ಶ್ರೀಲೀಲಾ ನಟನೆಯ ಬೈ ಟು ಲವ್ ಚಿತ್ರಕ್ಕೆ ಮುಹೂರ್ತ
Team Udayavani, Dec 26, 2020, 12:35 PM IST
ನಟಿ ಶ್ರೀಲೀಲಾ “ಬೈ ಟು ಲವ್’ ಎಂಬ ಸಿನಿಮಾ ಒಪ್ಪಿಕೊಂಡಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಆ ಚಿತ್ರಕ್ಕೆ ಮುಹೂರ್ತ ನಡೆದಿದೆ.
ಕ್ರಿಸ್ಮಸ್ ಹಬ್ಬದ ದಿನ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡಿಮಹಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು.
ಮೊದಲ ಸನ್ನಿವೇಶಕ್ಕೆ ಕಾಶ್ವಿ ವೆಂಕಟ್ ಆರಂಭ ಫಲಕ ತೋರಿದರು. ಸಿದ್ದು ವೆಂಕಟ್ ಕ್ಯಾಮೆರಾ ಚಾಲನೆ ಮಾಡಿದರು. ಹರಿ ಸಂತೋಷ್ ನಿರ್ದೇಶನದ ಈ ಚಿತ್ರದ ನಾಯಕರಾಗಿ ಧನ್ವೀರ್ ನಟಿಸುತ್ತಿದ್ದಾರೆ.
ಶ್ರೀಲೀಲಾ ಈ ಚಿತ್ರದ ನಾಯಕಿ. ಸಾಧುಕೋಕಿಲ, ಅಚ್ಯುತ್ ಕುಮಾರ್, ಶಿವರಾಜ್ ಕೆ ಆರ್ ಪೇಟೆ ಮುಂತಾದವರ ತಾರಾಬಳಗ “ಬೈ ಟೂ ಲವ್’ನಲ್ಲಿದೆ. ಇದು ಹರಿ ಸಂತೋಷ್ ನಿರ್ದೇಶನದ 9 ನೇ ಚಿತ್ರ. “ಕೆ.ವಿ.ಎನ್ ಪೊ›ಡಕ್ಷನ್ಸ್ ‘ಲಾಂಛನದಲ್ಲಿ ನಿಶಾ ವೆಂಕಟ್ ಹಾಗೂ ಸುಪ್ರೀತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. “ಬೈ ಟೂ ಲವ್’ ಈ ಸಂಸ್ಥೆ ಯ ನಿರ್ಮಾಣದ ಮೂರನೇ ಚಿತ್ರ.
ಇದನ್ನೂ ಓದಿ:2021 ಕ್ಕೆ ಇನ್ನಷ್ಟು ಭದ್ರತೆಯೊಂದಿಗೆ ಜನರನ್ನು ತಲುಪಲಿರುವ ಫೇಸ್ ಬುಕ್
ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ. ಜನವರಿ 4ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಈಗಾಗಲೇ ಹೆಚ್.ಎಂ.ಟಿ ಬಳಿ ಚಿತ್ರಕ್ಕಾಗಿ ಅದ್ದೂರಿ ಸೆಟ್ ನಿರ್ಮಾಣವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.