ಕೋವಿಡ್ ವಿರುದ್ಧ ಹೋರಾಟಕ್ಕೆ ಒಂದು ಲಕ್ಷ ನೀಡುವಂತೆ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮನವಿ
Team Udayavani, Apr 1, 2020, 12:53 PM IST
ಬೆಂಗಳೂರು : ಕೆಪಿಸಿಸಿ ಆರಂಭಿಸಿರುವ ಕೋವಿಡ್-19 ಪರಿಹಾರ ನಿಧಿಗೆ ವೈಯಕ್ತಿಕವಾಗಿ ತಲಾ ಕನಿಷ್ಟ ಒಂದು ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡುವಂತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.
ಕೋವಿಡ್-19 ವೈರಸ್ ರಾಜ್ಯದ ಜನತೆಯನ್ನು ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಇದರಿಂದಾಗಿ ದುಡಿಯುವ ವರ್ಗಕ್ಕೆ ಉದ್ಯೋಗಗಳಿಲ್ಲದೆ ಆಹಾರ, ನೀರು, ಔಷಧಿಗಳಿಗೆ ಪರದಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಮೊದಲೇ ಪ್ರವಾಹದಿಂದ ನಲುಗಿದ್ದ ನಾಡಿನ ರೈತ, ಕೂಲಿ ಕಾರ್ಮಿಕರನ್ನೂ ಸಹ ಈ ವೈರಸ್ ಕಂಗೆಡುವಂತೆ ಮಾಡಿದೆ.
ಈ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳೆರಡೂ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಬೇಕಾಗಿತ್ತು. ಆದರೆ ಎರಡೂ ಸರ್ಕಾರಗಳಿಂದ ಪರಿಹಾರ ಕಾರ್ಯ ಸೂಕ್ತವಾಗಿ ನಡೆಯುತ್ತಿಲ್ಲ. ಈ ಸಂದರ್ಭದಲ್ಲಿ ನಾವೆಲ್ಲರೂ ಜನ ಕಂಗೆಡದಂತೆ ಅವರ ಜೊತೆ ನಿಂತು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಆದ್ದರಿಂದ ನಮ್ಮ ಪಕ್ಷದ ಶಾಸಕರು, ಸಂಸದರು ವೈಯಕ್ತಕವಾಗಿ ತಲಾ ಕನಿಷ್ಟ ಒಂದು ಲಕ್ಷ ರೂ. ಗಳ ದೇಣಿಗೆ ನೀಡಬೇಕೆಂದು ಕೋರುತ್ತೇನೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದುಕೊಂಡು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ಶಾಸಕರಿಗೆ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.