ಮತ್ತೆ ಸಿದ್ದು ಸಿಎಂ ಕೂಗು : ಕಾಂಗ್ರೆಸ್-ಜೆಡಿಎಸ್‌ನಲ್ಲಿ ಸಂಚಲನ ಮೂಡಿಸಿದ ಹೇಳಿಕೆ
Team Udayavani, May 8, 2019, 6:06 AM IST
ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ ನಡೆಯಲಿದೆ ಎಂಬ ಮಾತುಗಳ ನಡುವೆಯೇ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಕಾಂಗ್ರೆಸ್‌ನಲ್ಲಿ ಕೇಳಿಬರುತ್ತಿದೆ.
ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್ ಅವರು ಸಿದ್ದರಾಮಯ್ಯ ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದ ಬೆನ್ನಲ್ಲೇ ಸಚಿವ ಎಂ.ಬಿ. ಪಾಟೀಲ್ ಸಹ ಸಿದ್ದರಾಮಯ್ಯ ಪರ ಬ್ಯಾಟಿಂಗ್ ನಡೆಸಿದ್ದು, ಅವರು ಮತ್ತೆ ಮುಖ್ಯಮಂತ್ರಿಯಾಗಲಿ. ಅದರಲ್ಲಿ ತಪ್ಪೇನು ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ನಾನೂ ಮುಖ್ಯಮಂತ್ರಿ ಆಕಾಂಕ್ಷಿಯೇ. ಆದರೆ ಸಿದ್ದರಾಮಯ್ಯ ಅವರಿಗೆ ಮತ್ತೂಮ್ಮೆ ಮುಖ್ಯಮಂತ್ರಿಯಾಗುವ ಅರ್ಹತೆಯಿದೆ. ಅವರು ಮುಖ್ಯಮಂತ್ರಿಯಾಗುವುದಾದರೆ ನಾನು ಬೇಕಾದರೆ ಕಾಯುತ್ತೇನೆ ಎಂದು ತಿಳಿಸಿದ್ದಾರೆ.
ಜೆಡಿಎಸ್‌ಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿರುವುದರಿಂದ ನಾಲ್ಕು ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿ. ಏನಾದರೂ ಬದಲಾವಣೆ ಇದ್ದರೆ ದೇವೇಗೌಡ ಮತ್ತು ರಾಹುಲ್ ಗಾಂಧಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಅಪ್ರಸ್ತುತ ವಿಷಯ
ಮತ್ತೂಂದೆಡೆ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಈಗ ಅಪ್ರಸ್ತುತ. ಶಾಸಕರ ಅಭಿಪ್ರಾಯ ಪಡೆದು ವರಿಷ್ಠರು ಆ ಬಗ್ಗೆ ಅನಿವಾರ್ಯ ಆದರೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕರು ಪದೇ ಪದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಎಂಬ ಹೇಳಿಕೆ ನೀಡದಂತೆ ಪಕ್ಷದ ವತಿಯಿಂದ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಮೌನ ವಹಿಸಿದ್ದಾರೆ. ಆದರೂ ಇದು ಮೈತ್ರಿ ಸರಕಾರದಲ್ಲಿ ನಾನಾ ರೀತಿಯ ವಿಶ್ಲೇಷಣೆಗಳಿಗೆ ಎಡೆಮಾಡಿದೆ ಎಂಬ ಅನುಮಾನ ಮೂಡಿಸಿದೆ.
ವಿಧಾನಸಭೆಗೆ ಚುನಾವಣೆ ಗುಸು ಗುಸು
ಲೋಕಸಭೆ ಚುನಾವಣೆ ಫಲಿತಾಂಶದ ಅನಂತರ ರಾಜ್ಯದಲ್ಲಿ ವಿಧಾನಸಭೆಗೆ ಹೊಸದಾಗಿ ಚುನಾವಣೆ ನಡೆಯಬಹುದು ಎಂಬ ಗುಸು ಗುಸು ವಿಧಾನ ಸೌಧದಲ್ಲಿ ಕೇಳಿಬರುತ್ತಿದೆ.
ಕೇಂದ್ರದಲ್ಲಿ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಅಥವಾ ಪ್ರಾದೇಶಿಕ ಪಕ್ಷಗಳ ನೇತೃತ್ವದ ಸರಕಾರ ರಚನೆಯಾದರೆ ರಾಜ್ಯದಲ್ಲಿ ವಿಧಾನಸಭೆ ವಿಸರ್ಜಿಸಿ ಹೊಸದಾಗಿ ಚುನಾವಣೆಗೆ ಹೋಗುವ ಸಾಧ್ಯತೆಯಿದೆ. ಕಾಂಗ್ರೆಸ್ ಕಡೆಯಿಂದಲೇ ಆ ಬೇಡಿಕೆ ಕೇಳಿಬರಬಹುದು. ಕಾಂಗ್ರೆಸ್ ಪಕ್ಷಕ್ಕೆ 13ರಿಂದ 15 ಸ್ಥಾನಗಳು ಬಂದರೆ ಹೊಸದಾಗಿ ಚುನಾವಣೆಗೆ ಹೋಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ನಮ್ಮ ನಾಯಕರು ಎಂದ ಡಿಕೆಶಿ
ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಸೇರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮುಗಿಸಲಿದ್ದಾರೆ ಎಂಬ ಬಿಜೆಪಿ ನಾಯಕ ಬಸವರಾಜ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮಾಸ್ ಲೀಡರ್. ಅವರು ಯಾವತ್ತಿಗೂ ಲೀಡರ್ರೆà. ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಮತ್ತೂಂದೆಡೆ ಡಿ.ಕೆ.ಶಿವ ಕುಮಾರ್ ಮಾತನಾಡಿ, ಸಿದ್ದ ರಾಮಯ್ಯ ನಮ್ಮ ನಾಯಕರು. ಪ್ರತಿನಿತ್ಯ ನಾವು ಅವರ ಕೈ ಬಲಪಡಿಸುವ ಕೆಲಸವನ್ನೇ ಮಾಡುತ್ತಿದ್ದೇವೆ. ಅವರನ್ನು ಮೂಲೆಗುಂಪು ಮಾಡುವುದು ಸಾಧ್ಯವೇ ಇಲ್ಲ ಎಂದು ತಿಳಿಸಿದ್ದಾರೆ.
ಪ್ರಚಾರಕ್ಕೆ ಕೈಕೊಟ್ಟ ಶಾಸಕರ ವಿರುದ್ಧ ವೇಣು ಗರಂ
ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭೆ ಉಪ ಚುನಾವಣ ಪ್ರಚಾರಕ್ಕೆ ಹೋಗದೆ ಕೈಕೊಟ್ಟಿ ರುವ ಕಾಂಗ್ರೆಸ್ ಶಾಸಕರ ವಿರುದ್ಧ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಗರಂ ಆಗಿದ್ದಾರೆ.
ಈ ಎರಡೂ ಕ್ಷೇತ್ರಗಳನ್ನು ಗೆಲ್ಲುವ ಸಲುವಾಗಿ ಹಾಲಿ ಸಚಿವರು, ಮಾಜಿ ಸಚಿವರ ಜತೆಗೆ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳಿಗೆ ಹೋಬಳಿವಾರು ಹೊಣೆಗಾರಿಕೆ ನೀಡಲಾಗಿತ್ತು. ಆದರೆ ಪ್ರಮುಖ ನಾಯಕರನ್ನು ಹೊರತು ಪಡಿಸಿ ಶಾಸಕರು ಪ್ರಚಾರಕ್ಕೆ ಹೋಗಿಲ್ಲ. ಹೊಣೆಗಾರಿಕೆ ನಿಭಾಯಿಸದವರ ಬಗ್ಗೆ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಜೆಡಿಎಸ್ ನಾಯಕರ ಗೈರು
ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕದೆ ಕಾಂಗ್ರೆಸ್ ಅಭ್ಯರ್ಥಿ ಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರೂ ಆ ಪಕ್ಷದ ನಾಯಕರು ಪ್ರಚಾರಕ್ಕೆ ಬರುತ್ತಿಲ್ಲ. ಕೋನರೆಡ್ಡಿ, ಬಸವರಾಜ ಹೊರಟ್ಟಿ ಹೊರತುಪಡಿಸಿದರೆ ಬೇರೆ ನಾಯಕರು ಪ್ರಚಾರದಲ್ಲಿ ಭಾಗ ವಹಿಸು ತ್ತಿಲ್ಲ. ಕೇವಲ ಕಾಂಗ್ರೆಸ್ ನಾಯಕರು ಮಾತ್ರ ಪಾಲ್ಗೊ ಳ್ಳುತ್ತಿದ್ದಾರೆ. ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಚಿಂತೆ
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಯಾಗ ಬೇಕು ಎಂಬ ಕಾಂಗ್ರೆಸ್ ಶಾಸಕರು ಮತ್ತು ಸಚಿವರ ಹೇಳಿಕೆಗಳು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಗೆ ತಲೆನೋವು ತಂದಿದೆ. ಸಮ್ಮಿಶ್ರ ಸರಕಾರ ರಚನೆ ಯಾದಾಗಿನಿಂದ ಆಗಾಗ್ಗೆ ಸರಕಾರ ಪತನಗೊಳ್ಳಲಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಅಧಿಕಾರಿ ವಲಯದಲ್ಲಿ ಈ ಸರಕಾರ ಸ್ಥಿರವಲ್ಲ ಎಂಬ ಭಾವನೆ ಮೂಡಿ ಕೆಲಸ-ಕಾರ್ಯಗಳು ಆಗುತ್ತಿಲ್ಲ. ಆಡಳಿತ ಯಂತ್ರವೂ ಚುರುಕಾಗಿಲ್ಲ. ಈಗ ಲೋಕಸಭೆ ಚುನಾವಣೆ ಮತದಾನ ಮುಗಿಯುತ್ತಿದ್ದಂತೆ ಸೋಲು-ಗೆಲುವಿನ ಲೆಕ್ಕಾಚಾರದ ಜತೆಗೆ ಫಲಿತಾಂಶದ ಆಧಾರದಲ್ಲಿ ಸರಕಾರ ಇರುತ್ತಾ? ಪತನವಾಗುತ್ತಾ? ಎಂಬ ಪ್ರಶ್ನೆಯ ಜತೆಗೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಒತ್ತಾಯ ಜೆಡಿಎಸ್‌ಗೆ ಇರಿಸು ಮುರಿಸು ತಂದಿದೆ.
ಒಂದೆಡೆ ಬಿಜೆಪಿಯವರು ಆಪರೇಷನ್ ಕಮಲ ಮೂಲಕ ಸರಕಾರ ಉರುಳಿಸಲು ಕಾರ್ಯತಂತ್ರ ರೂಪಿಸಿದ್ದರೆ, ಮತ್ತೂಂದೆಡೆ ಮಿತ್ರ ಪಕ್ಷ ಕಾಂಗ್ರೆಸ್ ನಾಯಕರೇ
ಕುಮಾರ ಸ್ವಾಮಿ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸದೆ ಪದೇ ಪದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಿರುವುದಕ್ಕೆ ಜೆಡಿಎಸ್ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.