RSS ಸ್ವಾಗತ- ಸರ್ಕಾರಿ ನೌಕರರ ಭಾಗವಹಿಸುವಿಕೆ ಮೇಲೆ ಹೇರಿದ್ದ ನಿಷೇಧ ಕೇಂದ್ರದಿಂದ ತೆರವು
Team Udayavani, Jul 22, 2024, 4:07 PM IST
ನವದೆಹಲಿ: ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಹೇರಿದ್ದ ನಿಷೇಧವನ್ನು ತೆಗೆದುಹಾಕಲು ಕೇಂದ್ರ ಸರ್ಕಾರ ಸೋಮವಾರ (ಜುಲೈ22) ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.
ಸರ್ಕಾರಿ ನೌಕರರು RSS ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಕೇಂದ್ರ ಹೇಳಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ವಾಗತಿಸಿದೆ.
ಈ ಹಿಂದಿನ ಸರ್ಕಾರ (ಕಾಂಗ್ರೆಸ್) ರಾಜಕೀಯ ಲಾಭಕ್ಕಾಗಿ ನಿಷೇಧ ಹೇರಿತ್ತು ಎಂದು ಕೇಂದ್ರ ಆರೋಪಿಸಿದೆ. ಐತಿಹಾಸಿಕವಾಗಿ ಸರ್ಕಾರಿ ನೌಕರರು ಆರ್ ಎಸ್ ಎಸ್ ಜತೆ ಸಹಭಾಗಿತ್ವ ಹೊಂದುವುದಕ್ಕೆ ಕೇಂದ್ರ ಸರ್ಕಾರ ಈ ಹಿಂದೆ ನಿಷೇಧ ಹೇರಿತ್ತು.
ನಿಷೇಧವನ್ನು ತೆರವುಗೊಳಿಸಿರುವ ಆದೇಶವನ್ನು ಕೇಂದ್ರ ಸರ್ಕಾರ ಸಾರ್ವಜನಿಕವಾಗಿ ಪ್ರಕಟಿಸಿದ ನಂತರ ಹಲವಾರು ವಿಪಕ್ಷಗಳು, ಆಕ್ರೋಶ ವ್ಯಕ್ತಪಡಿಸಿದ್ದವು. ಪ್ರಸಕ್ತ ಕೇಂದ್ರ ಸರ್ಕಾರದ ನಿರ್ಧಾರ ಸೂಕ್ತವಾಗಿದ್ದು, ಇದರಿಂದ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುತ್ತದೆ ಎಂದು ಆರ್ ಎಸ್ ಎಸ್ ವಕ್ತಾರ ಸುನೀಲ್ ಅಂಬೇಕರ್ ತಿಳಿಸಿದ್ದಾರೆ.
ಕಳೆದ 99ವರ್ಷಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದ ಅಭಿವೃದ್ಧಿ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿತ್ತು. ಸಂಘದ ಪಾತ್ರದ ಬಗ್ಗೆ ದೇಶದ ವಿವಿಧ ಮುಖಂಡರು ಶ್ಲಾಘನೆ ವ್ಯಕ್ತಪಡಿಸಿದ್ದರು ಎಂದು ಅಂಬೇಕರ್ ಹೇಳಿದರು.
ಇದನ್ನೂ ಓದಿ:Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.