ಸಿದ್ದರಾಮಯ್ಯಗೆ ಪರಮಾಧಿಕಾರ
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಜವಾಬ್ದಾರಿ
Team Udayavani, Oct 17, 2019, 6:00 AM IST
ಬೆಂಗಳೂರು: ಅನರ್ಹ ಶಾಸಕರ ರಾಜೀನಾಮೆಯಿಂದ ತೆರವಾಗಿರುವ 15 ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಪೂರ್ಣ ಅಧಿಕಾರ ನೀಡಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರ ಹಿಡಿತ ಮತ್ತೆ ಬಲಗೊಳ್ಳುತ್ತಿದೆ.
ಜತೆಗೆ ಸಿದ್ದರಾಮಯ್ಯ ಅವರ ನಿಕಟವರ್ತಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಅವರನ್ನೂ ಬದಲಿಸುವ ಸಾಧ್ಯತೆ ಕಡಿಮೆಯಾಗಿದೆ. ಆ ಮೂಲಕ ಸಿದ್ದರಾಮಯ್ಯ, ದಿನೇಶ್ ಬದಲಾವಣೆಗೆ “ಹಿರಿಯರು’ ಹೇರಿದ್ದ ಒತ್ತಡಕ್ಕೆ ಜಯ ಸಿಕ್ಕಿಲ್ಲ ಎಂದು ಪಕ್ಷದೊಳಗೆ ವ್ಯಾಖ್ಯಾನಿಸಲಾಗಿದೆ.
ಕಾಂಗ್ರೆಸ್‌ನಲ್ಲಿ 2013-18ರ ವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿ, ಮೈತ್ರಿ ಸರಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ತಮ್ಮದೇ ಆದ ಹಿಂಬಾಲಕರ ಪಡೆ ಕಟ್ಟಿ ಕೊಂಡಿದ್ದ ಸಿದ್ದರಾಮಯ್ಯ, ಮೈತ್ರಿ ಸರಕಾರ ಪತನ ಗೊಂಡು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷ ನಾಯಕನ ಸ್ಥಾನ ಪಡೆಯಲು ಸಾಕಷ್ಟು ಕಸರತ್ತು ಮಾಡ ಬೇಕಾಯಿತು. ಮೂಲ ಕಾಂಗ್ರೆಸಿಗರ ವಿರೋಧದಿಂದ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನು ತೆರೆಗೆ ಸರಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಅಧ್ಯಕ್ಷರ ಬದಲಾವಣೆಯೂ ಅನುಮಾನ
ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗಿನಿಂದಲೂ ಪಕ್ಷದ ಮೇಲೂ ಹಿಡಿತ ಸಾಧಿಸುತ್ತ ಬಂದಿದ್ದು, ದಿನೇಶ್ ಗುಂಡೂರಾವ್ ಅಧ್ಯಕ್ಷರಾದ ಮೇಲೆ ಎಲ್ಲವನ್ನೂ ತಮ್ಮ ಸೂಚನೆಯಂತೆಯೇ ನಡೆಯುವಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮೂಲ ಕಾಂಗ್ರೆಸಿಗರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಎದುರು ಆರೋಪ ಮಾಡಿದ್ದರು. ಅಲ್ಲದೆ ದಿನೇಶ್ ಗುಂಡೂ ರಾವ್ ಅವರನ್ನು ಬದಲಾಯಿಸುವಂತೆಯೂ ಸಲಹೆ ನೀಡಿದ್ದರು. ಆದರೆ ಉಪ ಚುನಾವಣೆ ಘೋಷಣೆ ಆಗಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ಅಧ್ಯಕ್ಷರ ಬದಲಾವಣೆ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.