ರೈಸ್ ಪುಲ್ಲಿಂಗ್: ಉದ್ಯಮಿಗೆ ಆಸ್ತಿ ವಂಚನೆ… ಹಾಸನದ ಮಹಿಳೆ ಸೇರಿ ಐವರ ಬಂಧನ
Team Udayavani, Oct 22, 2024, 10:30 AM IST
ಬೆಂಗಳೂರು: ರೈಸ್ ಪುಲ್ಲಿಂಗ್ ಚೋಂಬು ತೋರಿಸಿ ಉದ್ಯಮಿಯೊಬ್ಬರ ಕೋಟ್ಯಂತರ ರೂ. ಮೌಲ್ಯದ ಜಮೀನು ಮತ್ತು ಮನೆ ಸೇರಿ ಸ್ಥಿರಾಸ್ತಿಗಳನ್ನು ಕಬಳಿಸಿದ್ದ ಮಹಿಳೆ ಸೇರಿ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನಾಗರತ್ನಾ, ಹೊಳೆನರಸೀಪುರದ ರಾಮಚಂದ್ರ, ಬೆಂಗಳೂರಿನ ಸುಕುಮಾರನ್, ಮಂಜುನಾಥ ಹಾಗೂ ನಟೇಶ್ ಬಂಧಿತರು. ಆರೋಪಿಗಳಿಂದ ರೈಸ್ ಪುಲ್ಲಿಂಗ್ ಚೊಂಬುಗಳನ್ನು ಜಪ್ತಿ ಮಾಡಲಾಗಿದೆ. ಉದ್ಯಮಿ ಹೆಣ್ಣೂರು ಪ್ರಕೃತಿ ಲೇಔಟ್ ನಿವಾಸಿ ವಿ.ಕಾಂತರಾಜು ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಏನಿದು ಪ್ರಕರಣ?: ಉದ್ಯಮಿ ಕಾಂತರಾಜು ಗಂಗಾ ಬೋರ್‌ವೆಲ್ ಹೆಸರಿನಲ್ಲಿ ವ್ಯವಹಾರ ಮಾಡುತ್ತಿದ್ದು, ಕಚ್ಚಾ ತೈಲ ಮತ್ತು ರಿಫೈನರಿ ಪ್ಲಾಂಟ್ ತೆರೆಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಕನಕಪುರದ ಮನು ಮತ್ತು ರಾಮಣ್ಣ ಎಂಬವರ ಮೂಲಕ ಆರೋಪಿಗಳಾದ ನಾಗರತ್ನಾ ಮತ್ತು ರಾಮಚಂದ್ರಪ್ಪ ಪರಿಚಯವಾಗಿದೆ. ಈ ವೇಳೆ ನಾಗರತ್ನ, ಚನ್ನರಾಯಪಟ್ಟಣದಲ್ಲಿ ನನ್ನದು ಪೆಟ್ರೋಲ್ ಬಂಕ್ ಇದೆ. ನನಗೆ ಬಿಜೆಪಿಯ ಮಾಜಿ ಸಚಿವರಾದ ಶ್ರೀರಾಮುಲು ಮತ್ತು ಅಶ್ವತ್ಥನಾರಾಯಣ ಪರಿಚಯವಿದ್ದು, ಒಎನ್‌ಜಿಸಿಯಲ್ಲಿ ತುಂಬ ಅನುಭವ ಇದ್ದು, ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸುತ್ತೇನೆ ಎಂದು ನಂಬಿಸಿದ್ದಾರೆ. ಬಳಿಕ ಈ ವ್ಯವಹಾರಕ್ಕೆ ಅಗತ್ಯವಾಗಿರುವ ಸಾವಿರಾರು ಕೋಟಿ ರೂ. ಬಂಡವಾಳ ಹಣ ಹೊಂದಿಸುವುದು ನಿಮ್ಮಿಂದ ಅಸಾಧ್ಯ. ನಮ್ಮ ಬಳಿ 5 ರೈಸ್ ಪುಲ್ಲಿಂಗ್ ಚೊಂಬುಗಳಿವೆ. ಅವುಗಳು ಸ್ಯಾಟಲೈಟ್‌ಗಳ ಜತೆ ಸಂಪರ್ಕ ಹೊಂದುವುದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 5 ಲಕ್ಷ ಕೋಟಿ ರೂ. ಬೆಲೆ ಇದೆ ಎಂದು ನಂಬಿಸಿದ್ದಾರೆ. ನಂತರ ನಟೇಶ್ ಮತ್ತು ಸುಕುಮಾರ್ ಎಂಬುವರು ಕಾಂತರಾಜು ಬಳಿ ತಾವು ರೇಡಿಯಸ್ ಕಂಪನಿ ಸಿಇಒಗಳು ಎಂದು ಪರಿಚಯಿಸಿಕೊಂಡಿದ್ದರು.
ರಾಮಚಂದ್ರಪ್ಪ ತಾನು ಸಿಇಜಿಎಆರ್‌ಎನ್ ಕಂಪನಿ ಸಿಇಒ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಆರೋಪಿಗಳು ರೈಸ್ ಪುಲ್ಲಿಂಗ್ ಚೊಂಬುಗಳನ್ನು ತೋರಿಸಿ ಪರೀಕ್ಷಿಸಿ ಕಾಂತರಾಜುನನ್ನು ನಂಬಿಸಿದ್ದರು. ಆ ಬಳಿಕ ಈ ರೈಸ್ ಪುಲ್ಲಿಂಗ್ ಚೊಂಬುಗಳನ್ನು ನಾವೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಬಂದ ಹಣವನ್ನು ನಿಮಗೆ ಕೊಡುತ್ತೇವೆ. ಅಲ್ಲಿಯವರೆಗೆ ನಿಮ್ಮ ಸ್ಥಿರಾಸ್ತಿಯನ್ನು ನಮಗೆ ಬರೆದುಕೊಡಬೇಕು. ಒಂದು ತಿಂಗಳೊಳಗೆ ರೈಸ್ ಪುಲ್ಲಿಂಗ್ ಚೊಂಬು ಮಾರಾಟ ಮಾಡಿ ಬಳಿಕ ನಿಮ್ಮ ಆಸ್ತಿಯನ್ನು ನಿಮಗೆ ವಾಪಾಸ್ ಬರೆದುಕೊಡುವುದಾಗಿ ಹೇಳಿ ಕಾಂತರಾಜು ಅವರ ಕನಕಪುರ ತಾಲೂಕು ಅತ್ತಿಗುಪ್ಪೆ ಗ್ರಾಮದಲ್ಲಿನ 4 ಎಕರೆ 18 ಗುಂಟೆ ಜಮೀನನ್ನು ಸುಕುಮಾರನ್ ಪತ್ನಿ ಸವಿತಾ ಹೆಸರಿಗೆ ಕ್ರಯ ಮಾಡಿಸಿದ್ದರು. ಇದಾದ ಒಂದು ತಿಂಗಳ ಬಳಿಕ ಆರೋಪಿಗಳು ರೈಸ್ ಪುಲ್ಲಿಂಗ್ ಚೊಂಬುಗಳು ಮಾರಾಟವಾಗಿಲ್ಲ. ಮಾರಾಟಕ್ಕೆ ಮಾರುಕಟ್ಟೆಯಲ್ಲಿ 1 ಕೋಟಿ ರೂ. ಹಣ ಠೇವಣಿ ಇರಿಸಬೇಕು ಎಂದು ಥಣಿಸಂದ್ರದ ಕಾಂತರಾಜು ಅವರ ಮನೆಯನ್ನು ರಾಮಚಂದ್ರ ಪಳಸಿಕರನ್ ಹೆಸರಿಗೆ ಬರೆಸಿಕೊಂಡಿದ್ದರು. ನಂತರ ಚೊಂಬುಗಳು 100 ಕೋಟಿ ರೂ.ಗೆ ಮಾರಾಟವಾಗಿದೆ ಎಂದು ನಂಬಿಸಿ, ನೆಲಮಂಗಲದ ಸಮೀಪದ 2 ಎಕರೆ4 ಗುಂಟೆ ಜಮೀನನ್ನು ಗಂಗರಾಜು ಹೆಸರಿಗೆ ಜಿಪಿಎ ಮಾಡಿದ್ದರು.
ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಬಳಿಕ ವಂಚನೆಗೊಳಗಾಗಿರುವುದು ಗೊತ್ತಾಗಿ ಕಾಂತರಾಜು ಸಿಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.