Singham: ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ “ಸಿಂಗಂ” ನಟ ಹೃದಯಾಘಾತದಿಂದ ಮೃತ್ಯು
Team Udayavani, Dec 13, 2023, 12:07 PM IST
ಮುಂಬೈ: ಬಾಲಿವುಡ್ ನ ಸಿಂಗಂ ಸೇರಿದಂತೆ ಹಲವಾರು ಹಿಂದಿ ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ರವೀಂದ್ರ ಬೆರ್ಡೆ (78ವರ್ಷ) ಬುಧವಾರ (ಡಿಸೆಂಬರ್ 13) ಹೃದಯಾಘಾತದಿಂದ ನಿಧನರಾಗಿರುವುದಾಗಿ ವರದಿ ತಿಳಿಸಿದೆ.
ಮುಂಬೈನ ಆಸ್ಪತ್ರೆಯಲ್ಲಿ ಗಂಟಲು ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ನಟ ಬೆರ್ಡೆ ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದರು ಎಂದು ಕುಟುಂಬದ ಮೂಲಗಳು ಹೇಳಿವೆ. ರವೀಂದ್ರ ಬಿರ್ಡೆ ಹಿರಿಯ ನಟ ದಿ.ಲಕ್ಷ್ಮಿಕಾಂತ್ ಬೆರ್ಡೆ ಅವರ ಸಹೋದರ.
ವರದಿಯ ಪ್ರಕಾರ, ಕೆಲವು ತಿಂಗಳ ಹಿಂದೆ ಬೆರ್ಡೆ ಅವರಿಗೆ ಗಂಟಲು ಕ್ಯಾನ್ಸರ್ ಆಗಿರುವುದು ಪತ್ತೆಯಾಗಿತ್ತು. ನಂತರ ಮುಂಬೈನ ಟಾಟಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಅವರು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದರು. ಆದರೆ ಬುಧವಾರ ದಿಢೀರನೆ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿರುವುದಾಗಿ ತಿಳಿಸಿದೆ.
ರವೀಂದ್ರ ಬೆರ್ಡೆ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ. ಇಂದು ಮುಂಬೈನಲ್ಲಿ ಬೆರ್ಡೆ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.