ಹಿರಿಯ ಸಂಶೋಧಕ, ಬರಹಗಾರ ಡಾ. ಚಿದಾನಂದ ಮೂರ್ತಿ ವಿಧಿವಶ
Team Udayavani, Jan 11, 2020, 7:32 AM IST
ಬೆಂಗಳೂರು: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದಮೂರ್ತಿ ಇಂದು ಮುಂಜಾನೆ 3:45 ರ ಸಮಯದಲ್ಲಿ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಯ ನಂತರ ವಿಜಯನಗರದ ಆರ್ಪಿಸಿ ಲೇಔಟ್ನ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಚಿದಾನಂದಮೂರ್ತಿ 1931 ಮೇ 10ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೆಕೊಗಳೂರಿ ನಲ್ಲಿ ಜನಿಸಿದ್ದರು. ಅವರಿಗೆ 88 ವರ್ಷ ವಯಸ್ಸಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಸಾಹಿತ್ಯ, ಸಂಶೋಧನೆ ಮತ್ತು ಇತಿಹಾಸ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಚಿದಾನಂದಮೂರ್ತಿಯವರಿಗೆ ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕೆಂದು ಹೋರಾಟ ಮಾಡಿದವರಲ್ಲಿ ಚಿ.ಮೂ ಪ್ರಮುಖರು. ಹಂಪಿ ಸ್ಮಾರಕಗಳ ರಕ್ಷಣೆಗಾಗಿ ಚಿದಾನಂದಮೂರ್ತಿ ನಿರಂತರ ಹೋರಾಟ ಮಾಡಿದ್ದರು. ಸಂಶೋಧಕರಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಪ್ರಾಧ್ಯಾಪಕರಾಗಿಯೂ ಚಿಮೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.