ಗಡಿ ವಿವಾದ: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಒತ್ತಾಯ
Team Udayavani, Nov 21, 2022, 9:30 PM IST
ಬೆಂಗಳೂರು: ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬೆಳಗಾವಿ ಗಡಿ ವಿವಾದದ ಬಗ್ಗೆ ನವೆಂಬರ್ 23ರಂದು ಸುಪ್ರೀಂಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸಿದ್ಧತೆ ನಡೆಸಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ.
ಆದ್ದರಿಂದ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ ಮುಖ್ಯಮಂತ್ರಿ ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಮಾಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.