ಕೋವಿಡ್‌-19 ಸಂದಿಗ್ಧದಲ್ಲಿ ಶಾಲೆ ಆರಂಭದ ಗೊಂದಲ; ಪೋಷಕರಲ್ಲಿ ತಳಮಳ

ಸರಕಾರ ,ಶಿಕ್ಷಣ ಇಲಾಖೆಯಿಂದ ದಿನಕ್ಕೊಂದು ತೀರ್ಮಾನ,ಆದೇಶ ;ಆನ್‌ಲೈನ್‌ ಶಿಕ್ಷಣ,ಶುಲ್ಕದ ವಿಚಾರದಲ್ಲೂ ಗೊಂದಲ

Team Udayavani, Jun 5, 2020, 5:30 AM IST

ಕೋವಿಡ್‌-19 ಸಂದಿಗ್ಧದಲ್ಲಿ ಶಾಲೆ ಆರಂಭದ ಗೊಂದಲ; ಪೋಷಕರಲ್ಲಿ ತಳಮಳ

ಬೆಂಗಳೂರು: ಆನ್‌ಲೈನ್‌ ಶಿಕ್ಷಣ, ಶಾಲೆ ಪುನರಾರಂಭದ ದಿನಾಂಕ ಪ್ರಕಟ, ಖಾಸಗಿ ಶಾಲೆಗಳಿಗೆ ಶುಲ್ಕ ಪಡೆಯಲು ಅನುಮತಿ ಕಲ್ಪಿಸುವ ಸಂಬಂಧ ರಾಜ್ಯ ಸರಕಾರ ಮತ್ತು ಶಿಕ್ಷಣ ಇಲಾಖೆ ದಿನಕ್ಕೊಂದು ಆದೇಶ, ತೀರ್ಮಾನ ಕೈಗೊಳ್ಳುತ್ತಿದ್ದು, ಶಾಲೆ ಆರಂಭ ವಿಚಾರ ಗೊಂದಲದ ಗೂಡಾಗಿದೆ.

ರಾಜ್ಯದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1ರಿಂದ 10ನೇ ತರಗತಿಯಲ್ಲಿ ಸರಿಸುಮಾರು 1 ಕೋಟಿಗೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಮತ್ತು ಸರಕಾರ ನೀಡುವ ಪ್ರತೀ ನಿರ್ದೇಶನವೂ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರು, ಪೋಷಕರ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡದಿಂದ ಸರಕಾರ ಶಾಲೆ ಆರಂಭ ಕುರಿತು ದಿಢೀರ್‌ ತೀರ್ಮಾನ ಕೈಗೊಂಡಿದೆ ಎಂಬ ಆರೋಪ ಕೇಳಿಬರುತ್ತಿದೆ.

ಗೊಂದಲ 1: ಆನ್‌ ಲೈನ್‌ ಶಿಕ್ಷಣ
ಮಾರ್ಚ್‌ ಅಂತ್ಯದಲ್ಲಿ ಲಾಕ್‌ಡೌನ್‌ ಘೋಷಣೆ ಯಾಗುತ್ತಿದ್ದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬೆನ್ನಲ್ಲೇ ಆನ್‌ಲೈನ್‌ ತರಗತಿ ಆರಂಭಿಸಲು ಇಲಾಖೆ ಅನುಮತಿ ನೀಡಿತು.

ಇದಕ್ಕೆ ವ್ಯಾಪಕ ವಿರೋಧ ಬಂದ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೂ.ಪ್ರಾ. ತರಗತಿಗಳಿಗೆ ಆನ್‌ಲೈನ್‌ ತರಗತಿ ನಡೆಸದಂತೆ ಸುತ್ತೋಲೆ ಹೊರಡಿಸಲು ಶಿಕ್ಷಣ ಸಚಿವರು ಮೇ 12ರಂದು ಶಿಕ್ಷಣ ಇಲಾಖೆಯ ಆಯುಕ್ತರಿಗೆ ನಿರ್ದೇಶಿಸಿದರು. ಆದರೆ ಇಂದಿಗೂ ಅನೇಕ ಶಾಲೆಗಳು ಆನ್‌ಲೈನ್‌ ತರಗತಿ ನಡೆಸುತ್ತಿವೆ. ಸರಕಾರ ತುಂಬಾ ಸೂಕ್ಷ್ಮವಾಗಿ ಈ ವಿಚಾರವನ್ನು ತೆಗೆದುಕೊಳ್ಳಬೇಕು ಎಂದು ಶಿಕ್ಷಣ ತಜ್ಞರು ಆಗ್ರಹಿಸಿದ್ದಾರೆ.

ಗೊಂದಲ-2: ಶುಲ್ಕ
ಕಂತುಗಳಾಗಿ ಶುಲ್ಕ ಪಾವತಿಸಲು ಅನುಮತಿ ನೀಡಲಾಯಿತು. ಖಾಸಗಿ ಶಾಲಾಡಳಿತ ಮಂಡಳಿ ಗಳು ಎಲ್ಲ ಹೆತ್ತವರು, ಪೋಷಕರಿಂದಲೂ ಶುಲ್ಕ ಸ್ವೀಕರಿಸಲು ಮುಂದಾದವು. ಈ ಬಗ್ಗೆ ದೂರಿದರೂ ಪ್ರಯೋಜನವಾಗಿಲ್ಲ, ಸಂಕಷ್ಟದಲ್ಲೂ ಶುಲ್ಕ ಪಾವತಿ ಸಲೇ ಬೇಕಾಯಿತು. ಇಲಾಖೆಯಿಂದ ಪರಿಹಾರ ಸಿಗದೆ ಸಮಸ್ಯೆ ಎದುರಿಸುವಂತಾಯಿತು ಎಂದು ಹೆತ್ತವರು, ಪೋಷಕರು ದೂರಿದ್ದಾರೆ.

ಗೊಂದಲ -3: ಶಾಲೆ ಪುನಾರಂಭ
ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷ ಆರಂಭದ ಉದ್ದೇಶಿತ ದಿನಾಂಕವನ್ನು ಈಗಾಗಲೇ ಪ್ರಕಟಿಸಿದ್ದು, ಎಲ್ಲ ಹೆತ್ತವರು, ಪೋಷಕರಲ್ಲಿ ಹೆಚ್ಚು ಆತಂಕ ಸೃಷ್ಟಿಸಿದೆ. ಜುಲೈ ತಿಂಗಳಲ್ಲೇ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ತರಗತಿ ಆರಂಭಿಸುವ ಇರಾದೆ ಪ್ರಕಟಿಸಿರುವುದು ಇನ್ನಷ್ಟು ಭಯ ಹುಟ್ಟಿಸಿದೆ.

ಕೋವಿಡ್‌-19 ದಿನೇ ದಿನೆ ಹೆಚ್ಚಾಗುತ್ತಿದೆ. ಬಹುತೇಕ ಜಿಲ್ಲೆಗಳ ಶಾಲೆಗಳು ಕ್ವಾರಂಟೈನ್‌ ಕೇಂದ್ರಗಳಾಗಿವೆ. ಇದೆಲ್ಲದರ ನಡುವೆಯೇ ಇಲಾಖೆ ಶಾಲೆ ಆರಂಭದಉದ್ದೇಶಿತ ದಿನಾಂಕ ಪ್ರಕಟಿಸಿದ್ದು, ಈ ನಡೆಗೆ ವಿಪಕ್ಷಗಳ ಸಹಿತ ಶಿಕ್ಷಣ ತಜ್ಞರು, ಸಾರ್ವಜನಿಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.

ಖಾಸಗಿ ಶಾಲೆಗಳು ಈ ಶೈಕ್ಷಣಿಕ ವರ್ಷಕ್ಕೆ ಕಳೆದ ವರ್ಷದ ಶುಲ್ಕದ ಶೇ.50ರಷ್ಟು ಮಾತ್ರ ಪಡೆಯಬೇಕು. ಸರಕಾರ ಈ ಸಂಬಂಧ ಆದೇಶ ಹೊರಡಿಸಬೇಕು ಎಂಬುದು ಪೋಷಕರ ಒತ್ತಾಯ.

ಆತಂಕ ಬೇಡ
ರಾಜ್ಯದಲ್ಲಿ ಶಾಲೆ ಪುನರಾರಂಭ ಮಾಡುವ ಸಂಬಂಧ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಮಕ್ಕಳ ಸುರಕ್ಷೆ, ಕಲಿಕೆ ಮತ್ತು ಭವಿಷ್ಯದ ಹಿತವನ್ನು ಗಮನ ದಲ್ಲಿಟ್ಟುಕೊಂಡು ಪ್ರಜಾಸತ್ತಾತ್ಮಕವಾಗಿ ಮುಂದೆ ಸಾಗಲಿದ್ದೇವೆ. ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳನ್ನು ಸದ್ಯ ಆರಂಭಮಾಡಬಾರದು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೋವಿಡ್‌-19 ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೂ ಶಾಲೆ ಆರಂಭಿಸಬಾರದು ಎಂಬ ಆಗ್ರಹವೂ ಕೇಳಿ ಬರುತ್ತಿದೆ. ಇದರ ಜತೆಗೆ ಕೊರೊನಾ ಪರಿಸ್ಥಿತಿ ಹೀಗೆ ದೀರ್ಘಾವಧಿ ಇರಲಿದೆ. ಆದ್ದರಿಂದ ಸಾಮಾಜಿಕ ಅಂತರ, ಮಾಸ್ಕ್ ಇತ್ಯಾದಿ ಸುರಕ್ಷಾ ಕ್ರಮಗಳೊಂದಿಗೆ ಶಾಲೆ ಆರಂಭಿಸಿ ಎಂಬ ಮನವಿಯೂ ಬಂದಿದೆ. ಎಲ್ಲ ಅಂಶಗಳನ್ನು ಪರಿಶೀಲಿಸಿ ಸರಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ; ಆತುರ ಅಥವಾ ತರಾತುರಿಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಇಸ್ರೇಲ್‌ನಲ್ಲಿ 244 ಮಕ್ಕಳಿಗೆ ಕೋವಿಡ್‌-19
ಲಾಕ್‌ ಡೌನ್‌ ನಡುವೆಯೇ ಶಾಲೆ ತೆರೆದಿದ್ದ ಇಸ್ರೇಲ್‌ ಪೆಟ್ಟು ತಿಂದಿದೆ. ಎರಡು ವಾರಗಳ ಹಿಂದೆಯೇ ಶಾಲೆಗಳನ್ನು ತೆರೆಯಲಾಗಿದ್ದು, ಸುಮಾರು 244 ಮಕ್ಕಳಿಗೆ ಕೋವಿಡ್‌-19  ತಗಲಿದೆ. ಅಷ್ಟೇ ಅಲ್ಲ, ಒಂದೇ ಶಾಲೆಯ 130 ಮಕ್ಕಳಲ್ಲಿ ಕೋವಿಡ್‌-19 ಕಾಣಿಸಿಕೊಂಡಿದೆ. ಒಟ್ಟಾರೆ ಯಾಗಿ 42 ಶಾಲೆ ಗಳು ಮತ್ತು ಕಿಂಡರ್‌ ಗಾರ್ಟನ್‌ಗಳ 6,800 ಮಕ್ಕಳು ಮತ್ತು ಶಿಕ್ಷಕರನ್ನು ಕ್ವಾರಂಟೈ ನ್‌ ಮಾಡ ಲಾಗಿದೆ.

ಇದು ಸೂಕ್ಷ್ಮ ವಿಚಾರ
ಇಂತಹ ಪರಿಸ್ಥಿತಿಯಲ್ಲಿ ಶಿಕ್ಷಣಕ್ಕಿಂತ ಜೀವ ಮುಖ್ಯ. ಶಾಲೆ ಆರಂಭಕ್ಕೆ ಅವಸರಿಸ ಬಾರದು. ಇದು ತುಂಬ ಸೂಕ್ಷ್ಮ ವಿಚಾರ. ನಿತ್ಯ ಪ್ರತಿ ಮಗುವಿನ ಆರೋಗ್ಯ ತಪಾಸಣೆ ಮತ್ತು ಸ್ಯಾನಿಟೈಸೇಶನ್‌ ಮಾಡಬೇಕಾಗು ತ್ತದೆ. ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ. ಹೀಗಾಗಿ ಶಾಲೆ ಆರಂಭಿಸಲು ಸರಕಾರ ಆತುರಪಡಬಾರದು.
–  ವಾಸುದೇಶ ಶರ್ಮಾ,ಶಿಕ್ಷಣ ತಜ್ಞರು

ಟಾಪ್ ನ್ಯೂಸ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.