School Children: ಮೊಟ್ಟೆ, ಚಿಕ್ಕಿ ವಿತರಣೆ ಅಕ್ರಮ: ಪ್ರತೀ ದಿನ ಮಾಹಿತಿ ಸಲ್ಲಿಕೆಗೆ ಸೂಚನೆ
ಕರ್ತವ್ಯ ಲೋಪಕ್ಕಾಗಿ ಒಟ್ಟು 98 ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆ ನೋಟಿಸ್
Team Udayavani, Nov 11, 2024, 6:40 AM IST
ಬೆಂಗಳೂರು: ರಾಜ್ಯದಲ್ಲಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿ ವಿತರಣೆಯ ಮಾಹಿತಿಯನ್ನು ಪಿಎಂ ಪೋಷನ್ ವೆಬ್ಸೈಟ್ನಲ್ಲಿ ಪ್ರತೀದಿನ ಆನ್ಲೈನ್ ಮೂಲಕ ಸಲ್ಲಿಸುವಂತೆ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.
ರಾಜ್ಯದಲ್ಲಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ (ಎಪಿಎಫ್) ದ ನೆರವಿನೊಂದಿಗೆ ವಾರದ ಆರು ದಿನ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿ ವಿತರಣೆಯ ಯೋಜನೆ ಜಾರಿಯಲ್ಲಿದೆ. ವಾರದ ಎರಡು ದಿನ ರಾಜ್ಯ ಸರಕಾರ ಮತ್ತು ಉಳಿದ ನಾಲ್ಕು ದಿನ ಮೊಟ್ಟೆ, ಬಾಳೆಹಣ್ಣು ವಿತರಣೆಯ ವೆಚ್ಚವನ್ನು ಎಪಿಎಫ್ ನಿರ್ವಹಿಸುತ್ತದೆ.
ಇತ್ತೀಚೆಗೆ 367 ಶಾಲೆಗಳಲ್ಲಿ ಎಪಿಎಫ್ ಯೋಜನೆಯ ಮೌಲ್ಯಮಾಪನ ನಡೆಸಿದಾಗ 66 ಶಾಲೆಗಳಲ್ಲಿ ಮೊಟ್ಟೆ ವಿತರಿಸದಿರುವುದು, ಮೊಟ್ಟೆ ತಿನ್ನದ ಮಕ್ಕಳಿಗೆ ಆದ್ಯತೆಯ ಮೇರೆಗೆ ಬಾಳೆಹಣ್ಣು ನೀಡದೆ ಚಿಕ್ಕಿ ನೀಡಿರುವುದು, ಹಾಗೆಯೇ ನಿಗದಿತ ತೂಕಕ್ಕಿಂತ ಕಡಿಮೆ ತೂಕದ ಚಿಕ್ಕಿ ನೀಡಿರುವುದು ಬಹಿರಂಗವಾಗಿತ್ತು. ಈ ಕರ್ತವ್ಯ ಲೋಪಕ್ಕಾಗಿ ಒಟ್ಟು 98 ಅಧಿಕಾರಿಗಳಿಗೆ ಶಾಲಾ ಶಿಕ್ಷಣ ಇಲಾಖೆ ನೋಟಿಸ್ ನೀಡಿತ್ತು. ಈ ಬಗ್ಗೆ ‘ಉದಯವಾಣಿ’ ನವೆಂಬರ್ 8 ರಂದು ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.