Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

ಬೇಕಾಬಿಟ್ಟಿಯಾಗಿ ಖಾಸಗಿ ಲೇ ಔಟ್‌ಗಳ ನಿರ್ಮಿಸಿದರೆ ಯೋಜನಾ ಪ್ರಾಧಿಕಾರದಿಂದ ಅನುಮತಿ ಸಾಧ್ಯವಿಲ್ಲ: ಗೋಪಾಲಕೃಷ್ಣ

Team Udayavani, Nov 16, 2024, 7:35 PM IST

Sagara-Autrity

ಸಾಗರ: ನಗರದ ನಾಲ್ಕೂ ದಿಕ್ಕಿನಲ್ಲೂ ಆಶ್ರಯ ಲೇ ಔಟ್ ಮಾಡಿ, ಬಡವರಿಗೆ ನಿವೇಶನ ನೀಡುವ ಉದ್ದೇಶ ಹೊಂದಲಾಗಿದ್ದು, ಎಲ್ಲಾ ಭಾಗದಲ್ಲೂ ಕನಿಷ್ಠ ಹತ್ತು ಎಕರೆ ಸರ್ಕಾರಿ ಜಾಗದಲ್ಲಿ ನಿವೇಶನ ನಿರ್ಮಿಸಿ, ಮೂಲಭೂತ ಸೌಲಭ್ಯ ಒದಗಿಸಿ ಆಶ್ರಯಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಹಂಚಿಕೆ ಮಾಡಲಾಗುವುದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ನಗರಸಭೆಯಲ್ಲಿ ಶನಿವಾರ ಸಾಗರ ಯೋಜನಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಆಶ್ರಯ ನಿವೇಶನ ಕೋರಿ ನಾಲ್ಕು ಸಾವಿರ ಅರ್ಜಿಗಳು ಹಿಂದಿನ ಸರ್ಕಾರದ ಅವಧಿಯಲ್ಲಿ ಬಂದಿತ್ತು. ಎಲ್ಲರಿಗೂ ನಿವೇಶನ ಕೊಡಲು ಸಾಧ್ಯವಿಲ್ಲ. ಕನಿಷ್ಠ 2ರಿಂದ 3 ಸಾವಿರ ಜನರಿಗಾದರೂ ನಿವೇಶನ ಕೊಡಬೇಕು ಎನ್ನುವುದು ನಮ್ಮ ಉದ್ದೇಶ. ಈ ಹಿನ್ನೆಲೆಯಲ್ಲಿ ಬಳಸಗೋಡು ಬಳಿ 20 ಎಕರೆ, ಯಲಗಳಲೆ ಬಳಿ 10 ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದೆ ಎಂದರು.

ಲೇ ಔಟ್‌ಗಳಲ್ಲಿ ಮೂಲಭೂತ ಸೌಲಭ್ಯ ಅಗತ್ಯ:  
ನಗರ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿರುವ ಖಾಸಗಿ ಲೇ ಔಟ್‌ಗಳ ಬೇಕಾಬಿಟ್ಟಿಯಾಗಿ ನಿರ್ಮಿಸಿದರೆ ಪ್ರಾಧಿಕಾರದಿಂದ ಅನುಮತಿ ನೀಡುವುದಿಲ್ಲ. ಲೇಔಟ್‌ಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು ಇರುವುದು ಕಡ್ಡಾಯ. ನಮ್ಮ ಪ್ರಾಧಿಕಾರದ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲವೂ ಕಾನೂನಾತ್ಮಕವಾಗಿ ಇದ್ದರೆ ಮಾತ್ರ ಪರವಾನಗಿ ನೀಡಲು ಶಿಫಾರಸ್ಸು ಮಾಡುತ್ತಾರೆ. ಹಿಂದೆ ವಿನೋಬಾ ನಗರದಲ್ಲಿ ಖಾಸಗಿ ಲೇ ಔಟ್ ಮಳೆಗಾಲದಲ್ಲಿ ಮುಳುಗಿ ಹೋಗಿತ್ತು. ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪರಿಸ್ಥಿತಿ ಬೇರೆಡೆ ಬರಬಾರದು ಎನ್ನುವ ಕಾರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಕೆಲವು ಕಡೆಗಳಲ್ಲಿ ಕೆರೆ ಜಾಗ, ಪಾರ್ಕ್‌ಗೆ ಬಿಟ್ಟಿರುವ ಜಾಗ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ. ಅಂತಹ ಮನೆಗಳ ತೆರವಿಗೆ ಸೂಚನೆ ನೀಡಲಾಗಿದೆ. ಸದ್ಯದಲ್ಲಿಯೇ ಆಶ್ರಯ ಸಮಿತಿ ಸದಸ್ಯರು, ತಹಶೀಲ್ದಾರ್, ಸಾಗರ ಯೋಜನಾ ಪ್ರಾಧಿಕಾರದ ಸದಸ್ಯರ ಒಳಗೊಂಡ ಸಭೆ ಕರೆದು ಆಶ್ರಯ ನಿವೇಶನ ನೀಡಲು ಜಾಗ ಗುರುತಿಸುವ ಕೆಲಸ ಮಾಡಲಾಗುತ್ತದೆ. ಹಿಂದಿನ ಶಾಸಕರು 10-20 94ಸಿ ಹಕ್ಕುಪತ್ರ ಕೊಟ್ಟಿದ್ದು ಬಿಟ್ಟರೆ, ಬಡವರಿಗೆ ನಿವೇಶನ ನೀಡಲಿಲ್ಲ. ನಮ್ಮ ಅವಧಿಯಲ್ಲಿ ಬಡವರಿಗೆ ನಿವೇಶನ ನೀಡುವುದು ನಮ್ಮ ಆದ್ಯತಾ ವಿಷಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.

ಪೌರಾಯುಕ್ತ ಎಚ್.ಕೆ.ನಾಗಪ್ಪ ಮಾತನಾಡಿದರು. ಸಭೆಯಲ್ಲಿ ಪ್ರಾಧಿಕಾರದ ಸದಸ್ಯರಾದ ಸೋಮಶೇಖರ ಲ್ಯಾವಿಗೆರೆ, ಐ.ಎನ್.ಸುರೇಶಬಾಬು, ಮರಿಯಾ ಲೀಮಾ ಇನ್ನಿತರರಿದ್ದರು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.