ರೈತರ ಸಹಮತಿ ದೊರೆತ 2 ತಿಂಗಳಲ್ಲಿ ಪಿಆರ್ ಆರ್ ಗೆ ಚಾಲನೆ: ಎಸ್.ಆರ್.ವಿಶ್ವನಾಥ್
Team Udayavani, Feb 28, 2022, 9:44 PM IST
ಬೆಂಗಳೂರು : ರೈತರು ಮತ್ತು ಸರ್ಕಾರದ ನಡುವಿನ ಮಾತುಕತೆಗಳು ಸಫಲವಾದ ಎರಡು-ಮೂರು ತಿಂಗಳಲ್ಲಿ ಪಿಆರ್ ಆರ್ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
ಉದ್ದೇಶಿತ ಪಿಆರ್ ಆರ್ ಯೋಜನೆಗೆ ಸಂಬಂಧಿಸಿದಂತೆ ಸೋಮವಾರ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ನಗರದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ಪಿಆರ್ ಆರ್ ರಸ್ತೆ ಅಗತ್ಯವಿರುವುದನ್ನು ಎಲ್ಲರೂ ಒಪ್ಪುತ್ತಾರೆ. ಈ ಹಿನ್ನೆಲೆಯಲ್ಲಿ ಬಿಡಿಎ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ ಎಂದರು.
ನಾನಾ ಕಾರಣಗಳಿಂದ ಕಳೆದ 17 ವರ್ಷಗಳಿಂದ ಯೋಜನೆಗೆ ಚಾಲನೆ ನೀಡಲು ಸಾಧ್ಯವಾಗಿಲ್ಲ. ಇದೀಗ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಮುನ್ನಡಿ ಇಟ್ಟಿದೆ. ಲಕ್ಷಾಂತರ ಜನರಿಗೆ ಅನುಕೂಲ ಮಾಡಿಕೊಡುವಂತಹ ಈ ಯೋಜನೆಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಬಜೆಟ್ ನಂತರ ಸಿಎಂ ಜತೆ ಸಭೆ
ಯೋಜನೆಗೆ ಭೂಮಿ ಕಳೆದುಕೊಳ್ಳುವ ರೈತರಿಗೆ ಯಾವ ಪ್ರಮಾಣದಲ್ಲಿ ಪರಿಹಾರ ನೀಡಬೇಕೆಂಬುದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬಜೆಟ್ ಮಂಡನೆ ಬಳಿಕ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರೈತರು ಮತ್ತು ಬಿಡಿಎ ಅಧಿಕಾರಿಗಳ ಸಭೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.
ಪಿಆರ್ ಆರ್ ರಸ್ತೆ ನಿರ್ಮಾಣಕ್ಕೆ ಎಲ್ಲರ ಸಹಮತವಿದೆ. ಆದರೆ, ಪರಿಹಾರ ಮತ್ತಿತರೆ ವಿಚಾರದಲ್ಲಿ ಅಂತಿಮ ನಿರ್ಧಾರಗಳು ಹೊರಬರಬೇಕಿದೆ. ಹಲವು ಸುತ್ತಿನ ಮಾತುಕತೆಗಳ ನಂತರ ರೈತರು ಸಮ್ಮತಿ ಸೂಚಿಸಿದ ತಕ್ಷಣದಿಂದ 2-3 ತಿಂಗಳಲ್ಲಿ ಯೋಜನೆಗೆ ಚಾಲನೆ ನೀಡಲು ಬಿಡಿಎ ಸಿದ್ಧವಾಗಿದೆ ಎಂದು ವಿಶ್ವನಾಥ್ ತಿಳಿಸಿದರು.
ಇದನ್ನೂ ಓದಿ : ಕುಂದಾಪುರ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯೆಯಿಂದ ವಿಡಿಯೋ ಚಿತ್ರಿಕರಣ: ವಿಪಕ್ಷ ಸಭಾತ್ಯಾಗ
ಸರ್ವಸಮ್ಮತ ನಿರ್ಧಾರ ಹೊರ ಬಿದ್ದ ತಕ್ಷಣ ಯೋಜನೆಗೆ ಬೇಕಾದ ಅಧಿಸೂಚನೆ ಹೊರಡಿಸಿ ಕ್ಷಿಪ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುತ್ತದೆ ಎಂದೂ ಅವರು ತಿಳಿಸಿದರು.
ಇದೇ ವೇಳೆ ಮಾತನಾಡಿದ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರು, ಕಳೆದ 17 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಯ ಕಾರ್ಯಗತಕ್ಕೆ ಎಲ್ಲರೂ ಕೈಜೋಡಿಸೋಣ ಮತ್ತು ಸೌಹಾರ್ದಯುತವಾಗಿ ರಸ್ತೆ ನಿರ್ಮಾಣ ಮಾಡಿ ನಗರದಲ್ಲಿ ಉಂಟಾಗಿರುವ ವಾಹನ ದಟ್ಟಣೆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಸಹಕರಿಸೋಣ ಎಂದು ಮನವಿ ಮಾಡಿದರು.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿ, ಪಿಆರ್ ಆರ್ ಗೆ ಸಂಬಂಧಿಸಿದಂತೆ ರೈತರಲ್ಲಿರುವ ಹಲವಾರು ಗೊಂದಲಗಳನ್ನು ಪರಿಹರಿಸಿ, ವೈಜ್ಞಾನಿಕ ರೀತಿಯಲ್ಲಿ ಭೂಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಡಿಎ ಅಭಿಯಂತರ ಸದಸ್ಯ ಡಾ.ಶಾಂತರಾಜಣ್ಣ ಅವರು ಯೋಜನೆಯ ಸ್ಥಿತಿಗತಿಯ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯದರ್ಶಿ ಆನಂದ್ ಸೇರಿದಂತೆ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.