ಸಿದ್ದು , ಎಚ್ಡಿಕೆ ಭದ್ರತೆ ವಾಪಸ್
Team Udayavani, Mar 17, 2020, 6:45 AM IST
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಪೈಲಟ್ ವಾಹನ ಸೇವೆಯನ್ನು ರಾಜ್ಯ ಸರಕಾರ ವಾಪಸ್ ಪಡೆದುಕೊಂಡಿದ್ದು, ಕೇವಲ ಎಸ್ಕಾರ್ಟ್ ಮಾತ್ರ ಮುಂದುವರಿಸಿದೆ.
ಸರಕಾರದ ಈ ನಿರ್ಧಾರವನ್ನು ವಿರೋಧಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ತನಗೆ ಝಡ್ ಶ್ರೇಣಿಯ ಭದ್ರತೆ ಮುಂದುವರಿಸು ವಂತೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಯಾವ ಕಾರಣಕ್ಕೆ ಭದ್ರತೆ ವಾಪಸ್ ಪಡೆಯಲಾಗಿದೆ ಎಂಬ ಬಗ್ಗೆ ಗೃಹ ಸಚಿವರಾಗಲಿ, ನಗರ ಪೊಲೀಸ್ ಆಯುಕ್ತರಾಗಲಿ ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಜತೆಗೆ
ಇತ್ತೀಚೆಗಷ್ಟೇ ಝಡ್ ಪ್ಲಸ್ ಭದ್ರತೆ ಇದ್ದದ್ದನ್ನು ಝಡ್ಗೆ ಇಳಿಸಲಾಗಿತ್ತು. ಅನಂತರ ಎಸ್ಕಾರ್ಟ್ ಸೇವೆಗೆ ಒದಗಿಸ ಲಾಗಿದ್ದ ಇನ್ನೋವಾ ಕ್ರಿಸ್ಟಾ ವಾಹನವನ್ನು ವಾಪಸ್ ಪಡೆದು 2.61 ಲಕ್ಷ ಕಿ.ಮೀ. ಸಂಚರಿಸಿರುವ ಸ್ಕಾರ್ಪಿಯೋ ವಾಹನ ನೀಡಲಾಗಿದೆ. ಅದು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿವಿಐಪಿ ಭದ್ರತೆಯ ದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿಗಳಿಗೆ, ವಿಪಕ್ಷ ನಾಯಕರಿಗೆ ಪೈಲಟ್ ಮತ್ತು ಎಸ್ಕಾರ್ಟ್ ಸೇವೆ ನೀಡಲಾಗುತ್ತದೆ. ಆದರೆ ಯಾವುದೇ ಕಾರಣ ನೀಡದೆ ಸಿದ್ದರಾಮಯ್ಯ ಮತ್ತು ಎಚ್ಡಿಕೆ ಅವರ ಪೈಲಟ್ ವಾಹನಗಳನ್ನು ಸೋಮ ವಾರ ಬೆಳಗ್ಗಿನಿಂದ ವಾಪಸ್ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.