ಕಾರು ಹತ್ತುವ ವೇಳೆ ಆಯ ತಪ್ಪಿ ಕುಸಿದು ಬಿದ್ದ ಸಿದ್ದರಾಮಯ್ಯ; ಆತಂಕ ಬೇಡ-ಸಿದ್ದು ಟ್ವೀಟ್
ಡಾ. ಎನ್.ಟಿ.ಶ್ರೀನಿವಾಸ್ ಅವರ ಪರ ಪ್ರಚಾರ ನಡೆಸಲು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
Team Udayavani, Apr 29, 2023, 1:09 PM IST
ಹೊಸಪೇಟೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿದ್ದ ವೇಳೆ ಹೆಲಿಪ್ಯಾಡ್ ನಲ್ಲಿ ನೆರೆದಿದ್ದ ಜನರತ್ತ ಕೈಬೀಸುತ್ತಿರುವಾಗಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕುಸಿದು ಬೀಳುತ್ತಿರುವುದನ್ನು ಗಮನಿಸಿದ ಅಂಗರಕ್ಷಕ ಅವರ ನೆರವಿಗೆ ಧಾವಿಸಿರುವ ಘಟನೆ ವಿಜಯನಗರದ ಕೂಡ್ಲಿಗಿಯಲ್ಲಿ ಶುಕ್ರವಾರ (ಎ.29) ನಡೆದಿದೆ.
ಇದನ್ನೂ ಓದಿ:Desi Swara; ಅಮೆರಿಕದಲ್ಲಿ ಸೀತಾ ಕಲ್ಯಾಣ; ಹೊರದೇಶದಲ್ಲಿ ಅರಳುತ್ತಿದೆ ಸನಾತನ ಸಂಸ್ಕೃತಿ
ಸಿದ್ದರಾಮಯ್ಯನವರು ನಿಗದಿತ ಕಾರ್ಯಕ್ರಮದ ಅಂಗವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪರಿಶಿಷ್ಟ ಪಂಗಡ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್.ಟಿ.ಶ್ರೀನಿವಾಸ್ ಅವರ ಪರ ಪ್ರಚಾರ ನಡೆಸಲು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.
ಹೆಲಿಪ್ಯಾಡ್ ಸುತ್ತ ನೆರದಿದ್ದ ಜನಸ್ತೋಮದತ್ತ ಸಿದ್ದರಾಮಯ್ಯನವರು ಕೈಬೀಸಿದ್ದ ನಂತರ ಕಾರಿನೊಳಗೆ ಕುಳಿತುಕೊಳ್ಳಲು ಸಂದರ್ಭದಲ್ಲಿ ಆಯ ತಪ್ಪಿ ಕುಸಿದು ಬೀಳುತ್ತಿದ್ದ ಸಿದ್ದರಾಮಯ್ಯನವರನ್ನು ಅಂಗರಕ್ಷಕ ತಡೆದು ಕಾರಿನೊಳಗೆ ಕುಳ್ಳಿರಿಸಿದ್ದರು.
ತಕ್ಷಣವೇ ಸಿದ್ದರಾಮಯ್ಯನವರ ಆಪ್ತರೊಬ್ಬರು ಮಜ್ಜಿಗೆ ನೀರನ್ನು ಕೊಟ್ಟು ಉಪಚರಿಸಿದ್ದರು. ನಂತರ ಕಾರಿನಲ್ಲಿ ಕಾರ್ಯಕ್ರಮದ ವೇದಿಕೆಯತ್ತ ತೆರಳಿರುವುದಾಗಿ ವರದಿ ತಿಳಿಸಿದೆ.
ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.
ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.
ಈಗ ಆರಾಮಾಗಿದ್ದೇನೆ.
ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.— Siddaramaiah (@siddaramaiah) April 29, 2023
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, ಗಾಬರಿಪಡುವಂತಹದ್ದೇನಿಲ್ಲ. ಗಟ್ಟಿಮುಟ್ಟಾಗಿದ್ದೇನೆ. ಕಾರಿನಲ್ಲಿ ಸೈಡ್ ಸ್ಟೆಪ್ ಇಲ್ಲದ ಕಾರಣ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೇನೆ. ಈಗ ಆರಾಮವಾಗಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.