ಕೇಂದ್ರ-ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ “ಜೈಲ್‌ ಭರೋ ಚಳವಳಿ’: ಸಿದ್ದರಾಮಯ್ಯ

ಕಾಂಗ್ರೆಸ್‌ನಿಂದ ಕಿರು ಹೊತ್ತಿಗೆ ಬಿಡುಗಡೆ

Team Udayavani, Jan 10, 2021, 6:35 PM IST

ಕೇಂದ್ರ-ರಾಜ್ಯ ಸರ್ಕಾರದ ರೈತ ವಿರೋಧಿ ಕಾಯ್ದೆಗಳ ವಿರುದ್ಧ “ಜೈಲ್‌ ಭರೋ ಚಳವಳಿ’: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಅಸ್ತ್ರವಾಗಿಟುxಕೊಂಡು ಕಾಂಗ್ರೆಸ್‌ ಪಕ್ಷ ಬೀದಿಗಿಳಿದು ಹೋರಾಟ ನಡೆಸುವುದರ ಜೊತೆಗೆ “ಜೈಲ್‌ ಭರೋ’ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ, ಕರ್ನಾಟಕ ಭೂಸುಧಾರಣಾ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಸುಗ್ರಿವಾಜ್ಞೆ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಐದು ರೈತ ವಿರೋಧಿ ಕಾಯ್ದೆಗಳ ಹಿಂದಿನ ಸತ್ಯಾಸತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಹಿನ್ನೆಲೆಯಲ್ಲಿ ಹೊರ ತಂದಿರುವ ” ಬಿಜೆಪಿ ಸರ್ಕಾರಗಳ ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು’ ಕಿರು ಹೊತ್ತಿಗೆಯನ್ನು ಭಾನುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ರೈತ ವಿರೋಧಿ ಕಾಯ್ದೆಗಳ ಸತ್ಯಾಸತ್ಯತೆ ಜನರಿಗೆ ತಿಳಿಸುವ ವಿಚಾರಗಳನ್ನು ಒಳಗೊಂಡ ಕಿರು ಪುಸ್ತಕ ಬಿಡುಗಡೆ ಮಾಡಿದ್ದೇವೆ. ಜನರಿಗೆ ಸತ್ಯ ತಿಳಿಸುವುದು ನಮ್ಮ ಪ್ರಯತ್ನವಾಗಿದೆ.

ಇದಕ್ಕಾಗಿ ಬೀದಿಗಳಿದು ಕಾಂಗ್ರೆಸ್‌ ಪಕ್ಷ ಹೋರಾಟ ಮಾಡಲಿದೆ. ಜೊತೆಗೆ ಜೈಲ್‌ ಭರೋ ಚಳವಳಿ ಹಮ್ಮಿಕೊಳ್ಳಲಾಗುವುದು. ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೋರಾಟದ ರೋಪುರೇಷೆ ಸಿದ್ದಪಡಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ:ಒತ್ತಿನೆಣೆ ಹೆದ್ದಾರಿಯಲ್ಲಿ ಲಾರಿ ಉರುಳಿ ಕಾರಿಗೆ ಡಿಕ್ಕಿ, ಲಾರಿ ಚಾಲಕ ಸಾವು

ಎ.ಪಿ.ಎಂ.ಸಿ ಕಾಯ್ದೆಗಳ ಬಗ್ಗೆ ಬಿಜೆಪಿಯವರು ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ರೈತರು ತಮ್ಮ ಬೆಳೆಗಳನ್ನು ಎ.ಪಿ.ಎಂ.ಸಿ ಮಾರುಕಟ್ಟೆಗೆ ಬಂದು ಮಾರಾಟ ಮಾಡುವ ಅಗತ್ಯವಿಲ್ಲ. ಅದನ್ನು ಯಾರಿಗೆ ಬೇಕಾದರೂ ಮಾರಬಹುದು ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂಬುದು ಬಿಜೆಪಿಯವರ ವಾದ. ಆದರೆ, ತಿದ್ದುಪಡಿಯಿಂದ ಖಾಸಗಿ ವ್ಯಕ್ತಿಗಳಿಗೆ ತಮ್ಮದೆ ಮಾರುಕಟ್ಟೆಗಳನ್ನು ಸ್ಥಾಪಿಸಿಕೊಳ್ಳಲು ಅವಕಾಶ ಸಿಗುತ್ತದೆ. ಇದರಿಂದ ಎಪಿಎಂಸಿಗಳು ಮುಚ್ಚಿ, ಕನಿಷ್ಟ ಬೆಂಬಲ ಬೆಲೆ ಇಲ್ಲದಂತಾಗಲಿದೆ. ಇದಕ್ಕಾಗಿಯೇ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಬಗ್ಗೆ ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಕಾಯ್ದೆ ಜಾರಿಯಿಂದ ಯಾರು ಬೇಕಾದರೂ ಕೃಷಿ ಮಾಡಬಹುದು, ನಿರುದ್ಯೋಗಿ ಯುವಕ ಯುವತಿಯರಿಗೆ ಕೃಷಿ ಮಾಡಲು ಈ ತಿದ್ದುಪಡಿ ಅವಕಾಶ ನೀಡುತ್ತೆ ಎಂದು ಸರ್ಕಾರ ಹೇಳುತ್ತಿದೆ. ದೇವರಾಜ ಅರಸು ಅವರು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಉಳುವವನೇ ಭೂಮಿಯ ಒಡೆಯ ಎಂದು ಘೋಷಿಸಿದರು. ಈಗ ಸರ್ಕಾರ 79(ಎ). (ಬಿ), (ಸಿ) ನಿಯಮಗಳನ್ನು ರದ್ದುಮಾಡಿ ಯಾರು ಬೇಕಾದರೂ ಭೂಮಿಯನ್ನು ಖರೀದಿಸಲು ಅವಕಾಶ ಮಾಡಿಕೊಟ್ಟಿದೆ. ಸರ್ಕಾರ ತಿದ್ದುಪಡಿ ಮೂಲಕ ಉಳ್ಳವನನ್ನು ಭೂಮಿಯ ಒಡೆಯ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಇದನ್ನೂ ಓದಿ:ಎರಡೇ ವರ್ಷದಲ್ಲಿ ಕಿತ್ತು ಹೋದ ಬೊಮ್ಮನಹಳ್ಳಿ ಮಾರ್ಗ ರಸ್ತೆ

ಅಗತ್ಯ ವಸ್ತುಗಳ ಕಾಯ್ದೆಯಿಂದ ಕೆಲವು ವಸ್ತುಗಳನ್ನು ತೆಗೆದುಹಾಕಲಾಗಿದೆ. ಕಾಯ್ದೆಯು ಅಕ್ರಮ ದಸ್ತಾನುಗಳ ಮೇಲೆ ದಾಳಿ ಮಾಡಿ, ಅಕ್ರಮ ಬಯಲಿಗೆಳೆಯಲು ಅವಕಾಶವಿಲ್ಲವಾಗಿದೆ, ಇದರಿಂದ ಕೃತಕ ಅಭಾವ ಸೃಷ್ಟಿ ಮಾಡಿ ಮಾರುಕಟ್ಟೆಯಲ್ಲಿ ಆ ವಸ್ತುವಿನ ಬೆಲೆ ಏರಿದ ನಂತರ ಮಾರುಕಟ್ಟೆಗೆ ಬಿಡುತ್ತಾರೆ. ಇಂತಹ ಕಾಯ್ದೆ ಜಾರಿಗೆ ತರುವ ಅಗತ್ಯವೇನಿದೆ? ಅದೂ ಅಲ್ಲದೆ ಇವುಗಳ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ, ತುರ್ತು ಸಂದರ್ಭದಲ್ಲಿ ಸುಗ್ರೀವಾಜ್ಞೆ ಹೊರಡಿಸುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ದತಿ. ಈ ಮೇಲಿನ ತಿದ್ದುಪಡಿಗಳಿಗೆ ಸುಗ್ರೀವಾಜ್ಞೆ ತರುವಂತಹ ತುರ್ತು ಏನಿತ್ತು? ಸರ್ಕಾರ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ವಾಗ್ಧಾಳಿ ನಡೆಸಿದರು.

ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ-1964ರಲ್ಲಿ ಜಾನುವಾರಗಳ ರಕ್ಷಣೆಗಾಗಿ ಹಾಲು ನೀಡುವಂತಹ ಪ್ರಾಣಿಗಳ ವಧೆ ಮಾಡಬಾರದು ಮತ್ತು ಪ್ರಾಯದ ಜಾನುವಾರುಗಳನ್ನು ಹತ್ಯೆ ಮಾಡುವಂತಿಲ್ಲ ಎಂದು ನಿರ್ಬಂಧಿಸಲಾಗಿದೆ. ಒಂದು ಜೊತೆ ಎತ್ತಿಗೆ ಕನಿಷ್ಠ 2 ಲಕ್ಷ ರೂಪಾಯಿಯಿದೆ. ಅವುಗಳಿಗೆ ವಯಸ್ಸಾದ ಮೇಲೆ ಅವನ್ನು ಸಾಕಲು 7 ಕೆ.ಜಿ ಮೇವು ಬೇಕು ಮತ್ತು 100 ರೂಪಾಯಿ ಖರ್ಚಾಗುತ್ತದೆ. ಇದರ ಬಗ್ಗೆ ಬಿಜೆಪಿ ನಾಯಕರಿಗೆ ಅರಿವಿಲ್ಲ. ಬಿಜೆಪಿಯವರು ಯಾರೂ ಸಗಣಿ ಎತ್ತಿಲ್ಲ, ಗಂಜಲ ತೆಗೆದಿಲ್ಲ, ಬೆರಣಿ ತಟ್ಟಿಲ್ಲ, ಹಸುಗಳನ್ನು ಸಾಕಿದ ಅಭ್ಯಾಸವಿಲ್ಲ ಅದಕ್ಕಾಗಿಯೇ ಈ ರೀತಿ ಮಾತನಾಡುತ್ತಾರೆ. ಈಗ ಗೋಹತ್ಯೆ ಬಗ್ಗೆ ಮಾತನಾಡುವವರಾರು ಜಾನುವಾರುಗಳನ್ನು ನಮ್ಮಂತೆ ಪೂಜೆ ಮಾಡಿದವರಲ್ಲ, ಇಂಥವರು ನಮಗೆ ಗೋಮಾತೆ ಬಗ್ಗೆ ಪಾಠ ಮಾಡುತ್ತಾರೆ ಎಂದರು.

ಇದನ್ನೂ ಓದಿ:ಲಸಿಕೆ ಸಂಗ್ರಹಕ್ಕೆ ಸಂಪೂರ್ಣ ಸಿದ್ದತೆ : ಮೊದಲ ಹಂತದಲ್ಲಿ 13.90 ಲಕ್ಷ ಡೋಸ್ ಲಸಿಕೆ

ಪ್ರಧಾನಿ ಮೋದಿಯವರು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಬಗ್ಗೆ ಮಾತನಾಡುವುದಿಲ್ಲ. ಗ್ಯಾಸ್‌ ಬೆಲೆ ರೂ.750 ಕ್ಕೆ ಏರಿಕೆಯಾಗಿದೆ, ಮೋದಿಯವರು ಅಧಿಕಾರಕ್ಕೆ ಬಂದಾಗ ಗ್ಯಾಸ್‌ ಬೆಲೆ ರೂ.300 ರಿಂದ ರೂ.350 ಇತ್ತು. 2012-13ರ ಸಂದರ್ಭದಲ್ಲಿ ವಿಶ್ವಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ ಒಂದಕ್ಕೆ 110 ಡಾಲರ್‌ ಇತ್ತು. ಆಗ ಯುಪಿಎ ಸರ್ಕಾರ ಪೆಟ್ರೋಲ್‌ ಅನ್ನು 60-65 ರೂಪಾಯಿಗೆ ಮಾರಾಟ ಮಾಡುತ್ತಿತ್ತು. ಈಗ ಕಚ್ಚಾತೈಲ ಬೆಲೆ ಬ್ಯಾರಲ್‌ ಗೆ 42 ಡಾಲರ್‌ ಇದೆ, ಈಗಿನ ತೈಲ ಬೆಲೆಯ ಅರ್ಧ ಕ್ಕೆ ಅಂದರೆ ಪೆಟ್ರೋಲ್‌ 40 ರೂಪಾಯಿಗೆ, ಡೀಸೆಲ್‌ ಅನ್ನು 30 ರಾಪಾಯಿಗೆ ಮಾರಾಟ ಮಾಡಬೇಕು. ಮೋದಿಯವರು ಮಾತೆತ್ತಿದರೆ ಸಬ್‌ ಕ ಸಾಥ್‌ ಸಬ್‌ ಕ ವಿಕಾಸ್‌ ಅನ್ನುತ್ತಾರೆ, ಇವರ ಆಡಳಿತದಿಂದ ಸಾಮಾನ್ಯ ಜನರ ವಿಕಾಸವಂತೂ ಆಗಿಲ್ಲ. ‘
– ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ.

ಟಾಪ್ ನ್ಯೂಸ್

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.