2024 Poll:1977ರಲ್ಲಿ PM ಅಭ್ಯರ್ಥಿ ಘೋಷಿಸದೇ ಕಾಂಗ್ರೆಸ್‌ ವಿರುದ್ಧ ವಿಪಕ್ಷ ಜಯ ಗಳಿಸಿತ್ತು!

ಮತದಾರರು ಬದಲಾವಣೆ ಬಗ್ಗೆ ದೃಢ ನಿರ್ಧಾರ ತೆಗೆದುಕೊಳ್ಳುತ್ತಾರೆ

Team Udayavani, Dec 26, 2023, 5:12 PM IST

2024 Poll:1977ರಲ್ಲಿ PM ಅಭ್ಯರ್ಥಿ ಘೋಷಿಸದೇ ವಿಪಕ್ಷ ಕಾಂಗ್ರೆಸ್‌ ವಿರುದ್ಧ ಜಯ ಗಳಿಸಿತ್ತು!

2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಲೆಕ್ಕಚಾರ, ಪೂರ್ವ ತಯಾರಿಗೆ ಸಿದ್ಧತೆ ನಡೆಯತೊಡಗಿದೆ. ಏತನ್ಮಧ್ಯೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರ ಹೆಸರನ್ನು ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಮತ್ತು ಆಮ್‌ ಆದ್ಮಿ ಪಕ್ಷದ ಮುಖಂಡ ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾವಿಸಿದ್ದ ಕೆಲವು ದಿನಗಳ ಬಳಿಕ ಹಿರಿಯ ರಾಜಕಾರಣಿ ಶರದ್‌ ಪವಾರ್‌ ಅವರು, ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಹೆಸರು ಘೋಷಣೆ ಈಗ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ.

1977ರಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂದು ಘೋಷಿಸಿಲ್ಲ!

2024ರ ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವ ನಡುವೆಯೇ ಇಂಡಿಯಾ ಮೈತ್ರಿಕೂಟದ ಪಕ್ಷದ ಸದಸ್ಯರಿಂದ ಈ ಹೇಳಿಕೆ ಹೊರಬಿದ್ದಿದೆ. ಭಾರತೀಯ ಜನತಾ ಪಕ್ಷವನ್ನು ಚುನಾವಣೆಯಲ್ಲಿ ಕಟ್ಟಿಹಾಕಲು ವಿಪಕ್ಷಗಳು ತಂತ್ರ ಹೆಣೆಯುತ್ತಿವೆ. ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಬಿಂಬಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡು ಮುಖಭಂಗ ಅನುಭವಿಸಿತ್ತು. ಆದರೆ ವಿಪಕ್ಷ ಮುಖಂಡರು ಯುನೈಟೆಡ್‌ ಫ್ರಂಟ್‌ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿದ್ದಾರೆ.

ಪುಣೆಯಲ್ಲಿ ಎನ್‌ ಸಿಪಿ ಮುಖಂಡ ಶರದ್‌ ಪವಾರ್‌ ಅವರು ಮಾಧ್ಯಮ ಜತೆ ಸಂವಹನ ನಡೆಸುತ್ತಿದ್ದ ವೇಳೆ ಭಾರತದಲ್ಲಿ ಯಾವಾಗ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಿಲ್ಲವಾಗಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 1977ರಲ್ಲಿ ತುರ್ತು ಪರಿಸ್ಥಿತಿ ನಂತರ ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿಪಕ್ಷಗಳು ಪ್ರಧಾನಿ ಅಭ್ಯರ್ಥಿ ಯಾರೆಂದು ಘೋಷಿಸಿಲ್ಲವಾಗಿತ್ತು. ಈ ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ಜನತಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿತ್ತು.

1977ರ ಸಾರ್ವತ್ರಿಕ ಚುನಾವಣೆಯಲ್ಲಿ ಯಾರನ್ನೂ ಪ್ರಧಾನಿ ಎಂದು ಬಿಂಬಿಸಿಲ್ಲವಾಗಿತ್ತು. ಚುನಾವಣಾ ಫಲಿತಾಂಶದ ನಂತರ ಮೊರಾರ್ಜಿ ದೇಸಾಯಿ ಅವರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಲಾಗಿತ್ತು. ನಿಜಕ್ಕೂ ಹೇಳಬೇಕೆಂದರೆ ಆ ಸಂದರ್ಭದಲ್ಲಿ ದೇಸಾಯಿ ಅವರ ಹೆಸರು ಎಲ್ಲಿಯೂ ಪ್ರಸ್ತಾಪವಾಗಿರಲಿಲ್ಲವಾಗಿತ್ತು! ಚುನಾವಣೆಯಲ್ಲಿ ಹೊಸ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮೊರಾರ್ಜಿ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲಾಗಿತ್ತು ಎಂದು ಪವಾರ್‌ ಹೇಳಿದರು.

ಪ್ರಧಾನಿ ಅಭ್ಯರ್ಥಿ ಯಾರೆಂದು ಬಿಂಬಿಸದಿದ್ದರೆ ಅದರಿಂದ ಯಾವುದೇ ದೊಡ್ಡ ಪರಿಣಾಮ ಬೀರುವುದಿಲ್ಲ. ಒಂದು ವೇಳೆ ಜನರು ಬದಲಾವಣೆ ಬಯಸಿದಲ್ಲಿ, ಆಗ ಮತದಾರರು ಬದಲಾವಣೆ ಬಗ್ಗೆ ದೃಢ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಪವಾರ್‌ ಅಭಿಪ್ರಾಯ.

ಮಹಾ ವಿಕಾಸ್‌ ಅಘಾಡಿಯ ಕಾಂಗ್ರೆಸ್‌, ಎನ್‌ ಸಿಪಿ ಮತ್ತು ಉದ್ಧವ್‌ ಠಾಕ್ರೆ ನೇತೃತ್ವದ ಶಿವ ಸೇನಾ ಮೈತ್ರಿಕೂಟ 2024ರ ಲೋಕಸಭಾ ಚುನಾವಣೆಯಲ್ಲಿ ಮೇಲುಗೈ ಸಾಧಿಸಬಹುದು ಎಂಬ ಸಮೀಕ್ಷೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪವಾರ್‌, ಸಮೀಕ್ಷೆ ಫಲಿತಾಂಶದ ಬಗ್ಗೆ ಉತ್ಸಾಹ ತೋರದ ಅವರು, ಇದೊಂದು ಕೇವಲ ಮುನ್ಸೂಚನೆ. ಇಂತಹ ಸಮೀಕ್ಷೆ ಮೂಲಕ ನಾವು ಏಕಾಏಕಿ ಅಂತಿಮ ನಿರ್ಧಾರಕ್ಕೆ ಬರಬಾರದು ಎಂಬ ನಿಲುವನ್ನು ವ್ಯಕ್ತಪಡಿಸಿದರು.

ಪ್ರಧಾನಿ ಅಭ್ಯರ್ಥಿ ವಿಷಯದ ಕುರಿತು ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಸುದ್ದಿಗಾರರು ಪ್ರಶ್ನಿಸಿದ್ದ ವೇಳೆ, ವಿಪಕ್ಷಗಳು ಮೊದಲು ಚುನಾವಣೆಯಲ್ಲಿ ಗೆಲ್ಲುವತ್ತ ಹೆಚ್ಚಿನ ಲಕ್ಷ್ಯ ವಹಿಸಲಿ. ನಾವು ಮೊದಲು ಜಯ ಸಾಧಿಸೋಣ, ನಂತರ ಪ್ರಧಾನಿ ಅಭ್ಯರ್ಥಿ ಬಗ್ಗೆ ನಿರ್ಧಾರ ತೆಗೆದುಕೊಳ್ಳೋಣ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Karnatakaದಿಂದ ಕಕ್ಷೆಗೆ: ISRO ಸ್ಪೇಡೆಕ್ಸ್ ಜೊತೆ ನಭಕ್ಕೆ ಚಿಮ್ಮಲಿವೆ ಆದಿಚುಂಚನಗಿರಿ SJC

Explainer: Karnatakaದಿಂದ ಕಕ್ಷೆಗೆ-ಬಾಹ್ಯಾಕಾಶದಲ್ಲಿ ಡಾಕಿಂಗ್‌ ಕಸರತ್ತು…ISRO ಸಾಹಸ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.