Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ
ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ, ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಳ್ಳುವ ಎಚ್ಚರಿಕೆ
Team Udayavani, Oct 18, 2024, 11:01 PM IST
ಬೆಂಗಳೂರು: ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ಕಾರ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಬೇಡಿಕೆ ಈಡೇರಿಸಬೇಕು. ಇಲ್ಲದೆ ಹೋದರೆ ಡಿಸೆಂಬರ್ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಸವ ಜಯಮೃತ್ಯುಂಜಯ ಶ್ರೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಲಿಂಗಾಯತ ಸಮುದಾಯದ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರಲಿಲ್ಲ. ಇದರಿಂದ ಸಿಟ್ಟಾದ ಶ್ರೀಗಳು ಬಿಜೆಪಿ ಮುಖಂಡ ವೀರಣ್ಣ ಕಡಾಡಿ, ಬಸವನ ಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಸಮುದಾಯದ ವಕೀಲರ ಜತೆ ಗಾಂಧಿಭವನದಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶ್ರೀಗಳು, ಸರ್ಕಾರ ನಿರ್ಧಾರದಿಂದ ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಅಸ ಮಾ ಧಾ ನ ಗೊಂಡಿ ದೆ. ಆ ಹಿನ್ನೆಲೆಯಲ್ಲಿ ಸರ್ಕಾರ ಚಳಿಗಾಲದ ಅಧಿವೇಶನಕ್ಕೂ ಮುನ್ನ ಬೇಡಿಕೆ ಈಡೇರಿಸಬೇಕು. ಇಲ್ಲದೆ ಹೋದರೆ ಬೆಳಗಾವಿಯ ಸುವರ್ಣಸೌಧ ಮುಂದೆ ಟ್ರ್ಯಾಕ್ಟರ್ ನಿಲ್ಲಲಿವೆ. ಎಲ್ಲ ಲಿಂಗಾಯತ ಸಮುದಾಯಗಳು ಒಟ್ಟಾಗಿ ಸೇರಿ ಹೋರಾಟ ನಡೆಸಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.