![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Sep 28, 2024, 1:45 PM IST
ಬೆಂಗಳೂರು: ಅತ್ಯಾ*ಚಾರ, ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್ ಐಟಿ ಅಧಿಕಾರಿಗಳು ಶನಿವಾರ(ಸೆ.28) ದಿಢೀರ್ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.
ವೈಯಾಲಿಕಾವಲ್ ನಲ್ಲಿರುವ ಮುನಿರತ್ನ ಅವರ ಮನೆ ಹಾಗೂ ಕಚೇರಿ ಸೇರಿದಂತೆ 12ಕ್ಕೂ ಅಧಿಕ ಸ್ಥಳಗಳಲ್ಲಿ ಎಸಿಪಿ ಕವಿತಾ ನೇತೃತ್ವದ ಎಸ್ ಐಟಿ ( SIT) ತಂಡ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಮುನಿರತ್ನ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕಲೆ ಹಾಕುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಇತ್ತೀಚೆಗಷ್ಟೇ ಗುತ್ತಿಗೆದಾರ ಚಲುವರಾಜು ಎಂಬವರು ತನ್ನ ಮೇಲೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿದ್ದ ಪ್ರಕರಣದಲ್ಲಿ ಮುನಿರತ್ನ ಬಂಧನಕ್ಕೊಳಗಾಗಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾ*ಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಿದ್ದರು. ಬಳಿಕ ಬಿಡುಗಡೆಗೊಂಡಿದ್ದ ಮುನಿರತ್ನ ಅವರನ್ನು ಪೊಲೀಸರು ಈ ಪ್ರಕರಣದಲ್ಲಿ ಬಂಧಿಸಿದ್ದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.