Scenario of Narcotics: ʼಅಕ್ರಮ ಮಾದಕ ಪದಾರ್ಥ ಭಾರತಕ್ಕೆ ಮಾತ್ರವಲ್ಲ, ಜಾಗತಿಕ ಸಮಸ್ಯೆʼ

ಮಾದಕ ಪದಾರ್ಥಗಳ ಕುರಿತ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ

Team Udayavani, Aug 25, 2024, 8:04 PM IST

Amith-Sha

ರಾಯಪುರ (ಛತ್ತೀಸ್‌ಗಢ): ಅಕ್ರಮ ಮಾದಕ ಪದಾರ್ಥಗಳ ವ್ಯಾಪಾರವು ಭಾರತಕ್ಕೆ ಮಾತ್ರ ಸವಾಲು ಅಲ್ಲ, ಜಾಗತಿಕ ಸಮಸ್ಯೆಯೂ ಆಗಿದೆ. ದೇಶವು ದೃಢ ಸಂಕಲ್ಪ ಮತ್ತು ಕಾರ್ಯತಂತ್ರದೊಂದಿಗೆ ಈ ಅಪಾಯದ ವಿರುದ್ಧ ಹೋರಾಡಬೇಕಾದ  ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟರು.

ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಭಾನುವಾರ ಮಾದಕ ಪದಾರ್ಥಗಳ ಸನ್ನಿವೇಶ ಕುರಿತು ನಡೆದ ಸಮಾವೇಶ ಸಭೆಯಲ್ಲಿ ಮಾತನಾಡಿ,  ಮಾದಕ ಪದಾರ್ಥಗಳ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧಿಸಲು ನಾಲ್ಕು ಸೂತ್ರಗಳ ಅಳವಡಿಸಬೇಕಾಗಿದೆ ಅವುಗಳು ಯಾವುದೆಂದರೆ  “ಮಾದಕ ವಸ್ತುಗಳ ಪತ್ತೆ, ಸಂಪರ್ಕ ನಾಶ, ಅಪರಾಧಿಗಳ ಬಂಧನ ಮತ್ತು ವ್ಯಸನಿಗಳ ಪುನರ್ವಸತಿ”ಯಂತಹ ಕ್ರಮಗಳ  ಅಳವಡಿಸಿಕೊಳ್ಳುವುದರಿಂದ ಮಾದಕ ಪದಾರ್ಥಗಳ ವಿರುದ್ಧದ ಹೋರಾಟದಲ್ಲಿ ಜಯಗಳಿಸಲು  ಸಾಧ್ಯ ಎಂದು ಹೇಳಿದರು.

“2047ರಲ್ಲಿ ದೇಶವು ಸ್ವಾತಂತ್ರ್ಯಗಳಿಸಿ 100 ವರ್ಷ ಆಚರಿಸುವ ವೇಳೆಗೆ ಭಾರತದಲ್ಲಿ ಮಾದಕ ದ್ರವ್ಯ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆಗೈದಿದ್ದಾರೆ. ಕ್ರಮೇಣ ಈ ನಿರ್ಣಯವು 140 ಕೋಟಿ ಜನರ ನಿರ್ಣಯವಾಗಿದೆ. ಸಮೃದ್ಧ, ಸುರಕ್ಷಿತ ಮತ್ತು ವೈಭವಯುತ ಭಾರತ ಆಗುವಲ್ಲಿ ಮಾದಕ ದ್ರವ್ಯ ಮುಕ್ತ ಭಾರತದ ನಿರ್ಣಯವು ಬಹಳ ಮುಖ್ಯ ಎಂದು ಹೇಳಿದರು.

ಯುವಕರ ಗುರಿಯಾಗಿಸಿ ಅವರ ನಾಶಪಡಿಸುವ ಜೊತೆಗೆ ಅಕ್ರಮ ಮಾದಕ ದ್ರವ್ಯಗಳ ವ್ಯಾಪಾರದಿಂದ ಬಂದ ಹಣವನ್ನು ದೇಶ ವಿರೋಧಿ ಚಟುವಟಿಕೆಗಳಿಗೂ ಬಳಸಲಾಗುತ್ತಿದೆ. ದೇಶವನ್ನು ಮಾದಕ ದ್ರವ್ಯ ಮುಕ್ತಗೊಳಿಸುವುದು ಅದರ ವಿರುದ್ಧ ಶೂನ್ಯ ಸಹಿಷ್ಣುತೆಯಿಂದ ಇರುವುದು ದೇಶದ ಜವಾಬ್ದಾರಿಯಾಗಿದೆ”. ಛತ್ತೀಸ್‌ಗಢದಲ್ಲೂ  ಮಾದಕ ವಸ್ತುಗಳ ಬಳಕೆಯ ಬಗ್ಗೆಯೂ ಶಾ ಕಳವಳ ವ್ಯಕ್ತಪಡಿಸಿದರು.

ಛತ್ತೀಸ್‌ಗಢವು ಒಡಿಶಾ ಮತ್ತು ಆಂಧ್ರಪ್ರದೇಶ ಸೇರಿದಂತೆ ಏಳು ರಾಜ್ಯಗಳೊಂದಿಗೆ ಗಡಿಯ ಹಂಚಿಕೊಂಡಿದ್ದು, ಅಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡಲಾಗುತ್ತದೆ. ಛತ್ತೀಸ್‌ಗಢ ರಾಜ್ಯವೊಂದರಲ್ಲೇ  4.98 ಶೇಕಡಾ ಗಾಂಜಾ ಬಳಕೆ ವರದಿಯಾಗಿದೆ, ಇದು ರಾಷ್ಟ್ರೀಯ ಸರಾಸರಿ 2.83 ಶೇಕಡಾಕ್ಕಿಂತ ಹೆಚ್ಚಿದ್ದು  ಇದು ಕಳವಳಕಾರಿ ವಿಷಯ ಎಂದು ಹೇಳಿದರು.

ಛತ್ತೀಸ್‌ಗಢಕ್ಕೆ  3 ದಿನಗಳ ಪ್ರವಾಸದಲ್ಲಿರುವ  ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಸಮಾವೇಶಕ್ಕೂ ಮೊದಲು ನವ ರಾಯಪುರದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ವಲಯ ಕಚೇರಿಯ ವರ್ಚ್ಯುವಲ್‌ ಮೂಲಕ ಉದ್ಘಾಟಿಸಿದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.