ಮೂರೂ ಪಕ್ಷಗಳಲ್ಲಿ ಆಯ್ಕೆ ಕಸರತ್ತು ಬಿರುಸು
ಮೇಲ್ಮನೆ ಸ್ಥಾನಕ್ಕೆ ಚುರುಕುಗೊಂಡ ಮೇಲಾಟ; ಒಂದೆರಡು ದಿನಗಳಲ್ಲಿ ಅಭ್ಯರ್ಥಿಗಳು ಅಂತಿಮ
Team Udayavani, Jun 15, 2020, 6:10 AM IST
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಮೂರೂ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಂಡಿದೆ.
ಸೋಮವಾರ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಂಭಾವ್ಯರ ಪಟ್ಟಿ ವರಿಷ್ಠರಿಗೆ ಸಲ್ಲಿಕೆಯಾಗಲಿದೆ. ಇನ್ನೊಂದೆಡೆ ಜೆಡಿಎಸ್ ನಾಯಕರು ಸೋಮವಾರ ಸಭೆ ಕರೆದಿದ್ದಾರೆ. ಕಾಂಗ್ರೆಸ್ ನಾಯಕರು ಮಂಗಳವಾರ ಸಭೆ ನಡೆಸುವ ಸಾಧ್ಯತೆ ಇದೆ.
ಪರಿಷತ್‌ನ ಏಳು ಸ್ಥಾನಗಳ ಪೈಕಿ ಬಿಜೆಪಿಗೆ ನಾಲ್ಕು ಸ್ಥಾನಗಳನ್ನು ಗೆಲ್ಲಲು ಅವಕಾಶವಿದೆ. ಆದರೆ ಇದರ ಎರಡು ಮೂರು ಪಟ್ಟು ಆಕಾಂಕ್ಷಿಗಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಯಾಗಿ ವರ್ಷ ಸಮೀಪಿಸುತ್ತಿದ್ದು, ಇದಕ್ಕೆ ಕಾರಣ ರಾದ ವಲಸಿಗರು ಸ್ಥಾನಮಾನಕ್ಕೆ ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ರಾಜ್ಯಸಭೆಯ ಮಾದರಿಯಲ್ಲೇ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂಬ ಆಗ್ರಹ ಕೇಳಿ ಬರ ಲಾರಂಭಿಸಿದೆ. ರಾಜ್ಯಸಭೆ ಅವಕಾಶ ವಂಚಿತರೂ ವಿಧಾನ ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.
ಆರ್. ಶಂಕರ್‌ಗೆ ಅವಕಾಶ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ. ಉಳಿದ 3 ಸ್ಥಾನಗಳ ಪೈಕಿ ಕೆಲವನ್ನು ಪ್ರತಾಪಗೌಡ ಪಾಟೀಲ್, ಮುನಿರತ್ನ ಅವರಿಗೆ ನೀಡಬೇಕೇ ಅಥವಾ ಉಪಚುನಾವಣೆಯಲ್ಲಿ ಪರಾಭವ ಗೊಂಡ ಎಂ.ಟಿ.ಬಿ. ನಾಗರಾಜ್, ಎಚ್. ವಿಶ್ವನಾಥ್ ಅವರಿಗೆ ನೀಡಬೇಕೇ ಎಂಬ ಚರ್ಚೆ ನಡೆದಿದೆ. ಈ ಪೈಕಿ ಯಾರಿಗೆ ಅವಕಾಶ ನೀಡಿದರೂ ವಲಸಿಗರಿಗೆ ಮಣೆ ಹಾಕಲಾಗಿದೆ ಎಂಬ ಅಪಸ್ವರ ಕೇಳಿ ಬರುತ್ತದೆ. ಮೂಲ ಬಿಜೆಪಿಗರಿಗೆ ಅವಕಾಶ ನೀಡಿದರೆ ವಲಸಿಗರ ತ್ಯಾಗಕ್ಕೆ ಬೆಲೆ ನೀಡಿಲ್ಲ ಎಂಬ ಅಪಪ್ರಚಾರ ನಡೆಯುವ ಸಾಧ್ಯತೆ ಇದೆ.
ಪರಿಷತ್‌ಗೆ ಐವರನ್ನು ನಾಮನಿರ್ದೇಶನ ಮಾಡಲು ಅವಕಾಶವಿದ್ದು, ಈಗ ಚುನಾವಣೆ ಎದುರಾಗಿರುವ 7 ಸ್ಥಾನ
ಗಳಿಗೆ ನಾಲ್ವರನ್ನು ಆಯ್ಕೆ ಮಾಡುವ ಚಿಂತನೆಯೂ ಇದೆ.
ಇಂದು ಬಿಜೆಪಿ ಸಭೆ
ಸೋಮವಾರ ಸಂಜೆ 4ಕ್ಕೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಸರಕಾರ ರಚನೆಗೆ ಕಾರಣ ರಾದ ವಲಸಿಗ ಆಕಾಂಕ್ಷಿಗಳಿಗೆ ಸಿಎಂ ಬಿಎಸ್‌ವೈ ನೆರ ವಾಗುವರೇ ಎಂಬ ಕುತೂಹಲ ಇದೆ. ಕೋರ್ ಕಮಿಟಿ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಿದರೂ ಅಂತಿಮವಾಗಿ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಸರಕಾರದ ಭವಿಷ್ಯ ಮತ್ತು ವಲಸಿಗರಿಗೆ ಕೊಟ್ಟ ಮಾತು ಉಳಿಸಿ ಕೊಳ್ಳುವ ನಿಟ್ಟಿನಲ್ಲಿ ಬಿಎಸ್‌ವೈ ಅವರ ಆಯ್ಕೆಗೆ ಹೆಚ್ಚಿನ ಮಾನ್ಯತೆ ಸಿಗಲಿದೆ ಎಂಬ ಮಾತು ಕೇಳಿಬರುತ್ತಿದೆ.
ಮಂಗಳವಾರ ಕಾಂಗ್ರೆಸ್ ಸಭೆ ಸಾಧ್ಯತೆ
ಕಾಂಗ್ರೆಸ್‌ನಲ್ಲೂ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ., ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ನಾಯಕ ಖರ್ಗೆ ಬಳಿ ಮನವಿ ಮಾಡುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್‌ನದ್ದಾಗಿರುವುದರಿಂದ ಕೆಲವು ಆಕಾಂಕ್ಷಿಗಳು ದಿಲ್ಲಿ ಮಟ್ಟದಲ್ಲೇ ಪ್ರಯತ್ನ ನಡೆಸಿದ್ದಾರೆ. ಮಂಗಳವಾರ ಹಿರಿಯ ನಾಯಕರ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಇಂದು ಜೆಡಿಎಸ್ ನಾಯಕರ ಸಭೆ
ಜೆಡಿಎಸ್‌ಗೆ ಒಂದು ಸ್ಥಾನ ಗೆಲ್ಲಲು ಅವಕಾಶವಿದೆ. ಆಕಾಂಕ್ಷಿಗಳು ಹಿರಿಯ ನಾಯಕರಿಗೆ ದುಂಬಾಲುಬಿದ್ದಿ ದ್ದಾರೆ. ಪಕ್ಷದ ಶಾಸಕರು, ಮುಖಂಡರೊಂದಿಗೆ ಚರ್ಚಿಸಿ ಜೆಡಿಎಸ್ ಅಧ್ಯಕ್ಷ ದೇವೇ ಗೌಡರು ಅಭಿ ಪ್ರಾಯ ಸಂಗ್ರಹಿಸಿದ್ದಾರೆ. ಸೋಮವಾರ ಶಾಸಕರು, ಮುಖಂಡರ ಸಭೆ ಕರೆದಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ಮಾತುಕತೆ ನಡೆಸುವ ಸಂಭವ ವಿದೆ. ಒಂದೆರಡು ದಿನದಲ್ಲಿ ಅಭ್ಯರ್ಥಿಗಳು ಅಂತಿಮಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.