Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

ಛತ್ರಪತಿ ಶಿವಾಜಿ ಟರ್ಮಿನಲ್‌- ಮಂಗಳೂರು ರೈಲಿಗೆ ವಿಶೇಷ ಬೋಗಿ ಅಳವಡಿಸಿ ಊರಿಗೆ ಕರೆಸಿಕೊಂಡ ಸಂಸದರು

Team Udayavani, Sep 29, 2024, 7:45 AM IST

Kota-poojary

ಕುಂದಾಪುರ: ಉತ್ತರ ಭಾರತ ಪ್ರವಾಸಕ್ಕೆ ತೆರಳಿದ್ದ ಉಡುಪಿ ಜಿಲ್ಲೆಯ ಸುಮಾರು 80 ಮಂದಿ ಹಿರಿಯ ನಾಗರಿಕರಿದ್ದ ತಂಡವು ರೈಲುಗಳ ಸಂಚಾರ ವ್ಯತ್ಯಯದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ವಿಷಯ ತಿಳಿದ ಕೂಡಲೇ ಸ್ಪಂದಿಸಿದ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ  ಪರ್ಯಾಯ ವ್ಯವಸ್ಥೆ ಮೂಲಕ ನೆರವಾಗಿದ್ದಾರೆ.

ಉತ್ತರ ಭಾರತ ಪ್ರವಾಸ ಮುಗಿಸಿ ಮುಂಬಯಿಗೆ ಬಂದು ಮತ್ಸ್ಯಗಂಧ ರೈಲಿನಲ್ಲಿ ಊರಿಗೆ ಬರಬೇಕಿದ್ದ ಉಡುಪಿ ಜಿಲ್ಲೆಯ ಈ ತಂಡವು ರಾಂಚಿ – ಮುಂಬಯಿ ಎಕ್ಸ್‌ಪ್ರೆಸ್‌ ರೈಲು 10 ಗಂಟೆ ವಿಳಂಬದಿಂದಾಗಿ ಮಾರ್ಗ ಮಧ್ಯೆ ಸಿಲುಕಿದ್ದರು. ಈ ತಂಡ ಮುಂಬಯಿ ತಲುಪುವ ಮೊದಲೇ ಮತ್ಸ್ಯಗಂಧ ರೈಲು ಹೊರಟಾಗಿತ್ತು. ಆದ್ದರಿಂದ ತಂಡವು ಸಂಸದರನ್ನು ಸಂಪರ್ಕಿಸಿತು. ಕೂಡಲೇ ಸಂಸದರು ರೈಲ್ವೇ ಸಚಿವಾಲಯದ ಜತೆ ಮಾತನಾಡಿ, ಮಂಗಳೂರಿಗೆ ಬರಬೇಕಾದ ಸಿಎಸ್‌ಟಿ- ಮಂಗಳೂರು ರೈಲಿಗೆ ವಿಶೇಷ ಬೋಗಿಯ ವ್ಯವಸ್ಥೆ ಮಾಡಿದರು.

ರೈಲು ಮಂಡಳಿಯಿಂದ ಈ ಬಗ್ಗೆ ಸೆಂಟ್ರಲ್‌ ರೈಲ್ವೆಗೆ ಆದೇಶ ಬಂದ ಕೂಡಲೇ ಹೆಚ್ಚುವರಿ ಬೋಗಿ ಅಳವಡಿಕೆ ನಡೆದಿದ್ದು, ಸಮಸ್ಯೆಗೆ ಸಿಲುಕಿದ್ದ ತಂಡವು ಈ ರೈಲಿನ ವಿಶೇಷ ಬೋಗಿಯಲ್ಲಿ ಊರಿಗೆ ಪ್ರಯಾಣ ಬೆಳೆಸಿದರು. ಇದಕ್ಕೆ ಸಹಕರಿಸಿದ ರೈಲ್ವೇ ಖಾತೆ ರಾಜ್ಯ ಸಚಿವ ಸೋಮಣ್ಣ ಹಾಗೂ ಅವರ ಕಚೇರಿಯ ಸಿಬಂದಿಗೆ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರತಿ ವರ್ಷದಂತೆ ಈ ಬಾರಿಯೂ ನಾನು ಜಿಲ್ಲೆಯ ವಿವಿಧೆಡೆಗಳಿಂದ 50 ಕ್ಕೂ ಹೆಚ್ಚು ಮಂದಿಯನ್ನು ಕಾಶಿ, ಅಯೋಧ್ಯೆಯಂತಹ ತೀರ್ಥ ಕ್ಷೇತ್ರಗಳಿಗೆ ಕರೆದೊಯ್ದಿದ್ದೆ. ಹಿಂದಿರುಗುವಾಗ ಮತ್ಸ್ಯಗಂಧ ರೈಲು ತಪ್ಪಿದ್ದರಿಂದ ಕಂಗೆಟ್ಟು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಸಹಾಯ ಕೋರಿದ್ದು, ಅವರು ಕೂಡಲೇ ಸ್ಪಂದಿಸಿ ಸೂಕ್ತ ವ್ಯವಸ್ಥೆ ಮಾಡಿದರು ಎಂದು ತಂಡದ ನೇತೃತ್ವ ವಹಿಸಿದ್ದ ಸಾಲಿಗ್ರಾಮದ ಚೇಂಪಿ ಪ್ರಕಾಶ್‌ ಭಟ್‌ ತಿಳಿಸಿದ್ದಾರೆ.

“ನಮ್ಮ ಭಾಗದಿಂದ ಅಯೋಧ್ಯೆ, ಕಾಶಿ ಕಡೆಗೆ ತೆರಳಿದ್ದ ಯಾತ್ರಾರ್ಥಿಗಳು ಹಿಂದಿರುಗುವಾಗ ಮತ್ಸ್ಯಗಂಧ ರೈಲು ತಪ್ಪಿ ಹೋದುದು ನನ್ನ ಗಮನಕ್ಕೆ ಬಂದಿತ್ತು. ಕೂಡಲೇ ರೈಲ್ವೆ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿಕೊಂಡೆ. ತ್ವರಿತಗತಿಯಲ್ಲಿ ಅವರು ಸಹ ಸ್ಪಂದಿಸಿದ್ದು, ಬೇರೊಂದು ರೈಲಿಗೆ ವಿಶೇಷ ಬೋಗಿ ಅಳವಡಿಸಿ ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಊರಿಗೆ ಕಳುಹಿಸಿದ್ದಾರೆ. ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವ್‌, ರಾಜ್ಯ ಸಚಿವ ಸೋಮಣ್ಣ ಹಾಗೂ ಅಧಿಕಾರಿಗಳಿಗೆ ಕೃತಜ್ಞತೆಗಳು.”
– ಕೋಟ ಶ್ರೀನಿವಾಸ ಪೂಜಾರಿ, ಸಂಸದ

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

002

Karkala: ಎದೆ ನೋವಿನಿಂದ ಕೃಷಿಕ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.