ಬ್ಯಾಂಕ್ ಉದ್ಯೋಗಿಯಾಗಿದ್ದುಕೊಂಡು ವಿವಿಧ ಖಾತೆಯಿಂದ 8 ಕೋಟಿ ರೂ. ಎಗರಿಸಿದ ಖದೀಮ ಅಂದರ್
Team Udayavani, May 18, 2021, 7:55 PM IST
ತಿರುವನಂತಪುರ: ಬ್ಯಾಂಕ್ ಉದ್ಯೋಗಿಯಾಗಿದ್ದುಕೊಂಡು ಹಲವರ ಖಾತೆಗಳಿಂದ 8 ಕೋಟಿ ರೂ.ಗಳಿಗಿಂತಲೂ ಅಧಿಕ ಮೊತ್ತ ಎಗರಿಸಿದ ವಿಜೇಶ್ ವರ್ಗೀಸ್ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಆತ ಪಟ್ಟನಂತಿಟ್ಟದಲ್ಲಿರುವ ಬ್ಯಾಂಕ್‌ವೊಂದರ ಶಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾನೆ. ಸಕ್ರಿಯವಾಗಿ ಇಲ್ಲದೇ ಇರುವ ನಿಗದಿತ ಠೇವಣಿಗಳನ್ನು ಗಮನಿಸಿ ಆ ಮೊತ್ತವನ್ನು ಲಪಟಾಯಿಸುವುದರಲ್ಲಿ ಆತ ಸಿದ್ಧಹಸ್ತನಾಗಿದ್ದಾನೆ.
ಫೆಬ್ರವರಿಯಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಠೇವಣಿ ಮೊತ್ತ ಕಬಳಿಸಿದ ಪ್ರಕರಣ ಬೆಳಕಿಗೆ ಬಂದ ಬಳಿಕ ವರ್ಗೀಸ್‌ನ ವಿವರ ಗೊತ್ತಾಗಿತ್ತು. ನೌಕಾಪಡೆಯಲ್ಲಿ ಕೆಲಸದಲ್ಲಿದ್ದ ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದರು.
ಇದನ್ನೂ ಓದಿ :ವಿವಾಹ ವಾರ್ಷಿಕೋತ್ಸವದ ದಿನದಂದೇ ಪತ್ನಿ ಸಾವು : ಕುಟುಂಬದ ಸಂಭ್ರಮಕ್ಕೆ ತಣ್ಣೀರೆರೆಚಿದ ಕೋವಿಡ್
ಭಾನುವಾರ ಬೆಂಗಳೂರಿನಲ್ಲಿ ಅಡಗಿದ್ದ ಆತನನ್ನು ಪೊಲೀಸರು ಬಂಧಿಸಿ ತಿರುವನಂತಪುರಕ್ಕೆ ಕರೆತಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.