ಮರಳು ಸಾಗಾಣಿಕೆ ವ್ಯವಹಾರ ಆಗಬಾರದು :ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಜಿಲ್ಲಾಧಿಕಾರಿ
ಹೊಸ ಮರಳು ನೀತಿ-2020ರ ಅನ್ವಯ ಮರಳು ನಿಕ್ಷೇಪ ಗುರುತಿಸಿ: ಜಿಲ್ಲಾಧಿಕಾರಿ
Team Udayavani, Oct 22, 2020, 7:06 PM IST
ಕಾರವಾರ : ಹೊಸ ಮರಳು ನೀತಿ-2020ರ ಅನ್ವಯ ಜಿಲ್ಲೆಯ ಹಳ್ಳ, ಕೊಳ್ಳ, ನದಿ ಹಾಗೂ ಅಣೆಕಟ್ಟಿನ ಹಿನ್ನಿರಿನಲ್ಲಿ ಲಭ್ಯವಿರುವ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶ್ ಕುಮಾರ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಎಸಿ, ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಈ ಹೊಸ ಮರಳು ನೀತಿ ಪ್ರಕಾರ , ಬಡವರಿಗೆ ಮತ್ತು ಸ್ಥಳೀಯರಿಗೆ ದೊರೆಯಬೇಕೆಂಬ ಉದ್ದೇಶದಿಂದ ಹೊಸ ನೀತಿ ಮಾಡಲಾಗಿರುವುದರಿಂದ ಹಳ್ಳ, ಕೊಳ್ಳ, ನದಿ, ಅಣೆಕಟ್ಟಿನ ಹಿನ್ನೀರಿನಲ್ಲಿರುವ ಮರಳು ನಿಕ್ಷೇಪಗಳನ್ನು ಗುರುತಿಸಿ ಅರ್ಹರಿಗೆ ಮರಳು ದೊರಕುವಂತೆ ಮಾಡಿ. ಈ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಮರಳು ಸಾಗಾಣಿಕೆ ದಂಧೆ ಆಗಿ ಮಾರ್ಪಾಡಬಾರದು ಎಂದು ಅವರು ಖಡಕ್ ಆಗಿ ಸೂಚಿಸಿದರು.
ಇದನ್ನೂ ಓದಿ:ನೌಕಾದಳ ಮುಖ್ಯಸ್ಥ ಅಡ್ಮಿರಲ್ ಕರಮ್ ಬೀರ್ ಸಿಂಗ್ ಕಾರವಾರ ನೌಕಾನೆಲೆಗೆ ಭೇಟಿ
ರಾಜ್ಯದ ಭೌಗೋಳಿಕ, ಭೂವೈಜ್ಞಾನಿಕ ಮತ್ತು ಆಡಳಿತಾತ್ಮಕ ಹಿನ್ನೆಲೆಯನ್ನು ಪರಿಗಣಿಸಿ ಸರ್ಕಾರಿ ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳಿಗೆ ನಿಯಮಿತವಾಗಿ ಮತ್ತು ಸುಲಭವಾಗಿ ಕೈಗೆಟುಕುವ ದರದಲ್ಲಿ ಮರಳು ದೊರೆಯುವಂತೆ ಇರಬೇಕು ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ವೈಜ್ಞಾನಿಕವಾಗಿ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲು ಹಳ್ಳ, ನದಿ, ಕೆರೆ, ಅಣೆಕಟ್ಟು ಮತ್ತು ಅಣೆಕಟ್ಟಿನ ಹಿನ್ನೀರಿನ ನದಿಪಾತ್ರದಲ್ಲಿನ ಮರಳು ನಿಕ್ಷೇಪಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಹೊಸ ಮರಳು ನೀತಿಯನ್ನು ಪ್ರಸ್ತಾಪಿಸಿದೆ. ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಹೇಳಿದರು.
ಈ ಪ್ರಸ್ತಾವನೆಯಂತೆ ಮೊದಲನೇ, ಎರಡನೇ ಮತ್ತು ಮೂರನೇ ಶ್ರೇಣಿಯ ಹಳ್ಳ ಮತ್ತು ಕೆರೆಗಳಲ್ಲಿ ಲಭ್ಯವಿರುವ ಮರಳು ನಿಕ್ಷೇಪಗಳನ್ನು ಕಂದಾಯ, ಅರಣ್ಯ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಗುರುತಿಸಬೇಕು. ನಾಲ್ಕು, ಐದು ಮತ್ತು ಆರನೇ ಕ್ರಮಾಂಕದ ಹೊಸ ನೀತಿ ನದಿ, ಜಲಾಶಯ ಹಾಗೂ ಅಣೆಕಟ್ಟಿನ ಹಿನ್ನೀರಿನ ನದಿಪಾತ್ರದಲ್ಲಿನ ಮರಳು ನಿಕ್ಷೇಪಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಬೇಕು. ತಾಲೂಕು ವ್ಯಾಪ್ತಿಗಳಲ್ಲಿ ಬರುವ ಹಳ್ಳ, ತೊರೆ, ಕರೆ, ಹೊಳೆ ಮತ್ತು ಅಣೆಕಟ್ಟಿನ ಹಿನ್ನೀರಿನ ನದಿಪಾತ್ರಗಳಲ್ಲಿ ಹೊಸ ಮರಳು ನೀತಿ-2020ರ ಆದೇಶದಲ್ಲಿ ತಿಳಿಸಿರುವ ಅಂಶಗಳನ್ವಯ ಮರಳು ನಿಕ್ಷೇಪಗಳನ್ನು ಗುರುತಿಸಿ, ತಾಲೂಕು ಮರಳು ಉಸ್ತುವಾರಿ ಸಮಿತಿ ಮೂಲಕ, ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಅನುಮೋದನೆಯೊಂದಿಗೆ ತೆರವುಗೊಳಿಸುವಿಕೆಗೆ ಕ್ರಮವಹಿಸಬೇಕಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಸಹಾಯಕ ಕಮಿಷನರ್ ಪ್ರಿಯಾಂಗಾ .ಎಂ ಹಾಗೂ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರ. ಎಂ ಅವರು ಸೇರಿದಂತೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.