ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಸದಾನಂದಗೌಡ
Team Udayavani, Nov 22, 2019, 10:02 PM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ದಯನೀಯ ಸ್ಥಿತಿಗೆ ತಲುಪಿದರೂ ಸಿದ್ದರಾಮಯ್ಯ ಅವರಿಗೆ ಬುದ್ದಿ ಬಂದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ಧಾಳಿ ನಡೆಸಿದರು.
ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಪರವಾಗಿ ಶುಕ್ರವಾರ ಪ್ರಚಾರ ನಡೆಸುವ ವೇಳೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಅವರು ಅಧಿಕಾರದಲ್ಲಿದ್ದಾಗಲೇ ಬಿಜೆಪಿ 25 ಲೋಕಸಭಾ ಸ್ಥಾನ ಗೆದ್ದಿದೆ. ಆದರೆ 25 ಸ್ಥಾನ ಗೆದ್ದಿದ್ದು, ವಾಮ ಮಾರ್ಗದಿಂದಲೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್‌ನ ಯಾರೊಬ್ಬ ಹಿರಿಯ ನಾಯಕರು ಸಿದ್ದರಾಮಯ್ಯ ಅವರೊಂದಿಗಿಲ್ಲ. ಮಾಜಿ ಸಚಿವರಾದ ಡಾ.ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಎಲ್ಲರದ್ದೂ ಒಂದೊಂದು ಹಾದಿ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆರ್ಯವರಂತೂ ಪ್ರಚಾರದಲ್ಲೆಲ್ಲೂ ಕಾಣಿಸುತ್ತಿಲ್ಲ. ವಾಮಮಾರ್ಗದಿಂದ ಚುನಾವಣೆ ಎದುರಿಸುವ ಗತಿ ಬಿಜೆಪಿಗೆ ಇಲ್ಲ ಎಂದು ತಿರುಗೇಟು ನೀಡಿದರು.
ಜೆಡಿಎಸ್ ವಿರುದ್ಧವೂ ಹರಿಹಾಯ್ದ ಸದಾನಂದಗೌಡ, ಜೆಡಿಎಸ್‌ನ ತಾರಾ ಪ್ರಚಾರಕರ ಪಟ್ಟಿ ನೋಡಿದರೆ ನಗು ಬರುತ್ತದೆ. ಪಟ್ಟಿಯಲ್ಲಿರೋ 12 ತಾರಾ ಪ್ರಚಾರಕರಲ್ಲಿ 8 ಮಂದಿ ಕುಟುಂಬದವರೇ ಇದ್ದಾರೆ. ದೇವೇಗೌಡ ಆ್ಯಂಡ್ ಕಂಪೆನಿಯಲ್ಲಿ 12 ಮಂದಿ ತಾರಾ ಪ್ರಚಾರಕರಿದ್ದಾರೆ. ಅಥಣಿ ಹಾಗೂ ಹಿರೇಕೆರೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಬಲವಂತವಾಗಿ ಹಿಂದಕ್ಕೆ ಸರಿಸಿಲ್ಲ. ಒಂದು ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಿದವರಿಂದ ನಾಮಪತ್ರ ವಾಪಸ್ ಪಡೆಯೋಕೆ ಅವರೇನು ಚಿಕ್ಕ ಮಕ್ಕಳಾ ಎಂದು ಪ್ರಶ್ನಿಸಿದರು.
ಈ ಹಿಂದೆ ರಾಮನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಚಂದ್ರಶೇಖರ್‌ನನ್ನು ಕಣದಿಂದ ಹಿಂದೆ ಸರಿಸಿದವರು ಯಾರು. ಈ ರೀತಿಯ ಕೆಲಸಗಳನ್ನು ಬಿಜೆಪಿ ಮಾಡುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.