ಸ್ಯಾಂಡಲ್ ವುಡ್ ನಟಿ ಸೋದರನಿಂದ ಅತ್ಯಾಚಾರ ಆರೋಪ; ಬಸವನಗುಡಿ ಠಾಣೆಗೆ ದೂರು
ಶಾದಿ.ಕಾಂನಲ್ಲಿ ಸಂತ್ರಸ್ತೆ ತಮ್ಮ ಪ್ರೊಫೈಲ್ ಪ್ರಕಟಿಸಿದ್ದರು.
Team Udayavani, Mar 17, 2022, 2:44 PM IST
ಬೆಂಗಳೂರು: ಸ್ಯಾಂಡಲ್ ವುಡ್ ನಟಿಯೊಬ್ಬರ ಸಹೋದರನ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮಹಿಳಾ ಟೆಕಿಯೊಬ್ಬರು ನೀಡಿದ ದೂರಿನ ಮೇರೆಗೆ ಬನಶಂಕರಿ ನಿವಾಸಿ ಕೀರ್ತಿ ಚಂದ್ರ ಅಲಿಯಾಸ್ ವಿರಾಜ್ ಎಂಬಾತನ ವಿರುದ್ಧ ಬಸವನ ಗುಡಿ ಮಹಿಳಾ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ:ಹಾವುಗಳ ಜೊತೆ ಯುವಕನ ಚೆಲ್ಲಾಟ: ಸಿಟ್ಟಿಗೆದ್ದ ಹಾವುಗಳು ಮಾಡಿದ್ದೇನು!
ಶಾದಿ.ಕಾಂನಲ್ಲಿ ಸಂತ್ರಸ್ತೆ ತಮ್ಮ ಪ್ರೊಫೈಲ್ ಪ್ರಕಟಿಸಿದ್ದರು. ಅದನ್ನು ಗಮನಿಸಿದ ಕೀರ್ತಿ ಚಂದ್ರ 2021ರಲ್ಲಿ ಸಂತ್ರಸ್ತೆಯನ್ನು ಸಂಪರ್ಕಿಸಿದ್ದಾರೆ. ಈ ವೇಳೆ ತಾನೊಬ್ಬ ಪ್ರತಿಷ್ಟಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಉನ್ನತ ಹುದ್ದೆಯಲ್ಲಿದ್ದೇನೆ. ತನ್ನ ಸಹೋದರಿ ಖ್ಯಾತ ಸಿನಿಮಾ ನಟಿ ಎಂದು ಹೇಳಿಕೊಂಡಿದ್ದ.
ನಂತರ ಇಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಚಾಟಿಂಗ್ ಆರಂಭಿಸಿದ್ದು, ಬಳಿಕ ನಗರದ ಕೆಲವೆಡೆ ನೇರವಾಗಿ ಭೇಟಿಯಾಗಿದ್ದಾರೆ. ಈ ಸಲುಗೆಯಿಂದ ಸಂತ್ರಸ್ತೆ ಆರೋಪಿಯ ಹುಟ್ಟ ಹಬ್ಬಕ್ಕೆ ಐಫೋನ್, ಲ್ಯಾಪ್ ಟಾಪ್ ಮತ್ತು ಆ್ಯಪಲ್ ವಾಚ್ ಉಡುಗೊರೆಯಾಗಿ ನೀಡಿದ್ದರು.
ತದನಂತರ ಇಬ್ಬರು ಇನ್ನಷ್ಟು ಆತ್ಮೀಯರಾಗಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ 2022ರ ಜನವರಿ 18ರಂದು ಖಾಸಗಿ ಹೋಟೆಲ್‌ಗೆ ಕರೆದೊಯ್ದು ಮದುವೆಯಾಗುವುದಾಗಿ ನಂಬಿಸಿ ಸಂತ್ರಸ್ತೆ ಜತೆ ಒತ್ತಾಯದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ನಂತರ ಅವಾಚ್ಯ ಶಬ್ದಗಳಿಂದ ನಿಂದಿಸಿ
ಮೋಸ ಮಾಡಿದ್ದಾನೆ. ಆ ಬಳಿಕ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.