Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
ಇವಿಎಂ ಇರುವ ತನಕ ಬಿಜೆಪಿಗೇ ಗೆಲುವು, ಈ ಬಗ್ಗೆ ಶೀಘ್ರ ಚುನಾವಣ ಆಯೋಗಕ್ಕೆ ದೂರು
Team Udayavani, Nov 25, 2024, 7:45 AM IST
ಬೆಂಗಳೂರು: “ಎಲ್ಲಿಯವರೆಗೆ ಇವಿಎಂ ಇರುತ್ತದೆಯೋ ಅಲ್ಲಿಯವರೆಗೆ ಬಿಜೆಪಿಯೇ ಗೆಲ್ಲುತ್ತಿರುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ. ಹ್ಯಾಕ್ ಮಾಡು ವುದರಲ್ಲಿ ಬಿಜೆಪಿಗರು ನಿಪುಣರು. ಈ ಸಂಬಂಧ ಕೇಂದ್ರ ಚುನಾವಣ ಆಯೋ ಗದ ಕದ ತಟ್ಟಲು ತೀರ್ಮಾನಿಸಿದ್ದೇವೆ’ ಎಂದು ಗೃಹ ಸಚಿವ ಡಾ| ಪರಮೇಶ್ವರ್ ತಿಳಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನ ಸಭಾ ಚುನಾವಣ ಫಲಿತಾಂಶವು ಇವಿಎಂ ವ್ಯವಸ್ಥೆಯನ್ನು ಅನುಮಾನದಿಂದ ನೋಡು ವಂತೆ ಮಾಡಿದೆ. ನಮ್ಮ ನಿರೀಕ್ಷೆಗಳೆಲ್ಲವೂ ಉಲ್ಟಾ ಆಗಿವೆ. ಇವಿಎಂಗಳನ್ನು ಅತ್ಯಂತ ಕೌಶಲದಿಂದ ನಿಯಂತ್ರಣ ಮಾಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿ ದರು. ಈ ಕಾರಣಕ್ಕಾಗಿಯೇ ನಾವು ಬ್ಯಾಲೆಟ್ ಪೇಪರ್ ಮರಳಿ ತರಬೇಕೆಂದು ಮನವಿ ಮಾಡುತ್ತಿದ್ದೇವೆ. ಆದರೆ ಚುನಾವಣ ಆಯೋಗ ಇದನ್ನು ನಿರಾಕರಿಸುತ್ತಲೇ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹ್ಯಾಕ್: ಬಿಜೆಪಿಗರು ನಿಪುಣರು
ಹ್ಯಾಕ್ ಮಾಡುವುದರಲ್ಲಿ ಬಿಜೆಪಿಗರು ನಿಪುಣರು. ಎಲ್ಲಿಯವರೆಗೆ ಇವಿಎಂ ಇರು ತ್ತದೆಯೋ ಅಲ್ಲಿಯವರೆಗೆ ಚುನಾವಣೆಗಳಲ್ಲಿ ಬಿಜೆಪಿಯೇ ಗೆಲ್ಲುತ್ತಿರುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ. ಝಾರ್ಖಂಡ್‌ನಲ್ಲಿ ಯಾಕೆ ಮಾಡಿಲ್ಲ ಅಂದರೆ, ಕೆಲವು ಕಡೆ ಬೇಕೆಂದೇ ಬಿಟ್ಟು ಬಿಡುತ್ತಾರೆ. ಇವಿಎಂ ಹ್ಯಾಕ್ ಮಾಡಲು ಆಗುವುದಿಲ್ಲ ಎಂದು ಈ ಮೂಲಕ ಜನರನ್ನು ನಂಬಿಸುವ ತಂತ್ರಗಾರಿಕೆ ಅವರದ್ದಾಗಿದೆ. ಗೆದ್ದೇ ಗೆಲ್ಲುತ್ತೇವೆ ಎಂದು ಖಚಿತವಾಗಿರುವ ಕಡೆ ಹಾಗೇ ಬಿಡುತ್ತಾರೆ. ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಳಿಕ ದೊಡ್ಡ ನಾಯಕತ್ವ ಇರಲಿಲ್ಲ. ಆ ಕಾರಣಕ್ಕಾಗಿ ನಮ್ಮ ರಾಜ್ಯವನ್ನು ಬಿಟ್ಟರು ಎಂದು ಪರಮೇಶ್ವರ್ ಸಮಜಾಯಿಷಿ ನೀಡಿದರು.
ಚುನಾವಣ ಆಯೋಗಕ್ಕೆ ಮನವಿಗೆ ನಿರ್ಧಾರ
ಪಕ್ಷದ ಮುಖಂಡರು ಈ ಬಗ್ಗೆ ಚರ್ಚೆ ನಡೆಸಿದ್ದು, ಇವಿಎಂ ಸಮಸ್ಯೆಗೆ ಸಂಬಂಧ ಪಟ್ಟಂತೆ ಚುನಾವಣ ಆಯೋಗಕ್ಕೆ ಮನವಿ ಮಾಡಲು ನಿರ್ಧಾರ ಮಾಡಲು ಚಿಂತಿಸಿ ದ್ದೇವೆ. ಪಕ್ಷ ಅಂತಿಮವಾಗಿ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದರು. ಬಹಳಷ್ಟು ಕಡೆ ಇವಿಎಂ ತಿರುಚಿದ್ದಾರೆ ಎಂಬ ಬಗ್ಗೆ ಚರ್ಚೆ ಆಯಿತು. ಬಿಜೆಪಿಯವರ “ಲಾಡ್ಲಿ ಬೆಹನ್’ ಸಾಕಷ್ಟು ಪ್ರಭಾವ ಬೀರಿತು. ಅವರು 6 ತಿಂಗಳು ಮೊದಲು ಕೊಟ್ಟರು. ಇದೆಲ್ಲವೂ ಅವರ ಕೈ ಹಿಡಿದಿದೆ ಎಂದರು.
ದಿಲ್ಲಿಯ ಆರೆಸ್ಸೆಸ್ ಕಚೇರಿಯಲ್ಲಿ 2 ಸಾವಿರಕ್ಕೂ ಅಧಿಕ ಜನ ಕೆಲಸ ಮಾಡುತ್ತಿದ್ದು, ಅದರಲ್ಲಿ ಸಾಕಷ್ಟು ಜನ ಸಾಫ್ಟ್‌ವೇರ್ ಎಂಜಿನಿಯರ್‌ಗಳಿದ್ದಾರೆ. ಇವರ ಮೂಲಕ ಬಿಜೆಪಿ ನಾಯಕರು ಇವಿಎಂಗಳನ್ನು ತಮಗೆ ಬೇಕಾದ ರೀತಿಯಲ್ಲಿ ತಿರುಚುವ ಯತ್ನ ಮಾಡುತ್ತಿದ್ದಾರೆ. – ಎ. ವಸಂತಕುಮಾರ್, ವಿಧಾನ ಪರಿಷತ್ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.