ಶಕ್ತಿ ಯೋಜನೆ: ಮೊದಲ ದಿನ 5.71 ಲಕ್ಷ ಮಹಿಳೆಯರ ಪ್ರಯಾಣ
ರಾಜ್ಯ ಸರಕಾರದ ಮಹತ್ವಾಕಾಂಕ್ಷಿ "ಶಕ್ತಿ" ಯೋಜನೆಗೆ ಭರ್ಜರಿ ಸ್ಪಂದನೆ
Team Udayavani, Jun 13, 2023, 7:07 AM IST
ಬೆಂಗಳೂರು: “ಶಕ್ತಿ” ಯೋಜನೆಯಡಿ ಮೊದಲ ದಿನವೇ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.
ಯೋಜನೆಗೆ ರವಿವಾರ ಮಧ್ಯಾಹ್ನ 1ಕ್ಕೆ ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ನೀಡಲಾಗಿದೆ. ಮಧ್ಯರಾತ್ರಿ 12ರ ವರೆಗೆ ಅಂದರೆ ಕೇವಲ 11 ತಾಸುಗಳಲ್ಲಿ 5,71,023 ಮಹಿಳೆಯರು ವಿವಿಧೆಡೆ ಪ್ರಯಾಣಿಸಿದ್ದಾರೆ. ಈ ಪೈಕಿ ಬಿಎಂಟಿಸಿಯಲ್ಲಿ ಅತಿಹೆಚ್ಚು, ಅಂದರೆ 2.01 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಎಸ್‌ಆರ್‌ಟಿಸಿಯಲ್ಲಿ 1.93 ಲಕ್ಷ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಒಟ್ಟು 5.71 ಲಕ್ಷ ಪ್ರಯಾಣಿಕರ ಪ್ರಯಾಣದ ಮೊತ್ತ 1.40 ಕೋಟಿ ರೂ. ಆಗಿದೆ.
ವಾರಾಂತ್ಯ ಹಾಗೂ ಮೊದಲ ದಿನವಾಗಿದ್ದರಿಂದ ಪ್ರಯಾಣಿಕರ ಸಂಖ್ಯೆ ತುಸು ಕಡಿಮೆಯೇ ಎಂದು ಹೇಳಬೇಕು. ಮುಂದಿನ ದಿನಗಳಲ್ಲಿ ಮಹಿಳೆಯರ ಪ್ರಮಾಣ ಹಲವು ಪಟ್ಟು ಹೆಚ್ಚಲಿದೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ಕೆಎಸ್‌ಆರ್‌ಟಿಸಿ ಸಂಚಾರ ವಿಭಾಗದ ಅಧಿಕಾರಿಯೊಬ್ಬರು ತಿಳಿಸುತ್ತಾರೆ.
ಲಗೇಜ್ ಟಿಕೆಟ್; ಗೊಂದಲ
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಬೆನ್ನಲ್ಲೇ ಬಸ್‌ಗಳಲ್ಲಿ ಸೋಮವಾರ ಲಗೇಜ್ ವಿಚಾರದಲ್ಲಿ ಗೊಂದಲ ಉಂಟಾಗಿದ್ದು, ಇದು ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ವಾಗ್ವಾದಕ್ಕೂ ಎಡೆಮಾಡಿಕೊಟ್ಟಿತು. ಮಹಿಳಾ ಪ್ರಯಾಣಿಕರಿಗೆ ಸಂಪೂರ್ಣ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ. ಯೋಜನೆ ಫಲಾನುಭವಿಗಳು ತರುವ ಲಗೇಜ್‌ಗೆ ಶುಲ್ಕ ಪಾವತಿಸಲು ತಕರಾರು ತೆಗೆಯುತ್ತಿದ್ದಾರೆ. ಈ ಬಗ್ಗೆ ಮನದಟ್ಟು ಮಾಡುವಲ್ಲಿ ನಿರ್ವಾಹಕರು ಹೈರಾಣಾಗುತ್ತಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇದು ವಾಗ್ವಾದಕ್ಕೂ ಕಾರಣವಾಗಿದೆ. ಬಸ್‌ಗಳಲ್ಲಿ ಗರಿಷ್ಠ ಲಗೇಜು 30 ಕೆ.ಜಿ. ಲಗೇಜು ಕೊಂಡೊಯ್ಯಲು ಅವಕಾಶ ಇದೆ. ಇದನ್ನು ಮೀರಿದರೆ, ಕಡ್ಡಾಯವಾಗಿ ಆ ಲಗೇಜ್‌ಗೆ ಟಿಕೆಟ್ ಪಡೆಯಬೇಕಾಗುತ್ತದೆ. ಆದರೆ ಕೆಲವರು ಇದಕ್ಕೆ ಆಕ್ಷೇಪ ಎತ್ತುತ್ತಿದ್ದಾರೆ.
ಸರಕಾರಿ ಬಸ್ ಹತ್ತಲು ನೂಕು ನುಗ್ಗಲು
“ಶಕ್ತಿ” ಯೋಜನೆ ಆರಂಭವಾದ 2ನೇ ದಿನವಾದ ಸೋಮವಾರವೂ ರಾಜ್ಯದ ಹಲವೆಡೆ ಸರಕಾರಿ ಬಸ್‌ಗಳಲ್ಲಿ ಮಹಿಳೆಯರ ನೂಕುನುಗ್ಗಲು ಕಂಡುಬಂತು. ರಾಮನಗರ ಜಿಲ್ಲೆಯಲ್ಲಿ ಬಸ್‌ಗಾಗಿ ಪ್ರಯಾಣಿಕರು ಪರದಾ ಡುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳಿಗೆ ಶಾಪ ಹಾಕಿದರು. ಚನ್ನಪಟ್ಟಣ, ರಾಮನಗರ ಬಸ್‌ನಿಲ್ದಾಣದಿಂದ ಹೊರಟ ಎಲ್ಲ ಬಸ್‌ಗಳ ಸೀಟುಗಳು ಭರ್ತಿಯಾಗಿದ್ದವು. ನಿಲ್ಲುವುದಕ್ಕೂ ಜಾಗವಿಲ್ಲದೆ ಕೆಲವು ಪ್ರಯಾಣಿಕರು ಫುಟ್ ಬೋರ್ಡ್ ಮೇಲೆ ನಿಂತು ಪ್ರಯಾಣಿಸಿದರು. ಸಾರಿಗೆ ಸಂಸ್ಥೆ ಬಸ್‌ಗಳ ಕೊರತೆಯಿಂದ ಕೆಲವರು ಖಾಸಗಿ ಬಸ್‌ಗಳನ್ನು ಅವಲಂಬಿಸುವಂತಾಯಿತು. ರೈಲಿನಲ್ಲಿ ಮತ್ತು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರೂ ಕೆಎಸ್‌ಆರ್‌ಟಿಸಿ ಬಸ್ ಕಡೆ ಮುಖ ಮಾಡಿದ್ದರಿಂದ ಸಮಸ್ಯೆಯಾಗಿದೆ ಎಂದು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲೂ ಸರಕಾರಿ ಬಸ್‌ಗಳಲ್ಲಿ ನೂಕುನುಗ್ಗಲು ಕಂಡು ಬಂತು. ಪಕ್ಕದಲ್ಲೇ ಇರುವ ಖಾಸಗಿ ಬಸ್‌ಗಳು ಖಾಲಿಯಾಗಿ ಓಡುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.