School Development: 2,000 ಸರಕಾರಿ ಶಾಲೆಗೆ ಸಿಎಸ್‌ಆರ್ ನಿಧಿ: ಡಿ.ಕೆ.ಶಿವಕುಮಾರ್
"ಸಮತ್ವ' ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಚಾಲನೆ, ಗ್ರಾಮೀಣ ವಿದ್ಯಾರ್ಥಿಗಳ ವಲಸೆ ತಡೆಗೆ ಯೋಜನೆ
Team Udayavani, Aug 20, 2024, 6:37 AM IST
ಬೆಂಗಳೂರು: ನಮ್ಮ ಮಕ್ಕಳು ಜಾಗತಿಕ ಪೈಪೋಟಿ ಎದುರಿಸಬೇಕು. ಹಾಗಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯ. ಈ ಹಿನ್ನೆಲೆಯಲ್ಲಿ ನಾವು ಸಿಎಸ್‌ಆರ್ ನಿಧಿಯನ್ನು ಪೂರ್ಣ ಪ್ರಮಾಣದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಸೂಚಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಸಮಾವೇಶ -2024ರಲ್ಲಿ ಮಾತನಾಡಿ, ಸಿಎಸ್‌ಆರ್ ನಿಧಿಯನ್ನು ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಶಿಕ್ಷಣ ಇಲಾಖೆ ರೂಪಿಸಿರುವ “ಸಮತ್ವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಜನತೆ ತಮ್ಮ ಮಕ್ಕಳ ಉತ್ತಮ ಶಿಕ್ಷಣಕ್ಕಾಗಿ ಊರು ತೊರೆದು ಬೆಂಗಳೂರಿಗೆ ವಲಸೆ ಬರುವುದನ್ನು ತಡೆಯಲು ಗ್ರಾಮೀಣ ಶಾಲೆಗಳನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸಿಎಸ್‌ಆರ್ ನಿಧಿಯನ್ನು ಶಾಲೆಗಳಿಗೆ ಬಳಸಲು ತೀರ್ಮಾನಿಸಿದ್ದೇವೆ. ಅದರಂತೆ ರಾಜ್ಯದಲ್ಲಿನ ಉದ್ಯಮಿಗಳು ರಾಜ್ಯದಲ್ಲೇ ತಮ್ಮ ಸಿಎಸ್‌ಆರ್ ನಿಧಿಯನ್ನು ಬಳಸುವಂತೆ ಜಿಲ್ಲಾಧಿಕಾರಿಗಳು ನಿಗಾ ಇಡಬೇಕು. ಜಿಲ್ಲೆ, ತಾಲೂಕು ಕೇಂದ್ರ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಹೊರಗಿನ ಶಾಲೆಗಳಲ್ಲಿ ಮಾತ್ರ ಸಿಎಸ್‌ಆರ್ ನಿಧಿ ಬಳಕೆ ಮಾಡಬೇಕು ಎಂದರು.
ಸಿಎಸ್‌ಆರ್ ನಿಧಿಯಡಿ ಅಭಿವೃದ್ಧಿ ಪಡಿಸಲು ರಾಜ್ಯದಲ್ಲಿ 2,000 ಶಾಲೆಗಳನ್ನು ಗುರುತಿಸಿದ್ದು ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು. ಇಡೀ ಶಾಲೆಯನ್ನು ಅಭಿವೃದ್ಧಿ ಪಡಿಸುವುದು ಅಥವಾ ಮೂಲ ಸೌಕರ್ಯ ಕಲ್ಪಿಸುವುದು ಅಥವಾ ಹೊಸದಾಗಿ ಶಾಲೆಯನ್ನು ಕಟ್ಟಲು ಅವಕಾಶವಿದೆ. ನೀವು ಸರಕಾರಿ ಶಾಲೆಗಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಿ, ನಿಮಗೆ ಬೇಕಾದ ರೀತಿ ಬ್ರಾಂಡಿಂಗ್ ಮಾಡಿಕೊಳ್ಳಿ ಎಂದು ಹೇಳಿದರು.
ರಾಜ್ಯದಲ್ಲಿ 43 ದೊಡ್ಡ ಕಂಪೆನಿಗಳು 4 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಲಾಭದಲ್ಲಿದ್ದು, ಅದರಲ್ಲಿ 8063 ಕೋಟಿ ರೂ. ಸಿಎಸ್‌ಆರ್ ನಿಧಿ ನೀಡುತ್ತಿವೆ. ಇದೊಂದು ದೇಶಕ್ಕೆ ಮಾದರಿ ಕಾರ್ಯಕ್ರಮವಾಗಿದ್ದು, ನಾನೇ ನಮ್ಮೂರಲ್ಲಿ ಶಾಲೆಗಾಗಿ ಭೂಮಿಯನ್ನು ದಾನ ಮಾಡಿದ್ದೇನೆ, ಶಾಲೆಗಳನ್ನು ಅಭಿವೃದ್ಧಿ ಪಡಿಸಿದ್ದೇನೆ ಎಂದರು.
ಇದೇ ವೇಳೆ ಹಲವು ಕಂಪೆನಿಗಳು ಸರಕಾರದ ಜತೆ ಶಾಲೆಗಳ ಅಭಿವೃದ್ಧಿ ಬಗೆಗಿನ ಒಟ್ಟು 68 ಕೋಟಿ ರೂ. ವೆಚ್ಚದ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಹಾಗೆಯೇ ಸಮತ್ವ’ ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾಡಲಾಯಿತು.
ಪ್ರತೀ 3 ಗ್ರಾ.ಪಂ.ಗೆ 1 ಮಾದರಿ ಶಾಲೆ
ಪ್ರಸ್ತುತ ಇರುವ ಶಾಲೆಗಳ ಪುನಶ್ಚೇತನಕ್ಕೆ 4 ಕೋಟಿ ರೂ. ಮತ್ತು ಹೊಸದಾಗಿ ಶಾಲೆ ನಿರ್ಮಾಣಕ್ಕೆ 10 ಕೋಟಿ ರೂ. ವೆಚ್ಚವಾಗಲಿದೆ. 3 ಗ್ರಾ.ಪಂ.ಗೆ 1 ಮಾದರಿ ಶಾಲೆ ನಿರ್ಮಾಣ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಬೆಳಗಾವಿ ವಿಭಾಗದಲ್ಲಿ 143 ಶಾಲೆ, ಕಲಬುರಗಿ ವಿಭಾಗದಲ್ಲಿ 145 ಶಾಲೆ, ಮೈಸೂರು ವಿಭಾಗದಲ್ಲಿ 109 ಶಾಲೆ, ಬೆಂಗಳೂರು ವಿಭಾಗದಲ್ಲಿ 103 ಶಾಲೆಯನ್ನು ಒಟ್ಟು 2,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಗುರಿ ಇದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹೇಳಿದರು.
ರಾಜ್ಯವ್ಯಾಪಿ ಪ್ರಿ ನರ್ಸರಿ ಶಾಲೆ ಆರಂಭ
ಕಲ್ಯಾಣ ಕರ್ನಾಟಕದ ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು, 38 ಸಾವಿರ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುತ್ತದೆ. ಎಲ…ಕೆಜಿಯಿಂದ 12ನೇ ತರಗತಿವರೆಗೂ ಒಂದೇ ಆವರಣದಲ್ಲಿ ಶಿಕ್ಷಣ ಸಿಗುವಂತೆ ಮಾಡುವ ಗುರಿಯಿದೆ. ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.