Scraps: ಜಗನ್ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ವಿಸರ್ಜನೆ: ಆಂಧ್ರ ಸರ್ಕಾರ ಘೋಷಣೆ
ವೈಎಸ್ಆರ್ ಸರ್ಕಾರದಲ್ಲಿ ರಚನೆಯಾಗಿದ್ದ ವಕ್ಫ್ ಮಂಡಳಿ
Team Udayavani, Dec 2, 2024, 7:21 AM IST
ಅಮರಾವತಿ: ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಹಿಂದಿನ ವೈಎಸ್ಆರ್ ಕಾಂಗ್ರೆಸ್ ಆಡಳಿತದಲ್ಲಿ ರಚಿಸಲಾಗಿದ್ದ ವಕ್ಫ್ ಮಂಡಳಿ ಯನ್ನು ವಿಸರ್ಜಿಸಿ ಆದೇಶ ಹೊರಡಿಸಿದೆ. ಅಲ್ಲದೇ ರಾಜ್ಯದಲ್ಲಿ ಹೊಸ ವಕ್ಫ್ ಮಂಡಳಿಯನ್ನು ರಚಿಸುವುದಾಗಿಯೂ ತಿಳಿಸಿದೆ.
ಭಾನುವಾರ ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ, ವೈಎಸ್ಆರ್ ಸರ್ಕಾರದಲ್ಲಿ ರಚನೆಯಾಗಿದ್ದ ವಕ್ಫ್ ಮಂಡಳಿ 2023ರ ಮಾರ್ಚ್ನಿಂದ ಕಾರ್ಯನಿರ್ವಹಿಸುತ್ತಿಲ್ಲ. ಮಂಡಳಿಯಲ್ಲಿ ಸುನ್ನಿ ಮತ್ತು ಶಿಯಾ ಸಮುದಾಯಗಳ ವಿದ್ವಾಂಸರು ಹಾಗೂ ಮಾಜಿ ಸಂಸದರಿರಲಿಲ್ಲ. ಇದರಿಂದಾಗಿ ವಕ್ಫ್ ಕಾರ್ಯಾಚರಣೆಯಲ್ಲಿ ತೊಡಕುಂಟಾಗುತ್ತಿತ್ತು.
ಅಲ್ಲದೇ ಮಂಡಳಿ ಮುಖ್ಯಸ್ಥರ ನೇಮಕಾತಿ ಕುರಿತಂತೆ ಮಂಡಳಿ ಸದಸ್ಯರ ನಡುವೆಯೇ ಪರಸ್ಪರ ದೂರು ದಾಖಲಾಗಿದ್ದು, ಮುಖ್ಯಸ್ಥರ ಆಯ್ಕೆಗಾಗಿ ಚುನಾವಣೆ ನಡೆದಿಲ್ಲ ಎಂದು ತಿಳಿಸಿದೆ. ದೇಶಾದ್ಯಂತ ವಕ್ಫ್ ಮಸೂದೆ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಆಂಧ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.