Reservation for Kannadigas: ಖಾಸಗಿ ಸಂಸ್ಥೆಗಳ ಕನ್ನಡಿಗರಿಗೆ ಮೀಸಲು; ಉದ್ಯಮಿಗಳ ಟೀಕೆ
ರಾಜ್ಯ ಸರ್ಕಾರದ ನಿರ್ಧಾರ ಸಮರ್ಥಿಸಿದ ಸಚಿವರು
Team Udayavani, Jul 17, 2024, 6:34 PM IST
ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರು, ಆಡಳಿತಾತ್ಮಕೇತರ ಹುದ್ದೆಗಳಿಗೆ ಶೇ.75 ಹಾಗೂ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಕನ್ನಡಿಗರ ನೇಮಕಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿರುವುದಕ್ಕೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪರ ವಿರೋಧ ಚರ್ಚೆಯಾಗುತ್ತಿದ್ದು ಇದಕ್ಕೆ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರ್ಕಾರದ ವಿಧೇಯಕಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಉದ್ಯಮಿ ಟಿ.ವಿ. ಮೋಹನ್‌ದಾಸ್ ಪೈ ” ಉದ್ಯೋಗಕ್ಕಾಗಿ ಕನ್ನಡಿಗರನ್ನು ಉತ್ತೇಜಿಸಲು ಬಯಸಿದರೆ ನೀವು (ಕರ್ನಾಟಕ ಸರ್ಕಾರ) ಉನ್ನತ ಶಿಕ್ಷಣಕ್ಕಾಗಿ
ಹೆಚ್ಚಿನ ಹಣವನ್ನು ವ್ಯಯಿಸಿ ಅವರಿಗೆ ಉತ್ತಮ ತರಬೇತಿ ನೀಡಿ, ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಹಣ ಒದಗಿಸಿ ಇಂಟರ್ನ್‌ಶಿಪ್‌ಗಳು, ಅಪ್ರೆಂಟಿಸ್‌ಶಿಪ್ ಕಾರ್ಯಕ್ರಮಗಳಿಗೆ ಹೆಚ್ಚಿನ ಹಣ ಖರ್ಚು ಮಾಡಿ. ಆಗ ಅವರೆಲ್ಲರೂ ಕೌಶಲ್ಯವಂತಾರಾಗುತ್ತಾರೆ. ಈ ರೀತಿ ಅಲ್ಲ. ಈ ಮೂಲಕ ನೀವು ಏನನ್ನು ಸಾಧಿಸಲು ಪ್ರಯತ್ನಿಸುತ್ತಿದ್ದೀರಿ?ʼ ಎಂದು ಪ್ರಶ್ನಿಸಿದರು.
#WATCH | Bengaluru: Businessman and philanthropist TV Mohandas Pai says, “…If you want to promote Kannadigas for jobs, spend more money on higher education. Give training to them. Spend more money on skill development. Spend more money on internships, spend more money on… https://t.co/qDQgUeSAXx pic.twitter.com/Uzu2VVh8cX
— ANI (@ANI) July 17, 2024
ಸಂಪುಟದ ನಿರ್ಧಾರ ಸಮರ್ಥಿಸಿದ ಸಚಿವರು:
ಉದ್ಯಮಿಗಳ ಟೀಕೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ “ಯಾರೂ ಭಯಪಡುವ ಅಗತ್ಯವಿಲ್ಲ. ನಾವು ಸುದೀರ್ಘ ಸಮಾಲೋಚನೆಗಳ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯ ನಿವಾಸಿಗಳಿಗೆ ಉದ್ಯೋಗಗಳ ಒದಗಿಸುವುದು ಮತ್ತು ಜತೆ ಜತೆಗೇ ಹೂಡಿಕೆಗಳನ್ನು ಆಕರ್ಷಿಸುವುದು ರಾಜ್ಯ ಸರ್ಕಾರದ ಗುರಿಯಾಗಿದೆ ಎಂದು ಹೇಳಿದ್ದಾರೆ.
ಈ ಮಸೂದೆಯು ಕಾರ್ಮಿಕ ಇಲಾಖೆಯ ಸಲಹೆಯಾಗಿದೆ. ಈ ಬಗ್ಗೆ ಕೈಗಾರಿಕೆ ಅಥವಾ ಮಾಹಿತಿ ತಂತ್ರಜ್ಞಾನ ಇಲಾಖೆಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಆದ್ದರಿಂದ, ನಮ್ಮೊಂದಿಗೆ ಮತ್ತು ಇತರ ಮುಖಂಡರೊಂದಿಗೆ ಸಮಾಲೋಚನೆ ನಡೆಸುವಂತೆ ನಾವು ಸಿಎಂಗೆ ಮನವಿ ಮಾಡಿದ್ದೇವೆ. ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ನೀಡುವುದನ್ನು ನಾವು ಹೇಗೆ ಸಾಧ್ಯವಾಗಿಸಬಹುದು ಎಂಬ ಬಗ್ಗೆ ಒಮ್ಮತಕ್ಕೆ ಬರಲಿದ್ದೇವೆ. ನಾವು ಪೈ ಹಾಗೂ ಮಜುಂದಾರ್ ಶಾ ಅವರೊಂದಿಗೆ ಸಮಾಲೋಚನೆ ನಡೆಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಸಚಿವ ಎಂ.ಬಿ.ಪಾಟೀಲ್ ಅಭಯ:
ಮೀಸಲಾತಿ ವಿಚಾರವಾಗಿ ಕೈಗಾರಿಕೋದ್ಯಮಿಗಳ ಜತೆ ಪುನರ್ ಚರ್ಚೆಗೆ ಸಿದ್ಧ ಎಂದು ಸಚಿವ ಎಂ.ಬಿ. ಪಾಟೀಲ್ ಕೂಡ ಹೇಳಿದ್ದಾರೆ. ನಾವು ಚೀನಾದಂತಹ ದೇಶದೊಂದಿಗೆ ಸೆಣಸಾಡಬೇಕಿದೆ. ಕನ್ನಡಿಗರನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಸಿಎಂ, ಡಿಸಿಎಂ ಹಾಗೂ ಕಾರ್ಮಿಕ ಸಚಿವರು, ಕಾನೂನು ಸಚಿವರ ಜೊತೆಗೆ ಚರ್ಚಿಸುತ್ತೇನೆ. ಕನ್ನಡಿಗರ ರಕ್ಷಣೆಯ ಜೊತೆಗೆ ಉದ್ಯಮಗಳ ರಕ್ಷಣೆಯೂ ಆಗಬೇಕಿದೆ ಎಂದು ಹೇಳಿದ್ದಾರೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ ಕನ್ನಡಿಗ ಉದ್ಯೋಗಿಗಳಲ್ಲಿ ಅಂತಹ ಕೌಶಲ್ಯಗಳು
ಲಭ್ಯವಿಲ್ಲದಿದ್ದರೆ, ಜನರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿ ಅವರಿಗೆ ಇಲ್ಲಿ ಕೆಲಸ ನೀಡಬಹುದು.
ಸರ್ಕಾರವು ಸ್ಥಳೀಯವಾಗಿ ಲಭ್ಯವಿರುವ ಕೌಶಲ್ಯಗಳಿಗೆ ಆದ್ಯತೆ ನೀಡಲು ಕಾನೂನನ್ನು ತರಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.