“ಸ್ಕೇಲಿಂಗ್’ ಪದ್ಧತಿ ಮರೆತ ರಾಜ್ಯ ಸರ್ಕಾರ
Team Udayavani, May 8, 2019, 3:10 AM IST
ಬೆಂಗಳೂರು: ಕೆಎಎಸ್ ಮುಖ್ಯ ಪರೀಕ್ಷೆಯ ಐಚ್ಛಿಕ ವಿಷಯಗಳಿಗೆ ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲಿ “ಸ್ಕೇಲಿಂಗ್’ ಪದ್ಧತಿ ಜಾರಿಗೆ ತರುವುದನ್ನು ಮರೆತಿರುವ ರಾಜ್ಯ ಸರ್ಕಾರ, ಹೋಟಾ ಸಮಿತಿಯ ಶಿಫಾರಸು ಬಗ್ಗೆ ಕಳೆದ ಐದು ವರ್ಷಗಳಿಂದ “ಜಾಣ ಮೌನ’ ವಹಿಸಿದೆ.
ರಾಜ್ಯ ಸರ್ಕಾರ ತಾನೇ ಒಪ್ಪಿಕೊಂಡಿರುವಂತೆ ಕೆಎಎಸ್ ಮಖ್ಯ ಪರೀಕ್ಷೆಯ 27 ಐಚ್ಛಿಕ ವಿಷಯಗಳಿಗೆ ಸ್ಕೇಲಿಂಗ್ ಪದ್ಧತಿಯನ್ನು ಕಳೆದ 5 ವರ್ಷಗಳಿಂದ ಜಾರಿಗೆ ತರಲು ಮೀನಾಮೇಷ ಎಣಿಸುತ್ತಿರುವುದು ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸುಧಾರಣೆ ಅಥವಾ ಬದಲಾವಣೆ ಅನ್ನುವುದು ಮರೀಚಿಕೆ ಎಂಬುದಕ್ಕೆ ಸಾಕ್ಷಿಯಾಗಿದೆ.
ವ್ಯಾಪಕವಾಗಿ ಭ್ರಷ್ಟಾಚಾರ, ಅಕ್ರಮಗಳು ಬೆಳೆಕಿಗೆ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಆಮೂಲಾಗ್ರ ಸುಧಾರಣೆ ತರಲು ಅಗತ್ಯ ಶಿಫಾರಸುಗಳನ್ನು ನೀಡಲು ಕೇಂದ್ರ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಪಿ.ಸಿ. ಹೋಟಾ ಸಮಿತಿ ರಚಿಸಲಾಗಿತ್ತು.
2013ರಲ್ಲಿ ವರದಿ ನೀಡಿದ ಹೂಟಾ ಸಮಿತಿ ಒಟ್ಟು 65 ಪ್ರಮುಖ ಶಿಫಾರಸುಗಳನ್ನು ಮಾಡಿತ್ತು. ಈ ಪೈಕಿ “ಸ್ಕೇಲಿಂಗ್’ ಪದ್ಧತಿ ಅಳವಡಿಸುವ ಶಿಫಾರಸು ಮುಖ್ಯವಾದದ್ದು. ಸ್ಕೇಲಿಂಗ್ ಪದ್ಧತಿ ಸೇರಿ ಹೋಟಾ ಸಮಿತಿಯ ಬಹುತೇಕ ಶಿಫಾರಸುಗಳನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.
ಅಲ್ಲದೇ ರಾಜ್ಯ ಸರ್ಕಾರ ಒಪ್ಪಿಕೊಂಡಿರುವ ಹೋಟಾ ಸಮಿತಿಯ ಶಿಫಾರಸುಗಳಿಗೆ ಸಚಿವ ಸಂಪುಟದ ಅನುಮೋದನೆ ಸಹ ಸಿಕ್ಕಿದೆ. ಮುಖ್ಯವಾಗಿ ಕೆಎಎಸ್ ಮುಖ್ಯ ಪರೀಕ್ಷೆಯ ಐಚ್ಛಿಕ ವಿಷಯಗಳಿಗೆ “ಸ್ಕೇಲಿಂಗ್’ ಪದ್ಧತಿ ಜಾರಿಗೆ ತರಲು ರಾಜ್ಯ ಸರ್ಕಾರ 2017ರಲ್ಲೇ ತಾತ್ವಿಕವಾಗಿ ಒಪ್ಪಿಕೊಂಡಿದೆ. ಆದರೆ, ಈವರೆಗೆ ಅದು ಕಾರ್ಯಗತಗೊಂಡಿಲ್ಲ. ಈ ವಿಚಾರದಲ್ಲಿ ಕೆಪಿಎಸ್‌ಸಿಯವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯತ್ತ ಬೊಟ್ಟು ಮಾಡುತ್ತಿದ್ದರೆ, ಇಲಾಖೆ ಸರ್ಕಾರದತ್ತ ಕೈ ತೋರಿಸುತ್ತಿದೆ.
ಏನಿದು “ಸ್ಕೇಲಿಂಗ್’ ಪದ್ಧತಿ: ಕೆಎಎಸ್ ಮುಖ್ಯ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ 27 ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇರುತ್ತದೆ. ಹೀಗಿರುವಾಗ ಕನ್ನಡ ಸಾಹಿತ್ಯ, ಇತಿಹಾಸ, ಭೂಗೋಳಶಾಸ್ತ್ರ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಸಾರ್ವಜನಿಕ ಆಡಳಿತ ವಿಷಯಗಳನ್ನು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಮೌಲ್ಯಮಾಪನದ ವೇಳೆ ಈ ವಿಷಯಗಳಿಗೆ ಮಾತ್ರ ಆದ್ಯತೆ ಮತ್ತು ಒತ್ತು ನೀಡಲಾಗುತ್ತದೆ. ಉಳಿದ ವಿಷಯಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಅಲ್ಲದೇ ಮೌಲ್ಯಮಾಪನವನ್ನೂ ಅಷ್ಟಕಷ್ಟೇ ಮಾಡಲಾಗುತ್ತದೆ. ಹೀಗಾಗಿ, ಕನ್ನಡ ಸಾಹಿತ್ಯ ಮತ್ತಿತರ ಸರಳ ವಿಷಯಗಳನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಾರೆ.
ಇದರಿಂದಾಗಿ ಉಳಿದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿಯಲ್ಲೂ ಐಚ್ಛಿಕ ವಿಷಯಗಳಿಗೆ ಸ್ಕೇಲಿಂಗ್ ಪದ್ಧತಿ ಅಳವಡಿಸಬೇಕೆಂದು ಹೋಟಾ ಸಮಿತಿ ಶಿಫಾರಸು ಮಾಡಿತ್ತು.
ಸಿಐಡಿ ವರದಿಯೂ ಹೇಳಿತ್ತು: 2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಿದ್ದ ಸಿಐಡಿ ಈ ಅಂಶವನ್ನು ಉಲ್ಲೇಖೀಸಿತ್ತು. ಈ ಸಾಲಿನಲ್ಲಿ ಮುಖ್ಯ ಪರೀಕ್ಷೆ ಬರೆದ 6 ಸಾವಿರ ಅಭ್ಯರ್ಥಿಗಳ ಪೈಕಿ 716 ಅಭ್ಯರ್ಥಿಗಳು ಭೂಗೋಳಶಾಸ್ತ್ರವನ್ನು ಐಚ್ಛಿಕ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಿದ್ದರು.
ಇದರಲ್ಲಿ 571 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆ ಪೈಕಿ 167 ಅಭ್ಯರ್ಥಿಗಳನ್ನು ವ್ಯಕ್ತಿತ್ವ ಪರೀಕ್ಷೆಗೆ ಕರೆಯಲಾಗಿತ್ತು. ಅದೇ ರೀತಿ ಕನ್ನಡ ಸಾಹಿತ್ಯ, ಇತಿಹಾಸ, ಮಾನವ ಶಾಸ್ತ್ರ, ಸಾರ್ವಜನಿಕ ಆಡಳಿತ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದವರೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾಗಿದ್ದರು ಎಂದು ವರದಿ ಹೇಳಿತ್ತು.
“ಕಾಮಧೇನು’ ವಿಷಯಗಳು: ಕೆಎಎಸ್ ಮುಖ್ಯ ಪರೀಕ್ಷೆಗೆ ಕೃಷಿ, ಕೃಷಿ ಮಾರುಕಟ್ಟೆ, ಸಹಕಾರ, ರೇಷ್ಮೆ, ಮೀನುಗಾರಿಕೆ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಸಿವಿಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ ಸೇರಿದಂತೆ ಒಟ್ಟು 27 ಐಚ್ಛಿಕ ವಿಷಯಗಳಿವೆ. ಈ ಪೈಕಿ ಕನ್ನಡ ಸಾಹಿತ್ಯ, ಭೂಗೋಳಶಾಸ್ತ್ರ, ಮಾನವಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ ಮತ್ತಿತರ ವಿಷಯಗಳು ಅಭ್ಯರ್ಥಿಗಳ ಪಾಲಿಗೆ ಬಯಸಿದಷ್ಟು ಅಂಕಗಳನ್ನು ಬಾಚಿಕೊಳ್ಳುವ “ಕಾಮಧೇನು’ ವಿಷಯಗಳಿದ್ದಂತೆ.
ಹಾಗಾಗಿ ಇದೇ ವಿಷಯಗಳನ್ನು ಹೆಚ್ಚಾಗಿ ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಾರೆ. ಅದರಂತೆ 2006ನೇ ಸಾಲಿನ ನೇಮಕಾತಿ ವೇಳೆ ಅತಿ ಹೆಚ್ಚು ಅಭ್ಯರ್ಥಿಗಳು ಇತಿಹಾಸ, 2010ರಲ್ಲಿ ಕನ್ನಡ ಸಾಹಿತ್ಯ, 2011ರಲ್ಲಿ ಭೂಗೋಳಶಾಸ್ತ್ರ, 2014ರಲ್ಲಿ ಕನ್ನಡ ಸಾಹಿತ್ಯವನ್ನು ಹೆಚ್ಚು ಅಭ್ಯರ್ಥಿಗಳು ಐಚ್ಛಿಕ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಿರುವುದು ಗಮನಾರ್ಹ.
* ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.