ತರಾತುರಿಯಲ್ಲಿ ಶಾಲೆಗಳನ್ನು ಆರಂಭ ಮಾಡುವುದಿಲ್ಲ: ಸಚಿವ ಸುರೇಶ್ ಕುಮಾರ್
Team Udayavani, Jun 4, 2020, 1:22 PM IST
ಬೆಂಗಳೂರು : ರಾಜ್ಯದಲ್ಲಿ ಶಾಲೆ ಪುನರ್ ಆರಂಭ ಮಾಡುವ ಸಂಬಂಧ ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಮಕ್ಕಳ ಸುರಕ್ಷತೆ, ಕಲಿಕೆ ಹಾಗೂ ಭವಿಷ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಜಾಸತ್ತಾತ್ಮಕವಾಗಿ ಮುಂದೆ ಸಾಗಲಿದ್ದೇವೆ. ತರಾತುರಿಯಲ್ಲಿ
ನಿರ್ಧಾರ ಮಾಡಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಶಾಲಾರಾಂಭದ ಗೊಂದಲಕ್ಕೆ ಸಂಬಂಧಿಸಿದಂತೆ ಫೇಸ್‌ಬುಕ್ ಲೈವ್ ಮೂಲಕ ಸ್ಪಷ್ಟೀಕರಣ ನೀಡಿದ ಅವರು, ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸದ್ಯ ಆರಂಭ ಮಾಡಬಾರದು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕೋವಿಡ್ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರುವ ವರೆಗೂ ಶಾಲೆ ಆರಂಭಿಸಬಾರದು ಎಂಬ ಆಗ್ರಹವೂ ಕೇಳಿ ಬರುತ್ತದೆ. ಇದರ ಜತೆಗೆ ಕೋವಿಡ್ ಪರಿಸ್ಥಿತಿ ಹೀಗೆ ದೀರ್ಘವಧಿಯವರೆಗೂ ಇರಲಿದೆ. ಆದ್ದರಿಂದ ಸಾಮಾಜಿಕ ಅಂತರ, ಮಾಸ್ಕ್ ಮೊದಲಾದ ಸುರಕ್ಷತಾ ಕ್ರಮದೊಂದಿಗೆ ಶಾಲೆ ಆರಂಭಿಸಬೇಕು ಎಂಬ ಮನವಿಯೂ ಬಂದಿದೆ. ಹೀಗಾಗಿ ಎಲ್ಲ ಅಂಶಗಳನ್ನು ಪರಿಶೀಲಿಸಿ, ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಯಾವುದೇ ರೀತಿಯ ಆತುರ ಅಥವಾ ತರಾತುರಿಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.
ಜುಲೈ 1 ಅಥವಾ ಜುಲೈ15 ಶಾಲಾರಂಭದ ದಿನಾಂಕವಲ್ಲ. ಉದ್ದೇಶಿತ ದಿನಾಂಕವಷ್ಟೆ. ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಶಾಲೆಗಳಲ್ಲಿ ಪಾಲಕ, ಪೋಷಕರ ಮತ್ತು ಎಸ್ ಡಿಎಂಸಿ ಸದಸ್ಯರ ಹಾಗೂ ಪಾಲುದಾರರ ಸಭೆ ನಡೆಸಿ, ಅಲ್ಲಿ ಬರುವ ನಿರ್ಧಾರದ ಆಧಾರದಲ್ಲಿ ಮುಂದೆ ಸಾಗಲಿದ್ದೇವೆ. ಶಾಲಾರಂಭದ ಯಾವ ನಿರ್ಧಾರವೂ ಈವರೆಗೂ ತೆಗೆದುಕೊಂಡಿಲ್ಲ. ಹೀಗಾಗಿ ಪಾಲಕ, ಪೋಷಕರು ಆತಂಕಕ್ಕೆ ಒಳಗಾಗುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು