Reservation: ಜಿ.ಪಂ., ತಾ.ಪಂ. ಮೀಸಲು: ಸಮಯ ಕೇಳಿದ ರಾಜ್ಯ ಸರಕಾರ
ಸೆ.30ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Team Udayavani, Sep 6, 2024, 1:46 AM IST
ಬೆಂಗಳೂರು: ರಾಜ್ಯದ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೆ 3 ವಾರ ಕಾಲಾವಕಾಶ ಕೇಳಿದೆ.
ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು 2023ರಲ್ಲಿ ಸಲ್ಲಿಸಲಾದ 2 ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳು ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ ನ್ಯಾ| ಕೆ. ರಾಜೇಶ್ ರೈ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದ್ದವು.
ಈ ವೇಳೆ ರಾಜ್ಯ ಸರಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಜರಾಗಿ, ಎಲ್ಲ 31 ಜಿಲ್ಲೆಗಳಲ್ಲಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಪುನರ್ವಿಂಗಡಣೆ ಕಾರ್ಯ ಮುಗಿದಿದೆ. ಈಗ ಮೀಸಲಾತಿ ನಿಗದಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಅದಕ್ಕಾಗಿ 3 ವಾರ ಕಾಲಾವಕಾಶಬೇಕು ಎಂದು ಕೋರಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಸೆ. 30ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.