![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 23, 2020, 6:18 PM IST
ಬೆಂಗಳೂರು : ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಕ್ಯಾಸಿನೋ ಆಟ ಜಾರಿಗೆ ತರುತ್ತೇವೆ ಎಂದರೆ ಸರ್ಕಾರ ಜೂಜಾಟಕ್ಕೆ ಬೆಂಬಲ ನೀಡಿದಂತಾಗುತ್ತದೆ. ಜೂಜಾಟದ ಪರವಾಗಿ ಇದ್ದಂತೆ ಆಗುತ್ತೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಸವಕಲ್ಯಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಕ್ಯಾಶಿನೋ ಅದೊಂದು ಜೂಜು ಆಟ. ಶ್ರೀಲಂಕಾ, ಮಲೇಶಿಯಾ ಸೇರಿ ಹಲವು ರಾಷ್ಟ್ರಗಳಲ್ಲಿ ಈ ಆಟ ನಡೆಸಲಾಗುತ್ತದೆ. ಸಚಿವ ಸಿಟಿ ರವಿ ಆಗಾಗ ಕ್ಯಾಸಿನೋ ಆಡುತ್ತಿರಬೇಕು. ಅದಕ್ಕೆ ಹೀಗೆಲ್ಲಾ ಹೇಳೋದಕ್ಕೆ ಕಾರಣ ಇರಬಹುದು ಎಂದು ವ್ಯಂಗ್ಯವಾಡಿದರು.
ಹಸಿವು ಮುಕ್ತ ಕರ್ನಾಟಕ ಮಾಡುವ ಉದ್ದೇಶದಂತೆ ಅನ್ನಭಾಗ್ಯ ಮೂಲಕ ಉಚಿತ ೭ ಕೆ.ಜಿ ಅಕ್ಕಿಯನ್ನು ವಿತರಿಸುವ ಯೋಜನೆ ಜಾರಿಗೆ ತರಲಾಗಿದೆ. ಅಕ್ಕಿಯಲ್ಲಿ ಕಡಿತ ಮಾಡಿದರೆ ಅಥವಾ ಸ್ಥಗಿತಗೊಳಿಸಿದರೆ ಬಿಜೆಪಿ ಬಡವರ ವಿರೋಧಿ ಎನಿಸಿಕೊಳ್ಳಲಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಬಿಜೆಪಿ ಎಂದಿಗೂ ಶ್ರೀಮಂತರು, ಕೈಗಾರಿಕೋದ್ಯಮಗಳ ಪರವಾಗಿದೆ. ಕೆಳ ವರ್ಗದವರ ಕಲ್ಯಾಣದ ಬಗ್ಗೆ ಚಿಂತನೆ ಮಾಡುವುದುದಿಲ್ಲ ಎಂದು ಹೇಳಿದರು.
ದೇಶದಲ್ಲಿ ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಕಲ್ಪಿಸುವುದು ಸಂವಿಧಾನದ ಆಶಯ. ಅದನ್ನು ಬಿಟ್ಟು ಬೇರೆಯದನ್ನು ಮಾಡಿದರೆ ಸಂವಿಧಾನ ವಿರೋಧಿ ಆಗುತ್ತದೆ. ಪೌರತ್ವ ಕಾಯ್ದೆ ಸಂವಿಧಾನ ಬಾಹಿರವಾಗಿದೆ. ಈ ಕಾಯ್ದೆ ಕೇವಲ ಮುಸ್ಲಿಮರು ಮಾತ್ರವಲ್ಲ, ದಲಿತರು, ಆದಿವಾಸಿಗಳು ಮತ್ತು ಹಿಂದುಗಳಿಗೂ ವಿರೋಧಿ ಆಗಿದೆ. ಜಾತಿ- ಧರ್ಮಗಳನ್ನು ವಿಂಗಡಿಸಿ ಅದರ ಮೇಲೆ ಪೌರತ್ವ ಕೊಡಬೇಕೆಂಬುದು ಸಂವಿಧಾನ ಹೇಳಿಲ್ಲ ಎಂದು ತಿಳಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.