ಮೈತ್ರಿ ಖತಂ ಮಾಡೋದೇ ಲೇಸು
ಮೈತ್ರಿಯಿಂದ ಕಾಂಗ್ರೆಸ್‌ಗೆ ನಷ್ಟ ಎಂದ ಸಿದ್ದರಾಮಯ್ಯ;ಕಾಂಗ್ರೆಸ್‌ಗೇ ಮುಖ್ಯಮಂತ್ರಿ ಪಟ್ಟ ಇರಲಿ
Team Udayavani, May 20, 2019, 6:00 AM IST
ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಉಳಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಪ್ರಯತ್ನಪಡುತ್ತಿರುವಂತೆಯೇ, ಜೆಡಿಎಸ್ ಜತೆಗಿನ ಮೈತ್ರಿ ಖತಂಗೊಳಿಸುವುದೇ ಉತ್ತಮ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದ ರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ಗೆ ತೀವ್ರ ನಷ್ಟವಾಗಲಿದೆ. ಮುಂದಿನ 4 ವರ್ಷ ಈ ಮೈತ್ರಿ ಸರ್ಕಾರ ಮುಂದುವರಿಕೆ ಬೇಡ. ಇಲ್ಲವೇ ಕಾಂಗ್ರೆಸ್ ಪಕ್ಷದವರು ಮುಖ್ಯಮಂತ್ರಿ ಆಗಲಿ ಎಂದು ಸಿದ್ದರಾಮಯ್ಯ ರಾಹುಲ್ ಮುಂದೆ ಪ್ರತಿಪಾದನೆ ಮಾಡಿದ್ದಾರೆ. ಜತೆಗೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಿಂದ ಹೆಚ್ಚು ಲಾಭ ನಿರೀಕ್ಷೆ ಮಾಡುವಂತಿಲ್ಲ ಎಂಬ ಅಭಿಪ್ರಾಯವನ್ನೂ ರಾಹುಲ್ ಬಳಿ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಆದರೆ, ಭಾನುವಾರ ದೆಹಲಿಗೆ ರಾಜ್ಯ ನಾಯಕರನ್ನು ಕರೆಯಿಸಿಕೊಂಡು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮೈತ್ರಿಗೆ ಧಕ್ಕೆಯಾಗದಂತೆ ಕಾಪಾಡಿಕೊಂಡು ಹೋಗಲು ಸೂಚಿಸಿದ್ದಾರೆ.
ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಲೋಕಸಭೆ ಚುನಾವಣೆಯ ಬೆಳವಣಿಗೆ ಹಾಗೂ ಎರಡು ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಎರಡೂ ಪಕ್ಷಗಳ ನಾಯಕರ ನಡುವಿನ ಮಾತಿನ ಗೊಂದಲದ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಸಭೆ ಫಲಿತಾಂಶದ ನಂತರ ವೂ ಮೈತ್ರಿ ಮುಂದುವರಿಯಬೇಕು. ಶಾಸಕರು ಚದುರದಂತೆ ನೋಡಿಕೊಳ್ಳಿ. ಏನೇ ಸಮಸ್ಯೆ ಇದ್ದರೂ ನಾನೇ ಖುದ್ದು ಗೌಡರು ಎಚ್ಡಿಕೆ ಜತೆಗೆ ಮಾತನಾಡುತ್ತೇನೆ ಎಂದು ರಾಹುಲ್ ಸೂಚನೆ ನಿಡಿದ್ದಾರೆ ಎಂದು ಗೊತ್ತಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಫಲಿತಾಂಶದ ನಂತರ ಅತೃಪ್ತ ಕಾಂಗ್ರೆಸ್ ನಾಯಕರು ಮೈತ್ರಿ ಸರ್ಕಾರವನ್ನು ಉರುಳಿಸಬಹುದು ಎಂದು ರಾಹುಲ್ ಬಳಿ ಆತಂಕ ವ್ಯಕ್ತಪಡಿಸಿರುವುದು ಈ ಸೂಚನೆಗೆ ಕಾರಣವಾಗಿದೆ.
ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ರಾಷ್ಟ್ರ ಮಟ್ಟದಲ್ಲಿ ಮೈತ್ರಿ ಬಲಗೊಳಿಸುವ ಕಸರತ್ತು ನಡೆಯುತ್ತಿರುವುದರಿಂದ ಕರ್ನಾಟಕದಲ್ಲಿ ಹಾಲಿ ಇರುವ ಮೈತ್ರಿಯಲ್ಲಿ ಗೊಂದಲ ಸಷ್ಟಿಸುವುದರಿಂದ ದೇಶಾದ್ಯಂತ ತಪ್ಪು ಸಂದೇಶ ರವಾನೆಯಾಗುತ್ತದೆ. ಇದರಿಂದ ಚುನಾವಣೆ ಫಲಿತಾಂಶದ ನಂತರ ರಾಷ್ಟ್ರ ರಾಜಕಾರಣದಲ್ಲಿ ನಡೆಯುವ ರಾಜಕೀಯ ಧ್ರುವೀ ಕರಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಬುದ್ದಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ಸಿದ್ದು ಟ್ವೀಟ್‌ಗೆ ಅಸಮಾಧಾನ: ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬದಲಾವಣೆಯ ಕುರಿತು ಮಾಡಿರುವ ಟ್ವೀಟ್ ಬಗ್ಗೆ ರಾಹುಲ್ ಗಾಂಧಿ ಗರಂ ಆಗಿದ್ದಾರೆ ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ತಮ್ಮ ನಡೆಯನ್ನು ಸಮ ರ್ಥಿಸಿಕೊಂಡಿದ್ದು, ಜೆಡಿಎಸ್‌ನವರು ಅನಗತ್ಯ ಗೊಂದಲ ಸೃಷ್ಟಿಸಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಆದರೆ, ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮೊದಲು ಈ ರೀತಿಯ ಹೇಳಿಕೆಗಳಿಂದ ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯ ಪ್ರಯತ್ನಕ್ಕೆ ಧಕ್ಕೆಯಾಗುತ್ತದೆ ಎಂದು ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ಹೇಳಿದ್ದಾರೆ ಎನ್ನಲಾಗುತ್ತಿದೆ.
ಪಕ್ಷ ಸಂಘಟನೆ ಚುರುಕುಗೊಳಿಸಲು ಸೂಚನೆ: ಲೋಕಸಭೆ ಚುನಾವಣೆ ಬಂದ ನಂತರ ಮೈತ್ರಿ ಸರ್ಕಾರದ ಆಡಳಿತ ಯಂತ್ರದ ಜೊತೆಗೆ ಪಕ್ಷ ಸಂಘಟ ನೆಯನ್ನು ಚುರುಕುಗೊಳಿಸಿ, ಅನಗತ್ಯ ಗೊಂದಲ ಗಳಿಗೆ ಬ್ರೇಕ್ ಹಾಕುವಂತೆ ರಾಹುಲ್ ಗಾಂಧಿ ತಾಕೀತು ಮಾಡಿದ್ದಾರೆ. ಮೇ 23 ರ ನಂತರ ಎರಡೂ ಪಕ್ಷಗಳ ನಾಯಕರು ಸಭೆ ಸೇರಿ ಗೊಂದಲಗಳಿಗೆ ತೆರೆ ಎಳೆದು, ಮಹತ್ವದ ಯೋಜನೆಗಳ ಅನುಷ್ಠಾನದ ಕಡೆಗೆ ಗಮನ ನೀಡುವಂತೆ ಸೂಚಿಸಿದ್ದಾರೆ.
ಪಕ್ಷದ ಸಂಘಟನೆ ದೃಷ್ಟಿಯಿಂದ ಗೊಂದಲಗಳಿಗೆ ಅವಕಾಶ ನೀಡದೇ ತಳ ಮಟ್ಟದಿಂದ ಪಕ್ಷವನ್ನು ಬಲಗೊಳಿಸಿ, ಯಾವುದೇ ನಾಯಕರಾದರೂ ಮೈತ್ರಿ ಸರ್ಕಾರದ ಬಗ್ಗೆ ಅನಗತ್ಯ ಹೇಳಿಕೆ ನೀಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ರಾಹುಲ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.