ಸಾವೊಪೌಲೊದ ಬಡವರ ಸ್ಥಿತಿ ಶೋಚನೀಯ

Team Udayavani, May 16, 2020, 6:45 PM IST

ಸಾವೊಪೌಲೊದ ಬಡವರ ಸ್ಥಿತಿ ಶೋಚನೀಯ

ಮಣಿಪಾಲ : ಲ್ಯಾಟಿನ್‌ ಅಮೆರಿಕದ ಆರ್ಥಿಕ ನಗರಿ ಎಂದೇ ಗುರುತಿಸಿಕೊಂಡಿರುವ ಬ್ರಜಿಲ್‌ನ ಸಾವೊ ಪೌಲೊ ಕೋವಿಡ್‌ನ‌ ದೆಸೆಯಿಂದಾಗಿ ಅತಿ ಹೆಚ್ಚು ತ್ರಸ್ತವಾಗಿರುವ ನಗರ. ಇಲ್ಲಿ ಬಡವವರ ಮೇಲೆ ಕೋವಿಡ್‌ ಉಂಟು ಮಾಡಿರುವ ಪರಿಣಾಮ ತುಸು ಜೋರಾಗಿಯೇ ಇದ್ದು, ಜೀವನೋಪಾಯಕ್ಕಾಗಿ ಸಣ್ಣ ಪುಟ್ಟ ವ್ಯಾಪಾರಗಳನ್ನು ನೆಚ್ಚಿಕೊಂಡಿದ್ದ ಕೆಳ ವರ್ಗದ ಜನರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ದುಡಿಯದಿದ್ದರೆ ಸಾಯುತ್ತೇವೆ
ವಾಣಿಜ್ಯ ನಗರಿಯಾಗಿರುವ ಸಾವೊ ಪೌಲೊ ಸದ್ಯ ಅಕ್ಷರಶಃ ಸ್ಥಬ್ಧವಾಗಿದೆ. ಇಲ್ಲಿನ ಬಹುತೇಕ ಆರ್ಥಿಕ ಚಟುವಟಿಕೆಗಳು ಸ್ಥಗಿತವಾಗಿವೆ. ಸರಕಾರ ಸೂಚಿಸಿರುವ ನಿಯಮಗಳ ಮೇರೆಗೆ ರೆಸ್ಟೋರೆಂಟ್‌ಗಳು ಮಾತ್ರ ಕಾರ್ಯಾಚರಿಸುತ್ತಿದ್ದು, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಸಣ್ಣ ಪುಟ್ಟ ಕೆಲಸಗಳನ್ನು ಅವಲಂಬಿಸಿರುವ ಕೆಳ ಸ್ತರದ ಜನರ ಜೀವನ ಅತಂತ್ರವಾಗಿದ್ದು, ನಗರದ ಹೊರವಲಯದಲ್ಲಿ ಬದುಕು ಕಟ್ಟಿಕೊಂಡಿರುವ ಈ ನಿವಾಸಿಗಳು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿ ಇದ್ದರೂ ಹೊರ ಹೋಗಿ ದುಡಿಯುವ ಅನಿವಾರ್ಯತೆ ನಮ್ಮದು.ದುಡಿಯದಿದ್ದರೆ ಕೋವಿಡ್‌ಗಿಂತ ಮೊದಲು ಹಸಿವು ನಮ್ಮನ್ನು ಕೊಲ್ಲಬಹುದು ಎನ್ನುತ್ತಾರೆ ಇಲ್ಲಿನವರು. ಬ್ರೆಜಿಲ್ಯಾಂಡಿಯದಲ್ಲಿ ಸಲೂನ್‌ ನಡೆಸುವ ಮೂಲಕ ಜೀವನ ನಡೆಸುತ್ತಿದ್ದ ಬಟಿಸ್ಟಾ ಸದ್ಯ ಆದಾಯ ಮೂಲವಿಲ್ಲದೆ ಪರದಾಡುತ್ತಿದ್ದು, ಭವಿಷ್ಯದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಈ ಪ್ರದೇಶ ಸೋಂಕಿನ ಹಾಟ್‌ಸ್ಪಾಟ್‌ ಎಂದು ಗುರುತಿಸಿಕೊಂಡಿದ್ದು, ಈಗಾಗಲೇ ಸೋಂಕಿನಿಂದ 120 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಅಸಡ್ಡೆಯ ಫಲ
ಒಟ್ಟಾರೆಯಾಗಿ ಬ್ರಜಿಲ್‌ ಲ್ಯಾಟಿನ್‌ ಅಮೆರಿಕದ ಸೋಂಕು ಪೀಡಿತ ಕೇಂದ್ರವೆಂದೇ ಗುರುತಿಸಿಕೊಂಡಿದೆ. ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಸೋಂಕಿನ ಪ್ರಕರಣಗಳು ದೃಢಪಡುತ್ತಿದ್ದು, ಇದುವರೆಗೆ 12 ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಬ್ರಜಿಲ್‌ನಲ್ಲಿ ಸುಮಾರು 1,77,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸುಮಾರು 4 ಸಾವಿರದಷ್ಟು ಸಾವಿನ ಪ್ರಕರಣಗಳು ಸಾವ್‌ ಪಾಲೊ ರಾಜ್ಯದ್ದಾಗಿದೆ.

ಈ ಪರಿಸ್ಥಿತಿಗೆ ಪರೋಕ್ಷವಾಗಿ ಅಧ್ಯಕ್ಷ ಜೈರ್‌ ಬೋಲ್ಸೊನಾರೊ ಕಾರಣವಾಗಿದ್ದು, ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾದ ಸಮಯದಲ್ಲಿ ಅಸಡ್ಡೆ ತೋರಿದ್ದಾರೆ. ಅಷ್ಟೇ ಅಲ್ಲದೆ ಸೋಂಕನ್ನು ಗಂಭೀರವಾಗಿ ಪರಿಗಣಿಸದೆ ಇದು ಕೇವಲ ಸಾಮಾನ್ಯ ಜ್ವರ ಎಂದು ತಾತ್ಸಾರ ತಾಳಿ ಪರಿಸ್ಥಿತಿ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಸಾಮಾಜಿಕ ಅಂತರ ಪಾಲನೆ ಮತ್ತಿತರ ಸುರಕ್ಷಾ ಕ್ರಮಗಳನ್ನು ಹೇರುವ ಮೂಲಕ ಸೋಂಕು ಪ್ರಸರಣ ತಡಎಯಲು ಅಧಿಕಾರಿಗಳು ಪರದಾಡುತ್ತಿದ್ದರೆ, ಬೋಲ್ಸೊನಾರೊ ವ್ಯವಹಾರ ಚಟುವಟಿಕೆಗಳನ್ನು ಪುನಃ ತೆರೆಯು ಉತ್ಸುಕಯಿಂದಿದ್ದಾರೆ. ದೇಶ ಈ ಪರಿಸ್ಥಿತಿಗೆ ಬರಲು ಅಧ್ಯಕ್ಷ ಜೈರ್‌ ಬೋಲ್ಸೊನಾರೊ ನಿರ್ಲಕ್ಷವೇ ಕಾರಣವೇ ಎಂಬ ಅಕ್ರೋಶ ಜನರಲ್ಲಿ ಮಡುಗಟ್ಟುತ್ತಿದೆ. ಸಾವೊ ಪೌಲೊದ ಉತ್ತರ ಭಾಗದಲ್ಲಿರುವ ಬ್ರೆಸಿಲ್ಯಾಂಡಿಯ ಸುಮಾರು 2,60,000 ಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು, ಶೇ.11 ಕ್ಕಿಂತಲೂ ಹೆಚ್ಚು ನಿವಾಸಿಗಳು ಫಾವೆಲಾಗಳಲ್ಲಿ (ಜೋಪಡಿ) ವಾಸಿಸುತ್ತಿದ್ದಾರೆ.ಬಹುತೇಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, ಅಂದು ದುಡಿದು ಅಂದೇ ತಿನ್ನುವ ಜೀವನ ಶೈಲಿ ಅವರದು. ಸದ್ಯ ಸೋಂಕಿನಿಂದ ಕೆಲಸವಿಲ್ಲದ ಇವರ ಪಾಡನ್ನು ಕೇಳುವವರಿಲ್ಲ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.