“ಭಾರತದ ಸಂಸ್ಕೃತಿ ತ್ಯಾಗ ಜೀವನ ಬೋಧಿಸಿದೆ’: ಶ್ರೀಕಾಂತ್‌ ಶೆಟ್ಟಿ ಕಾರ್ಕಳ

ಶಿವಪಾಡಿ ದೇಗುಲ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆ

Team Udayavani, Feb 27, 2023, 6:02 AM IST

“ಭಾರತದ ಸಂಸ್ಕೃತಿ ತ್ಯಾಗ ಜೀವನ ಬೋಧಿಸಿದೆ’: ಶ್ರೀಕಾಂತ್‌ ಶೆಟ್ಟಿ ಕಾರ್ಕಳ

ಮಣಿಪಾಲ: ಭಾರತದ ಸಂಸ್ಕೃತಿ ತ್ಯಾಗ ಜೀವನವನ್ನು ಜಗತ್ತಿಗೆ ಬೋಧಿಸಿದೆ. ಯಾವುದನ್ನೂ ಯಾರ ಮೇಲೂ ಹೇರದ ಸಂಸ್ಕೃತಿಯನ್ನು ಹೊಂದಿದ ಭಾರತವನ್ನು ದೈವಿಕ ಶಕ್ತಿ ಕಾಪಾಡುತ್ತಿದೆ. ಅದು ಸಿದ್ಧರು, ಸಾಧುಗಳ ತಪಃ ಶಕ್ತಿಯ ಫ‌ಲ ಎಂದು ಹಿಂಜಾವೇ ಜಿಲ್ಲಾ ಸಮಿತಿ ಸದಸ್ಯ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಹೇಳಿದರು.

ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ರವಿವಾರ ನಡೆದ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.

ಹಣಕ್ಕಿಂತ ಸಾತ್ವಿಕ ಶಕ್ತಿ ಮೇಲು ಎಂಬುದನ್ನು ಪ್ರಪಂಚಕ್ಕೆ ಭಾರತ ತೋರಿಸಿಕೊಟ್ಟಿದೆ. ನಾವು ಬದುಕ ಬೇಕು, ಇನ್ನೊಬ್ಬರನ್ನೂ ಬದುಕಲು ಬಿಡಬೇಕು ಎಂದು ಸಾರಿ ನಡೆಯು ತ್ತಿರುವ ದೇಶವಿದ್ದರೆ ಅದು ಭಾರತ. ಶಿವನ ಅಘೋರ ಮುಖದಿಂದ ದೈವಗಳ ಸಾಕ್ಷಾತ್ಕಾರ ಎಂಬ ಕಲ್ಪನೆ ತುಳು ನಾಡಿನಲ್ಲಿದೆ. ಆಂಗ್ಲ ಪ್ರಣೀತ ಶಿಕ್ಷಣ ಕ್ರಮದಿಂದ ಭಾರತದ ಪ್ರಗತಿ ಎಂದು ಕೆಲವು ಬುದ್ಧಿಜೀವಿಗಳು ಹೇಳಿ ದ್ದರೂ ಅಷ್ಟೊಂದು ಸುಶಿಕ್ಷಿತರಲ್ಲದ ನಮ್ಮ ತುಳುನಾಡಿನ ದೈವನರ್ತಕರು ಬಹಳ ಹಿಂದೆಯೇ ಭವ್ಯ ಭಾರತದ ವಿಸ್ತಾರದ ಅರಿವು ಹೊಂದಿದ್ದರು ಎಂದರು.

ಧಾರ್ಮಿಕ ಸಭೆಯನ್ನು ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಅರವಿಂದೋ ಪತ್ರಿಕೆ ಸಂಪಾದಕ ಮಹೋಪಾಧ್ಯಾಯ ಪುಟ್ಟು ಪರಶುರಾಮ ಕುಲಕರ್ಣಿ ಮಾತನಾಡಿ, ಶಿವಾರಾಧನೆಯಿಂದ ಸನ್ಮಂಗಲವಾಗಲಿದೆ. ಈ ಮಹಾನ್‌ ಯಾಗದಿಂದ ಲೋಕ ಕಲ್ಯಾಣವಾಗಲಿದೆ ಎಂದರು.

ಯಾಗ ಸಮಿತಿ ಅಧ್ಯಕ್ಷ ಶಾಸಕ ಕೆ. ರಘುಪತಿ ಭಟ್‌, ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್‌ ಠಾಕೂರ್‌, ಉದ್ಯಮಿಗಳಾದ ಗಣನಾಥ ಹೆಗ್ಡೆ, ಗಣೇಶ್‌ ಪ್ರಭು, ರಂಜಿತ್‌ ಶೆಟ್ಟಿ, ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇಗುಲದ ಅಡಳಿತ ಸಮಿತಿ ಸದಸ್ಯ ಕಿರಣ್‌ ಮಂಜನಬೈಲು, ದ.ಕ., ಉಡುಪಿ ಜಿಲ್ಲಾ ಗುರುವಂದನ ಸಮಿತಿಯ ಮಾಧವ ಖಾರ್ವಿ, ಬಂಟರ ಚಾವಡಿಯ ತಾರಾನಾಥ ಹೆಗ್ಡೆ, ಆಡಳಿತ ಮೊಕ್ತೇಸರರಾದ ಶುಭಕರ ಸಾಮಂತ್‌, ದಿನೇಶ್‌ ಪ್ರಭು, ಶಾಶ್ವತ ಟ್ರಸ್ಟಿ ದಿನೇಶ್‌ ಶ್ರೀಧರ ಸಾಮಂತ್‌, ಕೋಶಾಧಿಕಾರಿ ಸತೀಶ್‌ ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.

ಉಗ್ರಾಣ ಸಮಿತಿ ಉಸ್ತುವಾರಿ ಪ್ರಕಾಶ್‌ ಪ್ರಭು ಸ್ವಾಗತಿಸಿ, ಸುಚೇತಾ ನಾಯಕ್‌ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ಅತಿಥಿ ಗಳನ್ನು ಪರಿಚಯಿಸಿ ವಂದಿಸಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.