ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಸಚಿವೆ ಶೋಭಾ ಕರಂದ್ಲಾಜೆ


Team Udayavani, Jul 16, 2021, 6:28 PM IST

ಕೇಂದ್ರದಲ್ಲಿ ಬಾಕಿ ಇರುವ ಜಿಲ್ಲೆಯ ಯೋಜನೆಗಳು ಶೀಘ್ರ ಪೂರ್ಣ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಶುಕ್ರವಾರ ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್‌ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಗರಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ. ಉಪ್ಪುಂದದಲ್ಲಿ 130 ಕೋಟಿ ರೂ. ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸಲ್ಲಿಸಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಇದನ್ನೂ ಓದಿ :ಗಾಯಗೊಂಡ ಸಿಂಗಳೀಕದ ಮರಿಗೆ ಮಾನವೀಯ ಚಿಕಿತ್ಸೆ : ಮರಳಿ ತಾಯಿ ಮಡಿಲಿಗೆ

ಜಿಲ್ಲೆಯಲ್ಲಿ ಕೋವಿಡ್‌ 3ನೆ ಅಲೆ ಎದುರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರಪಾಲನೆ ಕುರಿತು ಪರಿಶೀಲಿಸಿ. ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು ಕಾರ್ಖಾನೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಕಾಮಗಾರಿ ಆರಂಭಿಸಲಾಗಿರುವ ಆಕ್ಸಿಜನ್‌ ಘಟಕಗಳು ಶೀಘ್ರದಲ್ಲಿ ಕಾರ್ಯನಿರ್ವಹಣೆ ಮಾಡುವಂತೆ ಕ್ರಮ ಕೈಗೊಳ್ಳಿ. ದುರ್ಬಲ ವರ್ಗದವರಿಗೆ ಆದ್ಯತೆಯಲ್ಲಿ ಕೋವಿಡ್‌ ಲಸಿಕೆ ನೀಡಿ. ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರ ಸೌಲಭ್ಯ ಒದಗಿಸುವಂತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಎಚ್ಚರವಹಿಸುವಂತೆ ಸೂಚಿಸಿದರು.

ಮಾನ್ಸೂನ್‌ ಅವಧಿಯಲ್ಲಿ ನೆರೆಹಾನಿಗೊಳಗಾಗುವ ಸಂತ್ರಸ್ತರಿಗೆ ತತ್‌ಕ್ಷಣದಲ್ಲಿ ಪರಿಹಾರ ವಿತರಿಸುವಂತೆ ತಿಳಿಸಿದ ಸಂಸದರು, ಹಾನಿಗೊಳಗಾಗುವ ತಗ್ಗು ಪ್ರದೇಶಗಳನ್ನು ಗುರುತಿಸಿಕೊಂಡು ಆ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಯಾವುದೇ ಸಂದರ್ಭದಲ್ಲಿ ನೆರವು ನೀಡಲು ಸಿದ್ಧವಾಗಿರುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಜಿ.ಜಗದೀಶ್‌ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಪ್ರಾಕೃತಿಕ ವಿಕೋಪದಿಂದ 110 ಕೋಟಿ ರೂ. ಮೂಲಸೌಕರ್ಯಕ್ಕೆ ಹಾನಿಯಾಗಿದ್ದು ಇದರಲ್ಲಿ ಸಮುದ್ರ ಕೊರೆತದಿಂದ 99 ಕೋಟಿ ರೂ. ಹಾನಿ ಸಂಭವಿಸಿದೆ. ಈ ಬಗ್ಗೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೋವಿಡ್‌ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಒಟ್ಟು 50 ಮಕ್ಕಳ ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ನಡೆಯುತ್ತಿದೆ. ಎಂಡೋಸಲ್ಫಾನ್‌ ಪೀಡಿತರಿಗೆ ಹಾಗೂ ಅವರ ಕುಟುಂಬದವರಿಗೆ ಲಸಿಕೆ ನೀಡಲಾಗುತ್ತಿದೆ. ನೆರೆ ಪರಿಹಾರಕ್ಕಾಗಿ 11 ಕೋಟಿ ರೂ. ಹಣ ಇದ್ದು, ಅನುದಾನದ ಕೊರತೆ ಇಲ್ಲ. ವಿಕೋಪ ನಿರ್ವಹಣೆಗೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.