ಆಂತರಿಕ ಕಚ್ಚಾಟದಿಂದ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ಧ : ಸಿದ್ದರಾಮಯ್ಯ
Team Udayavani, Oct 20, 2020, 2:47 PM IST
ಬಾಗಲಕೋಟೆ: ಬಿಜೆಪಿ ಸರ್ಕಾರ ಬಿದ್ದೋದ್ರೆ ನಾವು ಚುನಾವಣೆ ಎದುರಿಸಲು ಸಿದ್ಧ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನ ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ. ಯಡಿಯೂರಪ್ಪನವರನ್ನು ತೆಗೆಯಬೇಕೆಂದು ಬಹಳ ದೊಡ್ಡ ಚರ್ಚೆ ನಡೆದಿದೆ. ನಾವಂತೂ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಒಂದು ವೇಳೆ ಅವರ ತಿಕ್ಕಾಟದಿಂದಲೇ ಸರ್ಕಾರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುವ ಚಚೆ೯ ನಡೆಯುತ್ತಿರುವುದು ನಿಜ. ಆದರೆ ಯಾವಾಗ ಇಳಿಸ್ತಾರೆ, ಯಾರು ಸಿಎಂ ಆಗ್ತಾರೆ ಅಂತ ನನಗೆ ಗೊತ್ತಿಲ್ಲ, ಚಚೆ೯ಯಂತೂ ನಡೀತಾ ಇದೆ ಎಂದರು.
ಇನ್ನು, ಉತ್ತರ ಕನಾ೯ಟಕದವರೇ ಸಿಎಂ ಆಗ್ತಾರೆ ಎನ್ನುವ ಯತ್ನಾಳ ಹೇಳಿಕೆಗೆ, ಅದು ಅವರ ಪಕ್ಷದ ವಿಚಾರ, ನಾನೇಕೆ ಮಾತನಾಡಲಿ, ಯಡಿಯೂರಪ್ಪನವರೆ ಮಾತನಾಡಲಿ ಎಂದು ಹೇಳಿದರು.
ಇದನ್ನೂ ಓದಿ:ಆಸ್ತಿಯಾಗುವವರನ್ನು ಮಾತ್ರ ಸೇರ್ಪಡೆ, ಹೊರೆಯಾಗುವವರಲ್ಲ:ಎಂಬಿಪಿ, ಕುಲಕರ್ಣಿಗೆ CT ರವಿ ಟಾಂಗ್
ಸಿಎಂ, ಯತ್ನಾಳ ಕ್ಷೇತ್ರದ ಅನುದಾನ ಕಡಿತದ ಬಗ್ಗೆ ಅಸಮಾಧಾನ ತೋರಿದ ವಿಚಾರವಾಗಿ ಮಾತನಾಡಿದ ಅವರು ನಾವು ಸತ್ಯ ಹೇಳ್ತಿದ್ವಿ, ಪಾಪ ಅವರಿಗೂ ಬಿಸಿ ಮುಟ್ಟಿದೆ. ಈಗ ಅವರು ಕೂಡ ಸತ್ಯ ಹೇಳೋಕೆ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ, ನನ್ನ ಕಣ್ಣೀರಿಗೆ ಕಾಂಗ್ರೆಸ್ ಕಾರಣವೆಂದ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಲೇವಡಿ ಮಾಡಿದರು. ಕುಣಿಯಲಾರದವರು ನೆಲ ಡೊಂಕು ಅಂತಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಲಿಕ್ಕೆ ಆಗದೇ ಇರೋರು ಈ ತರ ಹೇಳ್ತಾ ತಿರುಗುತ್ತಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡಲು ಹೋಗೋದಿಲ್ಲ. ನಾನು ಹಿಂದೆ ಅನೇಕ ಸಾರಿ ಹೇಳಿದ್ದೇನೆ.. ಅವರು ಈಗ ಮತ್ತೆ ಮತ್ತೆ ಪ್ರಸ್ತಾಪ ಮಾಡ್ತಿದ್ದಾರೆ ಎಂದರು.
ಉಪ ಚುನಾವಣೆಯಲ್ಲಿ ನಾವು ಎರಡು ಕ್ಷೇತ್ರ ಗೆದ್ದಾಗಿದೆ, ರಿಸಲ್ಟ್ ಒಂದೇ ಬಾಕಿ ಎಂದ ಯಡಿಯೂರಪ್ಪ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆ ಎರಡು ಕ್ಷೇತ್ರಗಳೇನು ಸಿಎಂ ಜೇಬಿನಲ್ಲಿದ್ದಾವಾ..? ಎಂದು ಹೇಳುವ ಮೂಲಕ ಸಿಎಂ ಬಿಎಸ್ವೈಗೆ ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.