ರೇವಣ್ಣ ಕೂಡ ಸಿಎಂ ಸ್ಥಾನಕ್ಕೆ ಅರ್ಹ: ಸಿದ್ದರಾಮಯ್ಯ
ಖರ್ಗೆಗೆ ಸಿಎಂಗಿಂತಲೂ ಉನ್ನತ ಹುದ್ದೆಯ ಅರ್ಹತೆ ಇದೆ
Team Udayavani, May 16, 2019, 11:48 AM IST
ಬೆಂಗಳೂರು : ಎಚ್.ಡಿ.ರೇವಣ್ಣ ಅವರೂ ಸಿಎಂ ಸ್ಥಾನದ ಅರ್ಹತೆ ಉಳ್ಳವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಚಿಂಚೋಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ತೆರಳಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರ್ಕಾರದಲ್ಲಿ ಖರ್ಗೆ ಅವರೇ ಮುಖ್ಯಮಂತ್ರಿಯಾಗಬೇಕಿತ್ತು ಎಂದು ಹೇಳಿಕೆ ನೀಡಿದ್ದರು.
ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದೇ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಲಿ. ಖರ್ಗೆ ಅವರನ್ನು ಸಿಎಂ ಮಾಡಲಿ ಎಂದು ಸವಾಲು ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್ಡಿಡಿ, ಎಚ್ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.