Revise Taxation: ಆರೋಗ್ಯ ವಿಮೆ ಜಿಎಸ್ಟಿ ಕಡಿತ ಮಾಡಿ: ಪ್ರಧಾನಿಗೆ ಸಚಿವ ದಿನೇಶ್ ಪತ್ರ
ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮ
Team Udayavani, Sep 7, 2024, 6:20 AM IST
ಬೆಂಗಳೂರು: ಆರೋಗ್ಯ ವಿಮೆಯ ಮೇಲೆ ವಿಧಿಸಿದ ಶೇ. 18ರಷ್ಟು ಜಿಎಸ್ಟಿಯನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರ ಬರೆದಿದ್ದಾರೆ.
ಸೆ. 9ರಂದು ನಡೆಯಲಿರುವ ಜಿಎಸ್ಟಿ ಕೌನ್ಸಿಲ್ನಲ್ಲಿ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗಾಗಿ ಆರೋಗ್ಯ ವಿಮೆಯ ಮೇಲಿನ ತೆರಿಗೆಯನ್ನು ಮರು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. 2017ರಿಂದ ಆರೋಗ್ಯ ವಿಮೆಯ ಮೇಲೆ ಶೇ. 18ರಷ್ಟು ಜಿಎಸ್ಟಿ ಹೇರಿದ್ದು, ಇದರಿಂದ ಆರೋಗ್ಯ ವಿಮೆ ದುಬಾರಿಯಾಗಿದೆ.
ಹೆಚ್ಚುತ್ತಿರುವ ವೆಚ್ಚವು ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತಿದೆ. ಆರೋಗ್ಯ ವಿಮೆ ಖರೀದಿಸಲು ಮುಂದಾಗಬೇಕಿರುವ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಆರೋಗ್ಯ ವಿಮೆಯಿಂದ ದೂರ ಉಳಿಯುತ್ತಿದ್ದಾರೆ.
ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ 2018ರಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
ಕೇಂದ್ರ ಸರಕಾರವು 2047ರ ವೇಳೆಗೆ “ಸಾರ್ವತ್ರಿಕ ವಿಮಾ ಕವರೇಜ್’ ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ. ಆದರೆ ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.