ಗೃಹಿಣಿ ಶಕ್ತಿಗೆ ಸರಕಾರದ ಬಲ; ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ ತರಬೇತಿ

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ತಿಂಗಳಿಗೆ ತಲಾ 500 ರೂ. ಸಹಾಯಧನ

Team Udayavani, Feb 18, 2023, 6:55 AM IST

ಗೃಹಿಣಿ ಶಕ್ತಿಗೆ ಸರಕಾರದ ಬಲ; ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ ತರಬೇತಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳೆಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಘೋಷಿಸಲಾಗಿದ್ದ “ಗೃಹಿಣಿ ಶಕ್ತಿ’ ಯೋಜನೆಯನ್ನು ಅಧಿಕೃತೃವಾಗಿ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ಘೋಷಣೆಗೆ ಅಧಿಕೃತ ಮುದ್ರೆಯೊತ್ತಿದ್ದಾರೆ. ಗೃಹಿಣಿ ಶಕ್ತಿ ಯೋಜನೆಯಡಿ ಶ್ರಮಶಕ್ತಿ, ಮಹಿಳೆಯರಿಗೆ ಕೌಶಲ್ಯ ತರಬೇತಿ, ಆರೋಗ್ಯ ಪುಷ್ಟಿ, ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್‌ಪಾಸ್‌, ವಿದ್ಯಾರ್ಥಿನಿಯರಿಗೆ “ವಿದ್ಯಾವಾಹಿನಿ’ ಸೇರಿದಂತೆ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.

“ಗೃಹಿಣಿ ಶಕ್ತಿ’ ಯೋಜನೆಯಡಿ ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗೆ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರಿಗೆ ಆದ್ಯತೆ ನೀಡಿರುವ ಸರ್ಕಾರ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳಿಗೆ ತಲಾ 500 ರೂ. ಸಹಾಯಧನವನ್ನು ಡಿಬಿಟಿ ಮೂಲಕ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದನ್ನು ಪ್ರೋತ್ಸಾಹಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಹಿಂದಿನ ವರ್ಷದಲ್ಲಿ ಸ್ತ್ರೀಸಾಮರ್ಥಯ ಯೋಜನೆ ಜಾರಿಗೊಳಿಸಲಾಗಿತ್ತು. ಇದರಡಿ ಸ್ವಸಹಾಯ ಗುಂಪುಗಳಿಗೆ ಬಂಡವಾಳ ನಿಧಿ, ಸಹಕಾರ ವಲಯದಲ್ಲಿ ಶೂನ್ಯ ಬಡ್ಡಿದರ ಸಾಲ ಒದಗಿಸಲು ಅವಕಾಶ ನೀಡಲಾಗಿತ್ತು. ಇದನ್ನು ಮುಂದುವರಿಸಿರುವ ಸರ್ಕಾರ ಈಗ “ಗೃಹಿಣಿ ಶಕ್ತಿ’ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ.

ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ ಪ್ರಾರಂಭಿಸಲು ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯ ತರಬೇತಿ ನೀಡಲಾಗುವುದು. ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣಕ್ಕೆ “ಲೈಫ್ ಸೈಕಲ್‌ ಅಪ್ರೋಚ್‌’ ಹೊಂದಲು ನಿರ್ಧರಿಸಲಾಗಿದ್ದು, ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು “ಆರೋಗ್ಯ ಪುಷ್ಟಿ’ ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು “ಪ್ರಾಫಿಲ್ಯಾಕ್ಟಿಕ್‌ ಐಎಪ್‌ಎ’ ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿಯವರು ಪ್ರಸ್ತಾಪಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ “ವಿದ್ಯಾವಾಹಿನಿ’
ರಾಜ್ಯದಲ್ಲಿನ ಎಲ್ಲ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ “ವಿದ್ಯಾವಾಹಿನಿ’ ಯೋಜನೆಯಡಿ 350 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದಲ್ಲಿನ ಒಟ್ಟು 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಅದೇ ರೀತಿ ರಾಜ್ಯದ ಸಂಘಟಿತ ವಲಯದಲ್ಲಿ ದುಡಿಯುವ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ಒದಗಿಸಲು ಮುಖ್ಯಮಂತ್ರಿಯವರು ಉದ್ದೇಶಿಸಿದ್ದು, ರಾಜ್ಯದ 30 ಲಕ್ಷ ಮಹಿಳೆಯರಿಗೆ ಸಹಾಯವಾಗುವ ಈ ಯೋಜನೆಗೆ ಸಾವಿರ ಕೋಟಿ ರೂ. ಒದಗಿಸಿದ್ದಾರೆ.

ಆ್ಯಸಿಡ್‌ ದಾಳಿ ಸಂತ್ರಸ್ತರ ಬದುಕಿಗೆ ಭದ್ರತೆ

ಆ್ಯಸಿಡ್‌ ದಾಳಿಯ ಸಂತ್ರಸ್ತ ಮಹಿಳೆಯರ ಬದುಕಿಗೆ ಭದ್ರತೆ ಒದಗಿಸಲು ರಾಜೀವ್‌ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ, ಸ್ವಯಂ ಉದ್ಯೋಗಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದಿಂದ ಬಡ್ಡಿರಹಿತ ಸಾಲ ನೀಡಲಾಗುವುದು. ಉತ್ಕೃಷ್ಟ ಚಿಕಿತ್ಸೆ ಮತ್ತು ಕಾನೂನು ನೆರವು ಒದಗಿಸಲು ಮಹಿಳಾ ಅಭಿವೃದ್ಧಿ ನಿಗಮದಲ್ಲಿ ವಿಶೇಷ ನಿಧಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

4 ಸಾವಿರ ಶಿಶುಪಾಲನಾ ಕೇಂದ್ರ ಸ್ಥಾಪನೆ
– ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಹಿಳೆಯರು ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಶಿಶುಪಾಲನಾ ಸೌಲಭ್ಯಗಳ ಅಗತ್ಯವಾಗಿದೆ. ಇದಕ್ಕಾಗಿ 2022-23ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದ ಕಾರ್ಯಕ್ರಮವನ್ನು ವಿಸ್ತರಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ನಗರ ಪ್ರದೇಶದಲ್ಲಿ 4 ಸಾವಿರ ಶಿಶುಪಾಲನಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯ ಒಗ್ಗೂಡಿಸುವಿಕೆಯ ಮೂಲಕ 500 ಶಿಶುವಿಹಾರಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಹಾಸ್ಟೆಲ್‌ಗ‌ಳ ಗುಣಮಟ್ಟ ಸೂಚ್ಯಂಕ
ಪರಸ್ಥಳದ ವಿದ್ಯಾರ್ಥಿಗಳು ಮತ್ತು ಯುವ ಉದ್ಯೋಗಿಗಳು ತಮ್ಮ ಅವಶಕ್ಯತೆ, ದೂರ, ಗುಣಮಟ್ಟ, ಶುಲ್ಕ ಹಾಗೂ ಇತರ ಮಾನದಂಡಗಳಿಗೆ ಅನುಗುಣವಾಗಿ ಸೂಕ್ತ ಹಾಸ್ಟೆಲ್‌ಗ‌ಳನ್ನು ಆಯ್ಕೆ ಮಾಡಿಕೊಳ್ಳಲು ಸರ್ಕಾರಿ ಮತ್ತು ಖಾಸಗಿ ಹೆಣ್ಣು ಮಕ್ಕಳ ಹಾಸ್ಟೆಲ್‌ಗ‌ಳ ಗುಣಮಟ್ಟ ಸೂಚ್ಯಂಕ ಪಟ್ಟಿಯನ್ನು ಆನ್‌ಲೈನ್‌ ವೇದಿಕೆ ಸೃಜಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ “ಆರ್ಥಿಕ ಭದ್ರತೆ’
25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿರುವ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50 ಸಾವಿರ ಮತ್ತು ಸಹಾಯಕಿಯರಿಗೆ 30 ಸಾವಿರ ರೂ.ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗಿದೆ. ಇದು ಅಂಗನವಾಡಿ ಕಾರ್ಯಕರ್ತೆಯರ ಬಹುಕಾಲದ ಬೇಡಿಕೆಯಾಗಿತ್ತು. ಅದೇ ರೀತಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಪರಿಗಣಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನ (ಗ್ರಾಚ್ಯುಟಿ) ನೀಡಲು ನಿರ್ಧರಿಸಿದೆ. ಇದಕ್ಕಾಗಿ 40 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

ಹೊಸ ಯೋಜನೆಗಳು:
– ಮಹಿಳೆಯರ ಆರ್ಥಿಕ ಚಟುವಟಿಕೆಗಳ ಪ್ರೋತ್ಸಾಹಕ್ಕೆ “ಗೃಹಿಣಿ ಶಕ್ತಿ’
– ಮಹಿಳಾ ಕೃಷಿ ಕಾರ್ಮಿಕರಿಗೆ ಆರ್ಥಿಕ ಬಲ ನೀಡಲು “ಶ್ರಮ ಶಕ್ತಿ’
– ಹೆಣ್ಣುಮಕ್ಕಳಲ್ಲಿ ಅಪೌಷ್ಟಿಕತೆ-ರಕ್ತಹೀನತೆ ತಡೆಯಲು “ಆರೋಗ್ಯ ಪುಷ್ಟಿ’
– ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌ಗೆ “ವಿದ್ಯಾವಾಹಿನಿ’
– ವಿಕಲಚೇತನರಿಗೆ ಸ್ವಯಂಚಾಲಿತ ದ್ವಿಚಕ್ರವಾಹನಕ್ಕೆ “ಸ್ವಚೇತನ’

– ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ಮತ್ತು ಮಹಿಳಾ ಸಬಲೀಕರಣ ಇಲಾಖೆ ರೂಪಿಸಲು ನಿರ್ಧಾರ.
-ಮಕ್ಕಳ ಪಾಲನಾ ಸಂಸ್ಥೆಗಳ ಆರೈಕೆಯಿಂದ ಹೊರಬಂದ 18ರಿಂದ 21 ವರ್ಷದೊಳಗಿನ ಹೆಣ್ಣುಮಕ್ಕಳ ಆರೈಕೆಗೆ ಜಾರಿಯಲ್ಲಿರುವ ಯೋಜನೆಯನ್ನು ಪ್ರಸಕ್ತ ವರ್ಷ ಗಂಡು ಮಕ್ಕಳಿಗೂ ವಿಸ್ತರಿಸಿ 4 ಅನುಪಾಲನಾ ಗೃಹಗಳ ಸ್ಥಾಪನೆಗೆ 2 ಕೋಟಿ ರೂ. ಅನುದಾನ.
– “ಸ್ವಚೇತನ’ ಯೋಜನೆಯಡಿ 5 ಸಾವಿರ ಅರ್ಹ ವಿಶೇಷಚೇತನರಿಗೆ ಸ್ವಯಂಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು 50 ಕೋಟಿ ರೂ.
– ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳ ನಗರ ಪ್ರದೇಶಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ 250 ಅಂಗನವಾಡಿ ಕಟ್ಟಡಗಳ ನಿರ್ಮಾಣ.
– ಶಾಲೆಯಿಂದ ಹೊರಗುಳಿದ 14-18 ವರ್ಷದ ಪ್ರಾಯಪೂರ್ವ ಬಾಲಕಿಯರಿಗೆ ಪೂರಕ ಪೌಷ್ಟಿಕ ಆಹಾರ ನೀಡುವ ಯೋಜನೆಯನ್ನು ಎಲ್ಲಾ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಿಗೆ ವಿಸ್ತರಣೆ.
ಗೃಹಿಣಿಯರಿಗೆ

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.