Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ನಿಧನ
ಸ್ವಗ್ರಾಮ ನಾಗಮಂಗಲಕ್ಕೆ ಕೊಂಡೊಯ್ದು, ಅಂತ್ಯ ಸಂಸ್ಕಾರ ನೆರವೇರಲಿದೆ
Team Udayavani, Oct 18, 2024, 1:45 PM IST
ಬೆಂಗಳೂರು: ಸ್ಯಾಂಡಲ್ ವುಡ್ ನ ಶುಗರ್ ಫ್ಯಾಕ್ಟರಿ, ಮನಸಾಲಜಿ ಚಿತ್ರಗಳ ನಿರ್ದೇಶಕ, ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ (42ವರ್ಷ) ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರನ್ನು ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ (ಅ.18) ರಾತ್ರಿ ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ.
ರಾಕೇಶ್ ಅಭಿನಯದ “ಮನಸಾಲಜಿ” ಚಿತ್ರವನ್ನು ಅರಸ್ ನಿರ್ದೇಶನ ಮಾಡಿದ್ದು, 2011ರ ಸೆಪ್ಟೆಂಬರ್ ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಂಡಿತ್ತು. ನಂತರ ಡಾರ್ಲಿಂಗ್ ಕೃಷ್ಣ, ಸೋನಲ್ ಮೊಂಥೆರೋ ನಟನೆಯ ಶುಗರ್ ಫ್ಯಾಕ್ಟರಿ ಸಿನಿಮಾವನ್ನು ನಿರ್ದೇಶಿಸಿದ್ದರು.
ದೀಪಕ್ ಅರಸ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಶೇಷಾದ್ರಿಪುಂ ಮನೆಯಲ್ಲಿ ವ್ಯವಸ್ಥೆ ಮಾಡಿದ್ದು, ಶುಕ್ರವಾರ ಪಾರ್ಥಿವ ಶರೀರವನ್ನು ಸ್ವಗ್ರಾಮ ನಾಗಮಂಗಲಕ್ಕೆ ಕೊಂಡೊಯ್ದು, ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ವರದಿ ತಿಳಿಸಿದೆ. ದೀಪಕ್ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.