ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
ಪ್ರತಿದಿನ ಹೊಸ ವಿವಾದದ ವರದಿಯಾಗುತ್ತದೆ. ಇದನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?
Team Udayavani, Dec 20, 2024, 2:30 PM IST
ನವದೆಹಲಿ: ಭಾರತದಾದ್ಯಂತ ವಿವಿಧ ಸ್ಥಳಗಳಲ್ಲಿ ರಾಮಮಂದಿರದಂತಹ ವಿವಾದಗಳನ್ನು ಕೆದಕುವ ಪ್ರಚೋದನಕಾರಿ ಹಿಂದೂ ಮುಖಂಡರ ವಿರುದ್ಧ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗ್ವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಹು ಜನಾಂಗದ ಅಸ್ಮಿತೆ ಮತ್ತು ಸೌಹಾರ್ದತೆಗೆ ಭಾರತ ಮಾದರಿಯಾಗಬೇಕಿದೆ ಎಂದು ಭಾಗ್ವತ್ ಈ ಸಂದರ್ಭದಲ್ಲಿ ಹೇಳಿದರು. ಭಾರತದಲ್ಲಿನ ಬಹುತ್ವ ಸಮಾಜದ ಕುರಿತು ಗಮನಸೆಳೆದ ಮೋಹನ್ ಭಾಗ್ವತ್ ಅವರು, ಸ್ವಾಮಿ ರಾಮಕೃಷ್ಣ ಆಶ್ರಮದಲ್ಲಿ ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ. ನಾವು ಹಿಂದೂಗಳಾಗಿದ್ದರಿಂದ ಮಾತ್ರ ಇದನ್ನು ಮಾಡಬಹುದಾಗಿದೆ ಎಂದರು.
“ನಾವು ದೀರ್ಘ ಕಾಲದಿಂದ ಸೌಹಾರ್ದತೆಯಿಂದ ಬದುಕಿದವರು. ಒಂದು ವೇಳೆ ನಾವು ಜಗತ್ತಿಗೆ ಸೌಹಾರ್ದತೆಯ ಕೊಡುಗೆಯನ್ನು ರವಾನಿಸಬೇಕಿದ್ದರೆ, ನಾವು ಮೊದಲು ಅದನ್ನು ಅನುಸರಿಸಬೇಕು ಎಂದು” ಭಾಗ್ವತ್ ಸಲಹೆ ನೀಡಿದ್ದಾರೆ.
“ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ ನಂತರ ದೇಶದ ವಿವಿಧ ಭಾಗಗಳಲ್ಲಿ ಇಂತಹದ್ದೇ ವಿವಾದಗಳನ್ನು ಕೆದಕುವ ಮೂಲಕ ತಾವು ಹಿಂದೂ ಮುಖಂಡರಾಗಬಹುದು ಎಂದು ಕೆಲವು ಜನರು ಭಾವಿಸಿಕೊಂಡಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು “ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ತಿಳಿಸಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
“ಯಾವುದೇ ರಾಜಕೀಯ ಪ್ರೇರಣೆಗೆ ಒಳಗಾಗದೇ ಸಮಸ್ತ ಹಿಂದೂಗಳ ನಂಬಿಕೆಯ ಪ್ರತೀಕವಾಗಿ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲಾಗಿದೆ” ಎಂದು ಭಾಗ್ವತ್ ಹೇಳಿದರು.
ಯಾವುದೇ ಮಾಧ್ಯಮದ ಹೆಸರನ್ನು ಉಲ್ಲೇಖಿಸದೇ ಮಾತನಾಡಿದ ಭಾಗ್ವತ್, ಪ್ರತಿದಿನ ಹೊಸ ವಿವಾದದ ವರದಿಯಾಗುತ್ತದೆ. ಇದನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ? ಇದು ಯಾವುದೇ ಕಾರಣಕ್ಕೂ ಮುಂದುವರಿಯಬಾರದು. ನಾವೆಲ್ಲರೂ ಒಟ್ಟಿಗೆ ಬದುಕುತ್ತಿದ್ದೇವೆ ಎಂಬುದನ್ನು ಭಾರತ ತೋರಿಸಿಕೊಡಬೇಕಾಗಿದೆ ಎಂದು ತಿಳಿಸಿದರು.
ಪುಣೆಯಲ್ಲಿ ನಡೆದ ವಿಶ್ವಗುರು ಭಾರತ್ ವಿಷಯದ ಕುರಿತು ಉಪನ್ಯಾಸ ನೀಡಿದ ಭಾಗ್ವತ್, ಭಾರತೀಯರು ಈ ಹಿಂದೆ ಮಾಡಿದ ತಪ್ಪುಗಳಿಂದ ಪಾಠ ಕಲಿಯಬೇಕಾಗಿದೆ. ಅಲ್ಲದೇ ನಾವೆಲ್ಲ ಸೌಹಾರ್ದತೆಯಿಂದ ಬಾಳುವ ಮೂಲಕ ನಮ್ಮ ದೇಶವನ್ನು ಜಗತ್ತಿಗೆ ಮಾದರಿ ರಾಷ್ಟ್ರವನ್ನಾಗಿ ಮಾಡಬೇಕಾದ ಹೊಣೆಗಾರಿಕೆ ಇರುವುದಾಗಿ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.