![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 12, 2019, 10:52 AM IST
ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿ ತೋರಿ ಬಂದ ಋಣಾತ್ಮಕತೆಯನ್ನು ಅನುಸರಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. ಬ್ಯಾಂಕಿಂಗ್ ಮತ್ತು ಐಟಿ ರಂಗದ ಶೇರುಗಳು ಶೇರು ಮಾರುಕಟ್ಟೆಯನ್ನು ಕೆಳಕ್ಕೆ ಜಗ್ಗಿದವು.
ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್ 254.96 ಅಂಕಗಳ ನಷ್ಟದೊಂದಿಗ 39,695.50 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 73.60 ಅಂಕಗಳ ನಷ್ಟದೊಂದಿಗೆ 11,892.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದು ಬೆಳಗ್ಗೆಯ ಟಾಪ್ ಲೂಸರ್‌ಗಳ ಪೈಕಿ ಎಸ್ ಬ್ಯಾಂಕ್, ಬಜಾಜ್ ಆಟೋ, ಭಾರ್ತಿ ಏರ್‌ಟೆಲ್, ಎಚ್‌ಸಿಎಲ್ ಟೆಕ್, ಅವಳಿ ಎಚ್ ಡಿ ಎಫ್ ಸಿ, ಕೋಟಕ್ ಬ್ಯಾಂಕ್, ಟಿಸಿಎಸ್ ಮತ್ತು ಇನ್‌ಫೋಸಿಸ್ ಶೇರುಗಳು ಶೇ.2.55ರ ನಷ್ಟಕ್ಕೆ ಗುರಿಯಾದವು.
ಡಾಲರ್ ಎದುರು ರೂಪಾಯಿ ಇಂದು 7 ಪೈಸೆಗಳ ಏರಿಕೆಯನ್ನು ದಾಖಲಿಸಿ 69.37 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಬ್ರೆಂಟ್ ಅಂತಾರಾಷ್ಟ್ರೀಯ ಕಚ್ಚಾತೈಲ ಶೇ. 1.36ರ ಇಳಿಕೆಯನ್ನು ಕಂಡು ಬ್ಯಾರಲ್ ಗೆ 61.44 ಡಾಲರ್ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

You seem to have an Ad Blocker on.
To continue reading, please turn it off or whitelist Udayavani.