. ಅಗತ್ಯವಾದರೆ ಹಾಪ್‌ಕಾಮ್ಸ್, ಎಪಿಎಂಸಿ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ವ್ಯವಸ್ಥೆಯೂ ಕಲ್ಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ತಿಂಗಳಿಗಾಗುವಷ್ಟು ಆಹಾರ ಪದಾರ್ಥ
ಮಾತೃಪೂರ್ಣ ಯೋಜನೆಯಡಿ ರಾಜ್ಯದ 7 ಲಕ್ಷ ಫಲಾನುಭವಿಗಳಿಗೆ 1 ತಿಂಗಳಿಗೆ ಆಗುವಷ್ಟು ಆಹಾರ ಪದಾರ್ಥಗಳನ್ನು ನೀಡಲು ಸರಕಾರ ನಿರ್ಧರಿಸಿದೆ. ಮಾ. 31ರೊಳಗೆ ಅಂಗನವಾಡಿ ಕಾರ್ಯಕರ್ತೆಯರು ಇದನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.