Mohan Bhagwat: ಸಮಾಜದಲ್ಲಿ ಅಸಮಾನತೆ ಇರೋವವರೆಗೂ ಮೀಸಲಾತಿ ಮುಂದುವರಿಯಬೇಕು: ಭಾಗವತ್
ನಾವು ಸಂವಿಧಾನದಲ್ಲಿ ಒದಗಿಸಿರುವ ಮೀಸಲಾತಿಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ
Team Udayavani, Sep 7, 2023, 10:22 AM IST
ನವದೆಹಲಿ: ನಮ್ಮ ಸಮಾಜದಲ್ಲಿ ತಾರತಮ್ಯ ಹೋಗಿಲ್ಲ ಮತ್ತು ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:Measles: ಕರಾವಳಿಯಲ್ಲಿ ಉಲ್ಬಣಿಸಿದ ದಡಾರ… ಕಳೆದ ವರ್ಷದಿಂದ ಈ ಬಾರಿ ಏರಿಕೆ!
ಬುಧವಾರ (ಸೆಪ್ಟೆಂಬರ್ 6) ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 1947ರಲ್ಲಿ ಭಾರತದಿಂದ ಪ್ರತ್ಯೇಕಗೊಂಡವರು ಈಗ ತಾವು ತಪ್ಪು ಮಾಡಿದ್ದೇವೆ ಎಂದು ಭಾವಿಸುತ್ತಿರುವಂತೆ, ಇಂದಿನ ಯುವಪೀಳಿಗೆ ವಯಸ್ಕರಾಗುವ ಮೊದಲು ಅಖಂಡ ಭಾರತ ಅಥವಾ ಅವಿಭಜಿತ ಭಾರತದ ಕನಸು ನನಸಾಗಲಿದೆ ಎಂದರು.
ಮಹಾರಾಷ್ಟ್ರದಲ್ಲಿ ಮೀಸಲಾತಿಗಾಗಿ ಮರಾಠ ಸಮುದಾಯದ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮೀಸಲಾತಿ ಕುರಿತು ಮೋಹನ್ ಭಾಗವತ್ ಈ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ನಮ್ಮವರನ್ನೇ ನಾವು ಕತ್ತಲೆಯಲ್ಲಿ ಇರಿಸಿದ್ದೇವೆ. ನಾವು ಅವರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ. ಇದರ ಪರಿಣಾಮ ಇದು 2000 ವರ್ಷಗಳವರೆಗೂ ಮುಂದುವರೆಯಿತು. ನಾವು ಅವರಿಗೆ ಸಮಾನತೆಯನ್ನು ನೀಡುವವರೆಗೆ, ಕೆಲವು ವಿಶೇಷ ಪರಿಹಾರಗಳನ್ನು ಒದಗಿಸಬೇಕಾಗುತ್ತದೆ. ಇದರಲ್ಲಿ ಮೀಸಲಾತಿಯೂ ಕೂಡಾ ಒಂದು. ಹಾಗಾಗಿ ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು. ನಾವು ಸಂವಿಧಾನದಲ್ಲಿ ಒದಗಿಸಿರುವ ಮೀಸಲಾತಿಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇವೆ ಎಂದು ಭಾಗವತ್ ಹೇಳಿದರು.
ಮೀಸಲಾತಿ ಎಂದರೆ ಗೌರವವನ್ನು ನೀಡುವುದಾಗಿದೆ. ಇದು ಆರ್ಥಿಕ ಅಥವಾ ರಾಜಕೀಯ ಸಮಾನತೆಯನ್ನು ಖಚಿತಪಡಿಸುವ ವಿಷಯವಲ್ಲ ಎಂದು ಭಾಗವತ್ ತಿಳಿಸಿದ್ದಾರೆ. ಅಸಮಾನತೆಯನ್ನು ಎದುರಿಸುತ್ತಿರುವ ಸಮುದಾಯಗಳು 2000 ವರ್ಷಗಳಿಂದ ನೋವು ಅನುಭವಿಸುತ್ತಿದ್ದರೆ, ನಾವು (ತಾರತಮ್ಯ ಎದುರಿಸದಿರುವವರು) ಇನ್ನೂ 200 ವರ್ಷಗಳವರೆಗೆ ನಾವು ಏಕೆ ಕೆಲವು ಸಮಸ್ಯೆಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಭಾಗವತ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.